ಅಮೂಲ್ಯ ಲಿಯೋನ್ ವಿರುದ್ಧ ಪ್ರತಿಭಟನೆ
Team Udayavani, Feb 23, 2020, 1:07 PM IST
ನರೇಗಲ್ಲ: ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶನಿವಾರ ವಿಶ್ವ ಹಿಂದು ಪರಿಷತ್, ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಹೊಸ ಬಸ್ ನಿಲ್ದಾಣದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಹೊಸ ಬಸ್ ನಿಲ್ದಾಣದ ಹತ್ತಿರ ಸಮಾವೇಶಗೊಂಡು ಘಟನೆ ಕುರಿತು ಒಕ್ಕೋರಲಿನಿಂದ ಖಂಡಿಸಿದರು.
ವಿಶ್ವ ಹಿಂದು ಪರಿಷತ್ ಮುಖಂಡ ರಘುನಾಥ ಕೊಂಡಿ ಮಾತನಾಡಿ, ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಕಾರ್ಯಕ್ರಮದ ಆಯೋಜಕರ ಮೇಲೂ ಕ್ರಮ ಕೈಗೊಳ್ಳಬೇಕು ಎಂದರು. ಮುಖಂಡರಾದ ಮಂಜುನಾಥ ಹೆಗಡೆ, ಜಗದೀಶ ಸಂಕನಗೌಡ್ರ, ಸಂಜೀವಕುಮಾರ ಕುಲಕರ್ಣಿ, ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತು ಕಡಗದ ಮಾತನಾಡಿದರು. ಶ್ರೀಶೈಲಪ್ಪ ಬಂಡಿಹಾಳ, ಮೌನೇಶ ಹೊಸಮನಿ, ಯಲ್ಲಪ್ಪ ಮಣ್ಣವಡ್ಡರ, ಶಶಿಧರ ಸಂಕನಗೌಡ್ರ, ರಾಮು ನಿರಂಜನ, ಸಂತೋಷ ಕಡೆತೋ ಟದ, ಶಿವು ಸಂಗನಾಳ, ರವಿ ಗೊರ್ಲಿ, ಸುರೇಶ ರಾಯಬಾಗಿ, ರಾಜು ಹಲಗೇರಿ ಸೇರಿದಂತೆ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.