ಅಭಿವೃದ್ಧಿ ಯೋಜನೆ ಸಿದ್ಧಪಡಿಸಿ
•ಅಧಿಕಾರ ವಿಕೇಂದ್ರೀಕರಣದಿಂದ ಗ್ರಾ.ಪಂ ವ್ಯವಸ್ಥೆ ಸಬಲ: ಬಳಿಗಾರ
Team Udayavani, Jul 7, 2019, 10:10 AM IST
ಗದಗ: ಜಿ.ಪಂ. ನಗರದಲ್ಲಿ ಶನಿವಾರ ಸುಸ್ಥಿತ ಅಭಿವೃದ್ಧಿ ಗುರಿಗಳ ಪರಿಕಲ್ಪನೆಯ ಪರಿಚಯದ ಕಾರ್ಯಾಗಾರ ಜರುಗಿತು.
ಗದಗ: ಅಧಿಕಾರ ವಿಕೇಂದ್ರೀಕರಣದಿಂದ ಗ್ರಾ.ಪಂ ವ್ಯವಸ್ಥೆ ಸಬಲಗೊಂಡಿದೆ. ಕೆಳಹಂತದಿಂದಲೇ ಯೋಜನೆಗಳು ರೂಪಿತವಾಗಬೇಕು. ಅದಕ್ಕನುಗುಣವಾಗಿ ಗ್ರಾ.ಪಂ ಅಭಿವೃದ್ಧಿ ಯೋಜನೆ ತಯಾರಿಸಬೇಕು ಎಂದು ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಹೇಳಿದರು.
ಇಲ್ಲಿನ ಜಿ.ಪಂ. ಸಭಾಂಣಗಣದಲ್ಲಿ ಶನಿವಾರ ನಡೆದ ಗದಗ ತಾಲೂಕಾ ಅಭಿವೃದ್ಧಿ ಯೋಜನಾ ತಯಾರಿಕಾ ಪ್ರಕ್ರಿಯೆ ಹಾಗೂ ಸಮಿತಿಯ ಜವಾಬ್ದಾರಿಯ ಕುರಿತು ಸುಸ್ಥಿತ ಅಭಿವೃದ್ಧಿ ಗುರಿಗಳ ಪರಿಕಲ್ಪನೆಯ ಪರಿಚಯದ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಗದಗ ತಾಲೂಕು ಅಭಿವೃದ್ಧಿ ಯೋಜನೆಯ ಸಿದ್ಧತೆಗೆ ಸಮಿತಿ ಸದಸ್ಯರಿಗೆ ಜನರ ಬದುಕಿನ ಬಗ್ಗೆ ಸಂಪೂರ್ಣ ಅರಿವು ಹಾಗೂ ದೂರದೃಷ್ಟಿ ಇರಬೇಕು. ಅದಕ್ಕಾಗಿ ಈ ಕಾರ್ಯಾಗಾರ ಏರ್ಪಡಿಸಲಾಗಿದೆ. ಗ್ರಾಮಸಭೆಗಳಲ್ಲಿ ರೂಪಿತ ಯೋಜನೆಗಳು ತಾಲೂಕು ನಂತರ ಜಿಲ್ಲಾಮಟ್ಟದ ಯೋಜನೆ ತಯಾರಿಸಿ ನಂತರ ಸರ್ಕಾರದ ಬಜೆಟ್ ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಚ್ಚಿನ ಜವಾಬ್ದಾರಿ ಮತ್ತು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿ.ಪಂ. ಉಪಕಾರ್ಯದರ್ಶಿ ಡಿ.ಪ್ರಾಣೇಶ ರಾವ್ ಮಾತನಾಡಿ, ಗ್ರಾಮೀಣಾಭಿವೃದ್ಧಿ ವಿಕೆಂದ್ರೀಕರಣಕ್ಕೆ ಒತ್ತು ಕೊಡುವ ಹಾಗೂ ರಾಷ್ಟ್ರಕ್ಕೆ ಸಹಾಯಕವಾಗುವಂತಹ ಅಭಿವೃದ್ಧಿ ಯೋಜನೆಗಳನ್ನು ಗ್ರಾಪಂ., ತಾಪಂ ಹಾಗೂ ಜಿ.ಪಂಗಳಲ್ಲಿ ಸಾಕಾರಗೊಳಿಸಲು ಗದಗ ಮತ್ತು ಮೈಸೂರು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿತ್ತು. ಇದು ರಾಷ್ಟ್ರದಲ್ಲಿಯೇ ಮಾದರಿ ಯೋಜನೆಯಾಗಿದೆ. ಗ್ರಾಮ ಸಭೆಯಲ್ಲಿ ನಡೆದಿದ್ದನ್ನು ಚಿತ್ರೀಕರಣ ಮಾಡಿ, ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದರು.
ಗ್ರಾಮ ಪಂಚಾಯತ್ ಮತ್ತು ನಗರಪ್ರದೇಶಗಳಲ್ಲಿನ ಯೋಜನೆಗಳನ್ನು ಒಗ್ಗೂಡಿ ಸಮನ್ವಯಗೊಳಿಸುವುದು ಇದರ ಉದ್ದೇಶವಾಗಿದೆ. ಅಭಿವೃದ್ಧಿ ಯೋಜನೆ ತಯಾರಿಕೆಗೆ ವಾರ್ಡವಾರು ಸಭೆ ಜರುಗಿಸಿ, ಗ್ರಾಮಸಭೆ ಮಾಡಿ ಅಭಿವೃದ್ಧಿ ಯೋಜನೆ ಸಿದ್ಧಪಡಿಸಬೇಕು. ಸಮಸ್ಯೆಗಳನ್ನು ಪಟ್ಟಿ ಮಾಡಿ ಪರಿಹಾರ, ಸಂಪನ್ಮೂಲಗಳ ಬಳಕೆ ಕುರಿತು ಪಟ್ಟಿ ಮಾಡುವುದು ಇದರಲ್ಲಿ ಸೇರಿದೆ ಎಂದರು.
ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಗದಗ ತಾ.ಪಂ.ಅಧ್ಯಕ್ಷ ಮೋಹನ ದುರಗಣ್ಣವರ, ತಾ.ಪಂ. ಸದಸ್ಯ ವಿದ್ಯಾಧರ ದೊಡ್ಡಮನಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಗದಗ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ|ಎಚ್.ಎಸ್.ಜನಗಿ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.