ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ
•ಅನುಭವ-ಅರ್ಹತೆ ಇರುವವರಿಗೆ ಅವಕಾಶ ನೀಡುತ್ತಿಲ್ಲವೆಂಬ ಆರೋಪ
Team Udayavani, Jul 1, 2019, 10:12 AM IST
ಗಜೇಂದ್ರಗಡ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಶಿಕ್ಷಕರು ಶಾಸಕ ಕಳಕಪ್ಪ ಬಂಡಿ ಅವರಿಗೆ ಮನವಿ ಸಲ್ಲಿಸಿದರು.
ಗಜೇಂದ್ರಗಡ: ಪದವಿ ವಿದ್ಯಾರ್ಹತೆ ಹಾಗೂ ಸೇವಾ ಅನುಭವ ಇರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಸದಸ್ಯರು ಶಾಸಕ ಕಳಕಪ್ಪ ಬಂಡಿ ಅವರಿಗೆ ರವಿವಾರ ಮನವಿ ಸಲ್ಲಿಸಿದರು.
6ರಿಂದ 8ನೇ ತರಗತಿಗೆ ಬೋಧನೆ ಮಾಡುವ ಅರ್ಹತೆ ಇರುವ 82 ಸಾವಿರ ಜನ ಶಿಕ್ಷಕರು ರಾಜ್ಯದಲ್ಲಿದ್ದಾರೆ. ಇವರಿಗೆ ಬಡ್ತಿ ನೀಡುವ ಬದಲು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 14 ವರ್ಷ ಸೇವೆ ಸಲ್ಲಿಸಿರುವ ಅನುಭವಿ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಅನುಭವ ಹಾಗೂ ಅರ್ಹತೆ ಇರುವವರು ಅವಕಾಶ ವಂಚಿತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ನಾಗರಿಕ ಸೇವಾ (ಕೆಸಿಎಸ್‌ಆರ್) ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಪದವೀಧರ ಪ್ರಾಥಮಿಕ ಶಾಲಾ ಅರ್ಹ ಶಿಕ್ಷಕರಿಗೆ ಬಡ್ತಿ ನೀಡದೆ ಶಿಕ್ಷಣ ಇಲಾಖೆ ಅನ್ಯಾಯ ಎಸಗುತ್ತಿದೆ. ಹೊಸ ನೇಮಕಾತಿ ಆರಂಭಿಸಿದ ನಂತರ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಬಂಧಿಸಿದವರ ಗಮನ ಸೆಳೆಯಲಾಗಿದೆ. ಆದರೂ ಯಾರೊಬ್ಬರೂ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಈ ಹಿಂದೆ ಇಲಾಖೆಯ ಮುಖ್ಯಸ್ಥರು ಮತ್ತು ಸಚಿವರಿಗೂ ಮನವಿ ಮಾಡಲಾಗಿದೆ. ಆದರೂ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲ. ಸರ್ಕಾರ ಈ ವಿಷಯ ಗಂಭೀರವಾಗಿ ಪರಿಗಣಿಸಿ ಶಿಕ್ಷಕರಿಗೆ ನ್ಯಾಯ ನೀಡಬೇಕು. ನಮ್ಮ ನ್ಯಾಯಯುತ ಹೋರಾಟಕ್ಕೆ ಶಾಸಕರು ಕೈಜೋಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಶಾಸಕ ಕಳಕಪ್ಪ ಬಂಡಿ ಮನವಿ ಸ್ವೀಕರಿಸಿ ಮಾತನಾಡಿ, ಶಿಕ್ಷಕರ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು. ಜೊತೆಗೆ ಶಿಕ್ಷಕರ ಬಡ್ತಿ ನೀಡುವ ಕುರಿತು ಜುಲೈ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಧ್ವನಿ ಎತ್ತುವ ಮೂಲಕ ಸಮಸ್ಯೆ ಬಗೆಹರಿಸಲು ಸಚಿವರಿಗೆ ಆಗ್ರಹ ಮಾಡಲಾಗುವುದು ಎಂದು ಭರವಸೆ ನೀಡಿದರು. ಆರ್.ಕೆ. ಕವಡಿಮಟ್ಟಿ, ಬಿ.ಸಿ. ಅಂಗಡಿ, ಐ.ಎ. ರೇವಡಿ, ಪಿ.ಪಿ. ಅಂಬೋರೆ, ಬಿ.ಎಂ. ಹಿರೇಮಠ, ಎಸ್.ಎಸ್. ಪಟ್ಟೇದ, ಎಸ್.ಎಸ್. ಶಿವಶಿಂಪಗೇರಿ, ಎಸ್.ಬಿ. ಜೂಲಗುಡ್ಡ, ಆರ್.ಕೆ. ನೆಲ್ಲೂರ, ಎಸ್.ಆರ್. ನೀಲೂರ, ಎಂ.ಎಫ್. ಬುಟ್ಟಾರ, ಪಿ.ಎನ್. ಗಂಜಿ, ಟಿ.ಜಿ. ಮುದಗಲ್ಲ, ಆರ್.ಜಿ. ಮ್ಯಾಕಲ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.