ಧರಣಿ ಕೈಬಿಡುವಂತೆ ಕೈಮುಗಿದ ಡಿಸಿ
Team Udayavani, Oct 17, 2018, 4:25 PM IST
ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 12 ಜನ ಮಹಿಳೆ ಮತ್ತು ಒಂಬತ್ತು ಜನ ಪುರುಷ ಕಾರ್ಮಿಕರು ತಮ್ಮನ್ನು ಟೆಂಡರ್ ಅವಧಿ ಮುಗಿದ ಕಾರಣದಿಂದ ಕೆಲಸ ಬಿಡಿಸಿದ್ದನ್ನು ಮತ್ತು ನೇರ ನೇಮಕಾತಿಯಲ್ಲಿ ಕೈಬಿಟ್ಟಿದ್ದನ್ನು ವಿರೋಧಿಸಿ ಪುರಸಭೆ ಎದುರು ಅ. 11ರಿಂದ ಕೈಗೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಮಂಗಳವಾರ ಸಂಜೆ 7ಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಭೇಟಿ ನೀಡಿದರು. ಈ ವೇಳೆ ಧರಣಿ ಕೈಬಿಡುವಂತೆ ಕೈಮುಗಿದು ಬೇಡಿಕೊಂಡರು.
ಕಳೆದ ಆರು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರು ಜಿಲ್ಲಾಧಿಕಾರಿಗಳು ಬರುತ್ತಿದ್ದಂತೆಯೇ ಎಲ್ಲರೂ ಅವರ ಕಾಲಿಗೆ ಬಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಿಮ್ಮ ಸಮಸ್ಯೆ ಬಗ್ಗೆ ಗೊತ್ತಿದ್ದು, ಇದು ಸಾರ್ವತ್ರಿಕ ಸಮಸ್ಯೆಯಾಗಿದೆ. ಇತ್ತೀಚಿನ ನೇಮಕಾತಿಯಲ್ಲಿ ತಮ್ಮನ್ನು ಕೈ ಬಿಟ್ಟಿರುವ ಬಗ್ಗೆ ನೀವು ಮಾಡುತ್ತಿರುವ ಪ್ರತಿಭಟನೆಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗಬೇಕಿದೆ. ತಾವು ಕಾರ್ಯ ನಿರ್ವಹಿಸಿದ ಕಾಲಾವಧಿಯಲ್ಲಿ ತಮ್ಮನ್ನು ಟೆಂಡರ್ ಮೂಲಕ ನೇಮಕ ಮಾಡಿಕೊಂಡವರು, ವೇತನ ಪಾವತಿಸಿದ ಇನ್ನೂ ಅನೇಕ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಿ. ತಮ್ಮೆಲ್ಲ ಬೇಡಿಕೆಗಳ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು. ದಯವಿಟ್ಟು ಪ್ರತಿಭಟನೆ ಕೈಬಿಡಿ ಎಂದು ಕೈಮುಗಿದು ನಡೆದರು.
ಉಪವಿಭಾಗಾಧಿಕಾರಿ ಪಿ. ಮಂಜುನಾಥ, ಜಿಲ್ಲಾ ನಗರ ಯೋಜನಾಧಿಕಾರಿ ಪಿ.ರುದ್ರೇಶ, ತಹಶೀಲ್ದಾರ್ ಕೆ.ಬಿ. ಕೋರಿಶೆಟ್ಟರ, ಮುಖಂಡರಾದ ಸುರೇಶ ನಂದೆಣ್ಣವರ, ಶರಣು ಗೋಡಿ, ನಾಗೇಶ ಅಮರಾಪುರ, ನೀಲಪ್ಪ ಪಡಗೇರಿ ಸೇರಿದಂತೆ ಅನೇಕರು ಇದ್ದರು. ಮಹಿಳಾ ಕಾರ್ಮಿಕರಾದ ಗಿರಿಜವ್ವ ನಂದೆಣ್ಣವರ, ಸಾವಕ್ಕ ಗಡದವರ, ಹನಮವ್ವ ಗಡದವರ, ಗಂಗವ್ವ ಅಯ್ಯಣ್ಣವರ, ಯಲ್ಲವ್ವ ಗಡದವರ, ಹನಮವ್ವ ನಂದೆಣ್ಣವರ, ಮಲ್ಲವ್ವ ಗಡದವರ, ಹನಮವ್ವ ಇನ್ನಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.