ರಂಭಾಪುರಿ ಬಡಾವಣೆಯಲ್ಲಿ ಸಮಸ್ಯೆ ನೂರಾರು

Team Udayavani, Jan 2, 2020, 1:33 PM IST

gadaga-tdy2

ಲಕ್ಚ್ಮೇಶ್ವರ: ಪಟ್ಟಣದ ಪುರಸಭೆಯ 16ನೇ ವಾರ್ಡ್‌ ವ್ಯಾಪ್ತಿಗೊಳಪಡುವ ರಂಭಾಪುರಿ ಆಶ್ರಯ ಪ್ಲಾಟ್‌ನಲ್ಲಿ ಮೂಲಸೌಲಭ್ಯವಿಲ್ಲದೇ ಜನ ಪರದಾಡುವಂತಾಗಿದೆ.

ಬಡಾವಣೆಯಲ್ಲಿ ಬಡ ಮತ್ತು ಕೂಲಿಕಾರರ 150ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿವೆ. ಆದರೆ 25 ವರ್ಷ ಕಳೆದರೂ ಈ ಬಡಾವಣೆಯಲ್ಲಿ ಮೂಲ ಸೌಲಭ್ಯಗಳಿಲ್ಲದೇ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಮೂಲ ನಕ್ಷೆ ಕಡೆಗಣಿಸಿ ರಸ್ತೆ, ಚರಂಡಿಗಳ ಜಾಗದ ಮೇಲೆಯೇ ಮನೆ ನಿರ್ಮಿಸಿಕೊಂಡಿದ್ದರಿಂದ ಈಗ ಚರಂಡಿ, ರಸ್ತೆಗಳದ್ದೇ ಸಮಸ್ಯೆಯಾಗಿದೆ. ಇದರಿಂದಾಗಿ ಬಡಾವಣೆಯ ನೀರು ಎಲ್ಲೆಂದರಲ್ಲಿ ಹರಿದು ತಗ್ಗು ಪ್ರದೇಶವೊಂದಲ್ಲಿ ನಿಲ್ಲುವುದರಿಂದ ಇಡೀ ಪ್ರದೇಶ ಕೊಳಚೆಮಯವಾಗಿದೆ.

ಸಂಚಾರಕ್ಕೆ ಬಳಸುತ್ತಿರುವ ರಸ್ತೆಯೇ ಮೇಲೆ ನೀರು ನಿಂತು ಕಸ ಬೆಳೆದು ಸೊಳ್ಳೆ, ವಿಷಜಂತುಗಳು, ಹಂದಿಗಳ ತಾಣವಾಗಿ ಅನಾರೋಗ್ಯದ ತವರಾಗಿದೆ. ಹೊರವಲಯದಲ್ಲಿರುವ ಈ ಬಡಾವಣೆ ಪುರಸಭೆಯ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿದೆ. ಸ್ವಚ್ಛತೆ ಬಗ್ಗೆ ಇಲ್ಲಿನ ನಿವಾಸಿಗರು ದೂರಿದಾಗ ವರ್ಷದಲ್ಲಿ ಯಾವಾಗಲಾದರೊಮ್ಮೆ ಕಾಟಾಚಾರಕ್ಕೆಂಬಂತೆ ಬಂದು ಸ್ವತ್ಛತೆ ಶಾಸ್ತ್ರ ಮಾಡುತ್ತಾರೆ. ಮಳೆಗಾಲದಲ್ಲಂತೂ ಇಲ್ಲಿನ ಜನರ ಗೋಳು ಹೇಳತೀರದು. 2000ದಷ್ಟು ಜನಸಂಖ್ಯೆ ಹೊಂದಿದ್ದರೂ ಸಮರ್ಪಕ ಕುಡಿಯುವ ನೀರು, ಬೀದಿ ದೀಪ, ಸಾರ್ವಜನಿಕ ಶೌಚಾಲಯ, ಅಂಗನವಾಡಿ, ಆರೋಗ್ಯ ಸೇವೆ, ಬಸ್‌ ತಂಗುದಾಣ, ಪಡಿತರ, ಸಾರಿಗೆ ಹೀಗೆ ಹತ್ತಾರು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. 6 ವರ್ಷಗಳ ಹಿಂದೆ ನೀರು ಸರಬರಾಜಿಗಾಗಿ ನಿರ್ಮಿಸಿದ ಒಂದು ನೀರಿನ ತೊಟ್ಟಿಗೆ ಇದುವರೆಗೂ ಹನಿ ನೀರು ಪೂರೈಕೆಯಾಗದೇ ಹೆಸರಿಗೆ ಮಾತ್ರ ಎನ್ನುವಂತಾಗಿದೆ.

ಬಡಾವಣೆಯ ಸುತ್ತಲೂ ಅಪಾರ ಪ್ರಮಾಣದ ಜಾಲಿಕಂಟಿ ಬೆಳೆದು ಜನರು ಹಗಲು ಹೊತ್ತಿನಲ್ಲೂ ವಿಷಜಂತುಗಳ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಇಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಎಲ್ಲರಿಗೂ ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದು ಆಶ್ವಾಸನೆ ಕೊಟ್ಟು ಹೋಗುವ ಜನಪ್ರತಿನಿಧಿಗಳು ಮತ್ತೆ ಇತ್ತ ತಿರುಗಿಯೂ ನೋಡುವುದಿಲ್ಲ ಎಂದು ಇಲ್ಲಿನ ನಿವಾಸಿಗರಾದ ಯಲ್ಲಪ್ಪ ಕೋರದಾಳ, ಮಂಜಪ್ಪ ಮಿಳ್ಳಿ, ಸಂತೋಷ ಸರ್ವದೆ, ಚನ್ನಪ್ಪ ಧರಮಂತರ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಟಾಪ್ ನ್ಯೂಸ್

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.