ಅಂಬೇಡ್ಕರ್-ಬಾಬೂಜಿ ಜಯಂತಿಗೆ ಸಿದ್ಧತೆ
ಇಬ್ಬರೂ ಮಹಾನ್ ನಾಯಕರ ಜಯಂತಿ ಅರ್ಥಪೂರ್ಣ ಆಚರಣೆ: ರಜನಿಕಾಂತ್ ಕೆಂಗೇರಿ
Team Udayavani, Mar 31, 2022, 4:00 PM IST
ಗಜೇಂದ್ರಗಡ: ಡಾ|ಬಿ.ಆರ್. ಅಂಬೇಡ್ಕರ್ ಹಾಗೂ ಡಾ|ಬಾಬು ಜಗಜೀವನರಾಂ ಅವರು ದೇಶಕ್ಕೆ ನೀಡಿದ ಕೊಡುಗೆ ಅನರ್ಘ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾನ್ ನಾಯಕರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ರಜನಿಕಾಂತ್ ಕೆಂಗೇರಿ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಬುಧವಾರ ಡಾ|ಬಾಬು ಜಗಜೀವನರಾಂ ಮತ್ತು ಡಾ|ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಜನತೆ ಸುಭದ್ರವಾಗಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಇಡೀ ವಿಶ್ವವೇ ಮೆಚ್ಚುವಂತಹ ಸಂವಿಧಾನ ನೀಡಿದ ಡಾ| ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಒಂದೆಡೆಯಾದರೆ, ಸಮಾಜದಲ್ಲಿ ತುಳಿತಕ್ಕೊಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ಜಗಜೀವನರಾಂ ಅವರು ದೇಶದ ಉಪ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಹಲವಾರು ಕಾರ್ಯಕ್ರಮಗಳು ಇಂದಿಗೂ ಜನಪರವಾಗಿವೆ. ಇಂತಹ ಮಹಾನ್ ನಾಯಕರ ಜಯಂತಿಗಳನ್ನು ಪ್ರತ್ಯೇಕವಾಗಿ ಮಾಡುವ ಬದಲು ಒಂದೇ ದಿನ ನಿಗದಿಗೊಳಿಸಿ, ಗಜೇಂದ್ರಗಡ ತಾಲೂಕಿನಲ್ಲಿ ಆಚರಿಸಲು ಎಲ್ಲರ ಸಲಹೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಮಿಕ ಮುಖಂಡ ಪೀರು ರಾಠೊಡ ಮಾತನಾಡಿ, ಇನ್ನೂ ಸಹ ಗ್ರಾಮೀಣ ಭಾಗದಲ್ಲಿ ಅಸ್ಪೃಶ್ಯತೆ ಇದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ತಾಲೂಕಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡು ಜಾಗೃತಿ ಜಾಥಾ ನಡೆಸಲು ಮುಂದಾಗಬೇಕು. ಹಳ್ಳಿಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಅಂದಾಗ ಮಾತ್ರ ಇಂತಹ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದರು.
ದಲಿತ ಸಂಘಟನೆ ಮುಖಂಡ ಶರಣಪ್ಪ ಪೂಜಾರ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಭಾವಚಿತ್ರ ಪೂಜೆಗೆ ಮಾತ್ರ ಸೀಮಿತಗೊಳಿಸುವ ಬದಲು, ಅಂಬೇಡ್ಕರ್ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಅನೈರ್ಮಲ್ಯತೆ ತೊಡೆಯಲು ಅರಿವು ಮೂಡಿಸಬೇಕು. ಜೊತೆಗೆ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಜಯಂತಿ ಸಮಾರಂಭ ಆಚರಣೆಗೆ ಮುಂದಾಗಬೇಕು. ಕಾಟಾಚಾರದ ಕಾರ್ಯಕ್ರಮಕ್ಕೆ ಮುಂದಾದರೆ ಸಮಂಜಸವಲ್ಲ ಎಂದರು.
ಭೋವಿ ಸಮಾಜದ ಮುಖಂಡ ಬಸವರಾಜ ಬಂಕದ ಮಾತನಾಡಿ, ಏ.5 ರಂದು ಕಚೇರಿಗಳಲ್ಲಿ ಸರಳವಾಗಿ ಬಾಬು ಜಗಜೀವನರಾಂ ಅವರ ಜಯಂತಿ ಆಚರಿಸಿ, ಏ. 14 ರಂದು ಡಾ|ಬಿ. ಆರ್. ಅಂಬೇಡ್ಕರ್ ಜಯಂತಿ ದಿನವೇ ಉಭಯ ನಾಯಕರ ಭಾವಚಿತ್ರಗಳ ಭವ್ಯ ಮೆರವಣಿಗೆ ನಡೆಸಬೇಕು. ಚಿಂತಕರಿಂದ ಮಹಾನ್ ನಾಯಕರ ಆದರ್ಶಗಳ ಬಗ್ಗೆ ಸಮಾರಂಭ ಆಯೋಜನೆಗೆ ತಾಲೂಕು ಆಡಳಿತ ಮುಂದಾಗಬೇಕೆಂದರು.
ತಾಪಂ ಇಒ ಸಂತೋಷ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಅಧಿ ಕಾರಿ ಭೀಮಾಶಂಕರ ಬಿರಾದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ಸಜ್ಜನರ, ಪುರಸಭೆ ಸ್ಥಾಯಿ ಸಮಿತಿ ಚೇರ್ಮನ್ ಯು.ಆರ್. ಚನ್ನಮ್ಮನವರ, ವೀರಣ್ಣ ಅಡಗತ್ತಿ, ಇಮಾಮ ಕಾಲಾನಾಯಕ್, ಶಿವಕುಮಾರ ಇಲ್ಲಾಳ, ಉಪನೋಂದಣಾಧಿ ಕಾರಿ ವಿರುಪಾಕ್ಷ ಚೌಕಿಮಠ, ಮೂಕಪ್ಪ ಗುಡೂರ, ಕನಕಪ್ಪ ಅರಳಿಗಿಡದ, ಉಮೇಶ ರಾಠೊಡ, ಮೂಕಪ್ಪ ನಿಡಗುಂದಿ, ಮುದಿಯಪ್ಪ ಮುಧೋಳ, ರುಪ್ಲೇಶ ರಾಠೊಡ, ಈರಪ್ಪ ರಾಠೊಡ, ಯಲ್ಲಪ್ಪ ಬಂಕದ, ದುರುಗಪ್ಪ ಮುಧೋಳ, ಶರಣಪ್ಪ ಚಳಗೇರಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ
ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.