ಆಕ್ಷೇಪದ ಮಧ್ಯೆಯೂ ಆಸ್ತಿ ತೆರಿಗೆ ಹೆಚ್ಚಳ

ಮನೆಗಳಿಗೆ ಶೇ.3, ವಾಣಿಜ್ಯ ಕಟ್ಟಡಗಳಿಗೆ ಶೇ.4 ತೆರಿಗೆ ಹೆಚ್ಚಳ

Team Udayavani, May 10, 2022, 2:58 PM IST

13

ಗದಗ: ನಗರಸಭೆ ಪ್ರತಿಪಕ್ಷಗಳ ವಿರೋಧ, ಪ್ರತಿಭಟನೆ ಮಧ್ಯೆಯೂ ಗದಗ- ಬೆಟಗೇರಿ ಅವಳಿ ನಗರದ ಮನೆಗಳಿಗೆ ಶೇ.3 ಹಾಗೂ ವಾಣಿಜ್ಯ ಕಟ್ಟಡಗಳಿಗೆ ಶೇ.4 ಆಸ್ತಿ ತೆರಿಗೆ ಹೆಚ್ಚಿಸಲು ಸೋಮವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

2022-23ನೆ ಸಾಲಿಗೆ ರಾಜ್ಯ ಸರಕಾರದ ಸುತ್ತೋಲೆಯಂತೆ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡುವ ಕುರಿತು ನಗರಸಭೆ ಸಭಾಂಗಣದಲ್ಲಿ ನಗರದ ಪ್ರಥಮ ಪ್ರಜೆ ಉಷಾ ದಾಸರ್‌ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್‌ ಸದಸ್ಯರು ತೆರಿಗೆ ಹೆಚ್ಚಳಕ್ಕೆ ತೀವ್ರ ವಿರೋಧಿಸಿದರು.

ನಗರಸಭೆ ಪ್ರತಿಪಕ್ಷ ನಾಯಕ ಎಲ್‌.ಡಿ.ಚಂದಾವರಿ ಮಾತನಾಡಿ, ಕೋವಿಡ್‌ ನಂತರ ದೇಶಾದ್ಯಂತ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಬಡವರು, ಕಾರ್ಮಿಕ ವರ್ಗ ನಿತ್ಯ ಜೀವನ ಸಾಗಿಸುವುದೇ ಸವಾಲಿನ ಕೆಲಸವಾಗಿದೆ. ಇಂತಹ ಸಂದರ್ಭದಲ್ಲಿ ಅವಳಿ ನಗರದಲ್ಲಿ ಯಾವುದೇ ತೆರಿಗೆ ಹೆಚ್ಚಿಸದೇ, ಯಥಾಸ್ಥಿತಿ ಕಾಯ್ದುಕೊಳ್ಳಲು ಸರ್ವ ಪಕ್ಷದ ಸದಸ್ಯರ ಬೆಂಬಲ ಕೋರಿದರು.

ಬೆಂಗಳೂರಿನಲ್ಲಿ ದೊಡ್ಡ ಮೊತ್ತದ ತೆರಿಗೆ ಬಾಕಿ ಉಳಿಸಿಕೊಂಡವರ ಮನೆ ಎದುರು ಹಲಿಗೆ ಬಾರಿಸುತ್ತಾರೆ. 99 ವರ್ಷ ಲೀಸ್‌ ಪಡೆದಿರುವ ಕುಷ್ಟಗಿ ಎಂಬ ವ್ಯಕ್ತಿಯೊಬ್ಬ ನಗರಸಭೆ ಆಸ್ತಿ ಅನುಭವಿಸುತ್ತಿದ್ದಾರೆ. ಅವಳಿ ನಗರದಲ್ಲಿ ಶೇ.75 ಆಸ್ತಿಗಳು ನಗರಸಭೆ ಮಾಲೀಕತ್ವದಲ್ಲಿವೆ. ಅವುಗಳ ಮಾರಾಟದಿಂದ ಸಾವಿರಾರು ಕೋಟಿ ರೂ.ಆದಾಯ ಬರಲಿದ್ದು, ಅದರ ಬ್ಯಾಂಕ್‌ ಬಡ್ಡಿ ಹಣದಲ್ಲೇ ಅವಳಿ ನಗರದ ಅಭಿವೃದ್ಧಿ ಮಾಡಬಹುದು. ಇಲ್ಲವೇ ಬೆಂಗಳೂರು ಮಹಾನಗರ ಪಾಲಿಕೆ ಮಾದರಿಯಲ್ಲಿ ತೆರಿಗೆ ಬಾಕಿದಾರರ ಮನೆ ಎದುರು ಹಲಗೆ ಚಳವಳಿ ನಡೆಸಬೇಕು ಎಂದು ಸಲಹೆ ನೀಡಿದರು.

ಅದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯ ಚಂದ್ರು ತಡಸದ, ಈಗಾಗಲೇ ಆರ್ಥಿಕ ಸ್ಥಿತಿ ಸರಿಯಿಲ್ಲದ ಕಾರಣ ಕಳೆದ 3 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ವಾಹನ ಚಾಲಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ನಗರಸಭೆ ಆಡಳಿತ ನಿರ್ವಹಣೆಗೆ ಕನಿಷ್ಠ ಮಟ್ಟದಲ್ಲಾದರೂ ತೆರಿಗೆ ಹೆಚ್ಚಿಸುವುದು ಅನಿವಾರ್ಯ. ಈ ಹಿಂದೆ ಶೇ.15, 18, ಹಾಗೂ 30 ತೆರಿಗೆ ಹೆಚ್ಚಿಸಿದ ಉದಾಹರಣೆಗಳಿವೆ ಎಂದು ತಿರುಗೇಟು ನೀಡಿದರು.

ಅದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಕೃಷ್ಣ ಪರಾಪುರ, ನಗರಸಭೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ ಎಂಬುದು ವಾಸ್ತವ. ಆದರೆ ನಗರಸಭೆ ಮಾಲೀಕತ್ವದ ವಾಣಿಜ್ಯ ಮಳಿಗೆಗಳ ಬಾಡಿಗೆ ಹೆಚ್ಚಿಸಿ. ಅವುಗಳ ಬಾಡಿಗೆ ಸಂಗ್ರಹಣೆಗೆ ಕಠಿಣ ಕ್ರಮ ಕೈಗೊಳ್ಳುವುದಿಲ್ಲ ಯಾಕೆ? ನಗರಸಭೆ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ, ಲೀಸ್‌ ಪಡೆದವರು ನಗರಸಭೆಗೆ ಬಿಡಿಗಾಸು ಕೊಟ್ಟು, ಕೋಟ್ಯಂತರ ರೂ. ಗಳಿಸುತ್ತಿದ್ದಾರೆ. ಸಾರ್ವಜನಿಕರಿಗೆ ತೆರಿಗೆ ಹೊರೆ ಹೆಚ್ಚಿಸಲು ಚಿಂತನೆ ನಡೆಸುವ ನಗರಾಡಳಿತ ಈ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ. ಒಂದು ಕಣ್ಣಿಗೆ ಬೆಣ್ಣೆ, ಮತ್ತೂಂದು ಕಣ್ಣಿಗೆ ಸುಣ್ಣ ಯಾಕೆ ಎಂದು ತರಾಟೆಗೆ ತೆಗೆದುಕೊಂಡರು.

ಅದಕ್ಕೆ ವಿಪಕ್ಷದ ಜೈನುಲ್ಲಾದ್ದೀನ ನಮಾಜಿ, ಲಕ್ಷ್ಮಿ ಸಿದ್ದಮ್ಮನಹಳ್ಳಿ, ಚುಮ್ಮಿ ನದಾಫ್‌ ಮತ್ತಿತರರು ಧ್ವನಿಗೂಡಿಸಿದರು.

ಬಿಜೆಪಿ ಸದಸ್ಯ ರಾಘವೇಂದ್ರ ಯಳವತ್ತಿ ಮಾತನಾಡಿ, ನಗರಸಭೆಯಲ್ಲಿ ಹಣಕಾಸು ಖಾತೆಗಳು ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ. ಯಾವ ಹಣ ಯಾವ ಖಾತೆಗೆ ಹೋಗುತ್ತಿದೆ. ಅದು ಯಾವುದಕ್ಕೆ ಬಳಕೆಯಾಗುತ್ತಿದೆ ಎಂಬುದೇ ತಿಳಿಯುತ್ತಿಲ್ಲ. ನಗರಸಭೆಯ ಆರ್ಥಿಕ ಸ್ಥಿತಿ ಅಧೋಗತಿಗೆ ಜಾರಿದೆ. ಲೋಡರ್ಸ್‌, ಗಂಟಿಗಾಡಿ ಕಾರ್ಮಿಕರಿಗೆ ಕಳೆದ 3 ತಿಂಗಳಿಂದ ವೇತನ ನೀಡಲಾಗುತ್ತಿಲ್ಲ. ಲೀಸ್‌ ಅವಧಿ, ಬಾಡಿಗೆ ಹೆಚ್ಚಿಸಬೇಕು ಎನ್ನುವಾಗ ಯಾರ ಮೇಲೆ ಯಾರಿಗೆ ಪ್ರೀತಿ ಹೆಚ್ಚುವುದೋ ಗೊತ್ತಿಲ್ಲ. ಬಾಡಿಗೆ, ಲೀಸ್‌ ಮುಂದುವರಿಸುವ ನಿರ್ಣಯಗಳಾಗಿವೆ ಎಂದು ಹಿರಿಯ ಸದಸ್ಯರ ವಿರುದ್ಧ ಕುಟುಕಿದರು.

ಒಳಚರಂಡಿ ಚರ್ಚೆಗೆ ಪಟ್ಟು: ಇದಕ್ಕೂ ಮುನ್ನ ಸಭೆ ಆರಂಭವಾಗುತ್ತಿದ್ದಂತೆ ಒಳಚರಂಡಿ ಅವ್ಯವಸ್ಥೆಯನ್ನು ಪ್ರಸ್ತಾಪಿಸಿದ ಕಾಂಗ್ರೆಸ್‌ ಸದಸ್ಯ ಜೈನುಲ್ಲಾದ್ದೀನ ನಮಾಜಿ, ಕಳೆದ ತುರ್ತು ಸಾಮಾನ್ಯ ಸಭೆಯಲ್ಲಿ ಒಳಚರಂಡಿ ಸಮಸ್ಯೆ ಕುರಿತು ಚರ್ಚೆಯಾಗಲಿಲ್ಲ. ಮೊದಲು ಆ ಸಮಸ್ಯೆ ಪರಿಹರಿಸಿ ಸಭೆ ಮುಂದುವರಿಸಿ ಎಂದು ಪಟ್ಟು ಹಿಡಿದರು.

ಬಿಜೆಪಿ ಸದಸ್ಯ ರಾಘವೇಂದ್ರ ಯಳವತ್ತಿ, ಜಿಲ್ಲಾಧಿಕಾರಿಗಳು ನಗರಭೆ ಆಡಳಿತಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸಕ್ಕಿಂಗ್‌ ಯಂತ್ರಗಳ ನಿರ್ವಹಣೆಯನ್ನು ಕೆಡಬ್ಲೂಎಸ್‌ಗೆ ಹಸ್ತಾಂತರಿಸಿದ ರು. ಚಾಲಕರ ವೇತನ, ವಾಹನದ ರಿಪೇರಿ ಖರ್ಚು ಎಲ್ಲವನ್ನು ನಗರಸಭೆ ಭರಿಸಿದರೂ ನಿರ್ವಹಣೆ ಮಾತ್ರ ಕೆಡಬ್ಲೂಎಸ್‌ ಮಾಡುತ್ತಿದೆ. ಆ ನಿರ್ವಹಣೆಯನ್ನು ಮರಳಿ ನಗರಸಭೆಗೆ ತೆಗೆದುಕೊಳ್ಳಲಾಗಿದೆ. ಆದರೆ ನಗರಸಭೆಯ ಯಾವುದೇ ವಿಭಾಗದವರು ಅದರ ನಿರ್ವಹಣೆಗೆ ಮುಂದೆ ಬರುತ್ತಿಲ್ಲ. ಹೀಗಾಗಿ ಸಮಸ್ಯೆಯಾಗಿದೆ. ಸದಸ್ಯರೇ ನಿರ್ವಹಣೆಯ ಜವಾಬ್ದಾರಿ ತೆಗೆದುಕೊಂಡು ಸಮಸ್ಯೆ ಪರಿಹರಿಸಲಾಗುವುದು ಎಂದರು. ನಗರಸಭೆ ಉಪಾಧ್ಯಕ್ಷೆ ಸುನಂದ ಬಾಕಳೆ ಇತರರಿದ್ದರು.

ತೆರಿಗೆ ಹೆಚ್ಚಳ ಅನಿವಾರ್ಯ: ಸರಕಾರದ ಸುತ್ತೋಲೆಯಂತೆ ಕನಿಷ್ಠ ಶೇ.3 ಆಸ್ತಿ ತೆರಿಗೆ ಹೆಚ್ಚಿಸುವುದು ಅನಿವಾರ್ಯ. ತೆರಿಗೆ ಹೆಚ್ಚಿಸದೇ ಹೋದರೆ ಸರಕಾರದಿಂದ ಯಾವುದೇ ಅನುದಾನ ಪಡೆಯಲಾಗಲ್ಲ ಎಂದು ಪೌರಾಯುಕ್ತ ರಮೇಶ್‌ ಸುಣಗಾರ ಮನವರಿಕೆ ಮಾಡಿಕೊಟ್ಟರು. ಬಳಿಕ ಸಭೆ ಅನುಮೋದನೆ ನೀಡಿತು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.