ಕಳಪೆ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಿ
ಮುಲಾಜಿಲ್ಲದೇ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮುಂದಾಗಬೇಕೆಂದು ತಾಕೀತು ಮಾಡಿದರು.
Team Udayavani, Jul 20, 2021, 6:12 PM IST
ಗಜೇಂದ್ರಗಡ: ಪಟ್ಟಣದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳಲ್ಲಿ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿರುವುದು ಕಂಡು ಬಂದರೆ, ಅಂತಹ ಗುತ್ತಿಗೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಮುಂದೆ ಅಂಥವರಿಗೆ ಯಾವುದೇ ಕಾಮಗಾರಿ ನೀಡಬಾರದು ಎಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಅಧಿ ಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆಯಿಂದ ವಿವಿಧ ಬಡಾವಣೆಗಳಲ್ಲಿ ನಡೆದಿರುವ ರಸ್ತೆ ಕಾಮಗಾರಿಗಳು ಕಳಪೆಯಾಗಿವೆ ಎನ್ನುವ ಬಗ್ಗೆ ಕೆಲ ಸದಸ್ಯರು ಮತ್ತು ಸಾರ್ವಜನಿಕರಿಂದ ಆರೋಪ ಕೇಳಿ ಬರುತ್ತಿವೆ. ಅಧಿ ಕಾರಿಗಳು ಆ ಬಗ್ಗೆ ಗಮನ ಹರಿಸಿ, ಮುಲಾಜಿಲ್ಲದೇ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮುಂದಾಗಬೇಕೆಂದು ತಾಕೀತು ಮಾಡಿದರು.
ಪಟ್ಟಣದಲ್ಲಿ ಹೊಸ ಸಮುದಾಯ ಶೌಚಾಲಯ ನಿರ್ಮಾಣ ಮಾಡಬೇಕಾದರೆ ಅದಕ್ಕೆ ಬೇಕಾದ ನೀರು ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಬಗ್ಗೆ ಗಮನ ಹರಿಸಬೇಕು. ನಂತರ ಶೌಚಾಲಯ ನಿರ್ಮಾಣಕ್ಕೆ ಮುಂದಾಗಬೇಕು. ಕೇವಲ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ನೀಡುವುದರ ಜೊತೆಗೆ ಪರಿಸರ ರಕ್ಷಣೆಯಲ್ಲೂ ಸದಸ್ಯರ ಪಾತ್ರವಿದೆ. ಹೀಗಾಗಿ, ಪ್ರತಿ ವಾರ್ಡಿನ ಸದಸ್ಯರು ತಮ್ಮ, ತಮ್ಮ ವಾರ್ಡ್‌ಗಳಲ್ಲಿ ಕನಿಷ್ಠ 50 ಸಸಿ ನೆಡುವ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಸೂಚನೆ ನೀಡಿದರು. ಇದಕ್ಕೆ ಕೆಲ ಸದಸ್ಯರು ಪ್ರತಿಕ್ರಿಯಿಸಿ, ಈಗಾಗಲೇ ವಾರ್ಡಿನಲ್ಲಿ ಸಸಿ ನೆಡಲಾಗಿದೆ. ಇದಕ್ಕೆ ಪುರಸಭೆಯಿಂದ ಟ್ಯಾಂಕರ್ ಮೂಲಕ ನೀರುಣಿಸಲು ಕ್ರಮ ಕೈಗೊಳ್ಳಬೇಕಿದೆ ಎಂದರು.
ಪ್ರತಿ ಸಲ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಲಕ್ಷಾಂತರ ರೂ. ಖರ್ಚು ಮಾಡುವುದಾದರೆ ಅಂಥಹ ಕೆಲಸಗಳು ಏನಿರುತ್ತವೆ. ಪದೇ, ಪದೆ ಲಕ್ಷಾಂತರ ರೂ. ಅನುದಾನ ಬಳಕೆಯಾಗುವುದರ ಬಗ್ಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಶಾಸಕ ಕಳಕಪ್ಪ ಬಂಡಿ ಪ್ರಶ್ನಿಸಿದರು. ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲೀಲಾವತಿ ವನ್ನಾಲ, ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಸದಸ್ಯರಾದ ಯು.ಆರ್. ಚನ್ನಮ್ಮನವರ, ರಾಜು ಸಾಂಗ್ಲಿಕಾರ, ಸುಭಾಸ ಮ್ಯಾಗೇರಿ, ಶಿವರಾಜ ಘೋರ್ಪಡೆ, ಕನಕಪ್ಪ ಅರಳಿಗಿಡದ, ಮುರ್ತುಜಾ ಡಾಲಾಯತ್, ಶರಣಪ್ಪ ಉಪ್ಪಿನಬೆಟಗೇರಿ, ಜಿ.ಎನ್.ಕಾಳೆ, ರಾಘವೇಂದ್ರ ಮಂತಾ, ಶಿವಕುಮಾರ ಇಲ್ಲಾಳ, ಇಮಾಮ ಕಾಲಾನಾಯ್ಕರ, ಎಂ.ಡಿ. ದೊಡ್ಡಮನಿ ಸೇರಿದಂತೆ ಅಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.