ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳದ್ದೇ ದರ್ಬಾರ್‌!


Team Udayavani, Oct 13, 2019, 12:27 PM IST

gadaga-tdy-1

ನರಗುಂದ: ಅರ್ಧ ಕಿಲೋ ಮೀಟರ್‌ಗೆ ಒಂದರಂತೆ ಆರೇಳು ಅಪಾಯಕಾರಿ ತಿರುವುಗಳು, ಸಾಲದೆಂಬಂತೆ ಹೆಜ್ಜೆ ಹೆಜ್ಜೆಗೂ ಬಾಯಿ ತೆರೆದು ಅಪಾಯಕ್ಕೆ ಆಹ್ವಾನಿಸುತ್ತಿರುವ ತಗ್ಗು ಗುಂಡಿಗಳು. ಇದು ನರಗುಂದ-ಗದಗ ರಾಜ್ಯ ಹೆದ್ದಾರಿಯ ಅವ್ಯವಸ್ಥೆ. ನರಗುಂದದಿಂದ ಜಿಲ್ಲಾ ಕೇಂದ್ರ ಗದಗ ಪಟ್ಟಣಕ್ಕೆ ಒಳರಸ್ತೆಯಾಗಿರುವ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯಲ್ಲಿ ಸಾಗುವುದೇ ಬಹುದೊಡ್ಡ ಸವಾಲು.

ನರಗುಂದ ಕೇಂದ್ರ ಸ್ಥಾನದಿಂದ 8 ಕಿಮೀ ಅಂತರದ ತಾಲೂಕಿನ ಕುರ್ಲಗೇರಿ ಗ್ರಾಮವರೆಗೆ ಸುಮಾರು ಐದಾರು ಕಿಮೀ ಹೆದ್ದಾರಿಯುದ್ದಕ್ಕೂ ತಗ್ಗು ಗುಂಡಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಪಟ್ಟಣದ ಹೊರವಲಯ ದೂರಸಂಪರ್ಕ ಕಚೇರಿ ದಾಟಿದ ಬಳಿಕ ಮೂರ್‍ನಾಲ್ಕು ತಿರುವು ಸಾಗಿ ಮುಂದೆ ಹೋಗುತ್ತಿದ್ದಂತೆ ಕುರ್ಲಗೇರಿ ರಸ್ತೆಯಲ್ಲಿ ಇಂತಹ ಗುಂಡಿಗಳು ಹೆದ್ದಾರಿಯುದ್ದಕ್ಕೂ ಸಹಜವಾಗಿವೆ. ಹಗಲು ಹೊತ್ತಿನಲ್ಲೇ ಅಪಾಯ ಸ್ಥಿತಿಯಲ್ಲಿರುವ ಈ ಹೆದ್ದಾರಿ ಸಂಚಾರ ರಾತ್ರಿ ವೇಳೆಯಲ್ಲಂತೂ ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಮೃತ್ಯು ಕೂಪವಾಗಿ ಪರಿಣಮಿಸಿದೆ.

ಹೆದ್ದಾರಿ ತುಂಬೆಲ್ಲ ದೊಡ್ಡ ಗುಂಡಿಗಳು ಉದ್ಭವಿಸಿದ್ದು, ಮಳೆಯಾಗಿ ಗುಂಡಿಗಳು ಕೆಸರು ನೀರಿನಿಂದ ತುಂಬಿ ನಿಂತಿವೆ. ಗುಂಡಿಯಲ್ಲಿ ವಾಹನ ಹೋಗಿದ್ದೇಯಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಸ್ಥಿತಿ ಇಲ್ಲಿದೆ. ದ್ವಿಚಕ್ರ ವಾಹನ ಸವಾರರಂತೂ ಹೆದ್ದಾರಿಯಲ್ಲಿ ಗುಂಡಿಗಳನ್ನು ತಪ್ಪಿಸಲು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು ಸಾಗಬೇಕಿದೆ. ಆಯ ತಪ್ಪಿದರೆ ಕೆಸರಿನ ಅಭಿಷೇಕ ಜೊತೆಗೆ ಬಿದ್ದು ಗಾಯಗೊಳ್ಳಬೇಕಾದ ಪರಿಸ್ಥಿತಿಯಿದೆ. ನರಗುಂದ ಪಟ್ಟಣದಿಂದ ಗದಗ ಪಟ್ಟಣ ಸೇರಲು ಕಡಿಮೆ ಅಂತರದ ಒಳರಸ್ತೆಯಾಗಿರುವ ಈ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಿದೆ.

ಸಮೀಪವಿರುವ ಈ ಮಾರ್ಗದಲ್ಲಿ ರಸ್ತೆಯ ಅವ್ಯವಸ್ಥೆ ಪ್ರತಿದಿನ ಸಾರ್ವಜನಿಕರ ನಿದ್ದೆಗೆಡಿಸಿದೆ ಎಂಬ ದೂರುಗಳು ಕೇಳಿ ಬಂದಿವೆ. ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಒಳಪಡುವ ಗದಗ ಒಳರಸ್ತೆ ರಾಜ್ಯ ಹೆದ್ದಾರಿಯನ್ನು ತ್ವರಿತವಾಗಿ ಸುಧಾರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂಬುದು ಸಾರ್ವಜನಿಕರ ಕೋರಿಕೆಯಾಗಿದೆ.

 ವಾರದೊಳಗೆ ರಸ್ತೆ ನಿರ್ವಹಣೆ :  ನರಗುಂದ ಪಟ್ಟಣದಿಂದ ಕುರ್ಲಗೇರಿ ಮಾರ್ಗದ ರಸ್ತೆ ದುರಸ್ತಿ ನಿರ್ವಹಣೆಗೆ ಈಗಾಗಲೇ 10 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಟೆಂಡರ್‌ ಆಗಿದೆ. ವಾರದೊಳಗೆ ರಸ್ತೆ ನಿರ್ವಹಣೆಗೆ ಚಾಲನೆ ನೀಡಲಾಗುವುದು.  -ಸತೀಶ ನಾಗನೂರ, ಲೋಕೋಪಯೋಗಿ ಕಿರಿಯ ಅಭಿಯಂತರ

 

-ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.