![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 29, 2021, 9:46 PM IST
ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಚಳವಳಿಗೆ ಮುಂದಾಗುವುದಾಗಿ ಎಚ್ಚರಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಡಿಡಿಪಿಐ ಅವರ ಮೂಲಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಮತ್ತು ತುಮಕೂರಿನಲ್ಲಿ ನಡೆದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿಯ ನಿರ್ಣಯದಂತೆ ಶಿಕ್ಷಕರ ಹಲವಾರು ಪ್ರಮುಖ ಬೇಡಿಕೆಗಳ ಈಡೇರಿಸಬೇಕು. ಪದವೀಧರ ಶಿಕ್ಷಕರ ಸಮಸ್ಯೆ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವ \ಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15, 20, 25, 30 ವರ್ಷಗಳ ವೇತನ ಬಡ್ತಿ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದರೂ ಸರಕಾರ ನಿರ್ಲಕ್ಷಿಸುತ್ತಿರುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ವಿಶೇಷವಾಗಿ ಶಿಕ್ಷಕರ ಸಂಘಟನೆ ಮಕ್ಕಳೊಂದಿಗಿದ್ದು, ಬೇಡಿಕೆ ಈಡೇರಿಕೆಗಾಗಿ ಅಸಹಕಾರ ಚಳುವಳಿಯ ಮೂಲಕ ಸರಕಾರದ ಗಮನ ಸೆಳೆಯುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರನ್ವಯ ತರಬೇತಿ ಬಹಿಷ್ಕಾರ, ಸಮಾಲೋಚನಾ ಸಭೆ, ಗೂಗಲ್ ಫಾರ್ಮ್ ತುಂಬದೇ ಕಪ್ಪು ಬಟ್ಟೆ ಧರಿಸಿ ಶೆ„ಕ್ಷಣಿಕ ಚಟುವಟಿಕೆ ನಿರ್ವಹಿಸಲಾಗುವದು ಆದಾಗ್ಯೂ ಶಿಕ್ಷಣ ಇಲಾಖೆ ಸ್ಪಂದಿಸದಿದ್ದರೆ ಅಸಹಕಾರ ಚಳುವಳಿಯನ್ನು ತೀವ್ರಗೊಳಿಸಿ, ಮಧ್ಯಾನ್ಹದ ಬಿಸಿಯೂಟದ ಮಾಹಿತಿಯನ್ನು ಅಪ್‌ಡೇಟ್ ಮಾಡದೇ, ನವೆಂಬರ್ 11 ರಿಂದ 18ರವರೆಗೆ ಎಸ್‌ಎಟಿಎಸ್ ಮಾಹಿತಿಯನ್ನು ಅಪ್‌ಡೇಟ್ ಮಾಡದೇ ಹೋರಾಟ ನಡೆಸಲಾಗುವುದು. ಮುಂದೆ ತರಗತಿ ಬಹಿಷ್ಕಾರ ಹಾಗೂ ಶಾಲಾ ಬಹಿಷ್ಕಾರದಂತಹ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಸಂಘದ ಗೌರವ ಅಧ್ಯಕ್ಷ ಎಸ್.ಎಂ.ಪಾಟೀಲ, ಕಾರ್ಯಾಧ್ಯಕ್ಷ ಪಿ.ಈರಪ್ಪ, ಉಪಾಧ್ಯಕ್ಷ ಎಂ.ವೈ.ಚಕ್ರಪಾಣಿ, ಜಿ.ಎನ್.ಕ್ಯಾತನಗೌಡ್ರ, ಕೋಶಾಧ್ಯಕ್ಷ ಎ.ಕೆ.ವಂಟಿ, ಸಹಕಾರ್ಯದರ್ಶಿ ಎಂ.ಪಿ.ಮೆಣಸಿನಕಾಯಿ, ಎಂ.ಎಚ್. ತೊಂಡಿಹಾಳ, ಸಂಘಟನಾ ಕಾರ್ಯದರ್ಶಿ ಮುತ್ತು ಮಾದರ, ಜಿ.ಜಿ.ಹರ್ತಿ, ಎಸ್ .ವಿ.ಕುಲಕರ್ಣಿ, ಸಿ.ಎಫ್.ಅಗಸಿಮನಿ, ಪ್ರಕಾಶ ಅಂಬೂರೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ರವಿ ಗುಂಜಿಕರ, ಪ್ರಧಾನ ಕಾರ್ಯದರ್ಶಿ ಕೆ.ಎಫ್.ಹಳ್ಯಾಳ, ವಿವಿದ ಘಟಕಗಳ ಪದಾ ಧಿಕಾರಿಗಳಾದ ಎಸ್.ಆರ್.ಬಂಡಿ, ಎಸ್. ಕೆ.ಮಂಗಳಗುಡ್ಡ ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.