ರಸ್ತೆ ತಡೆದು ಪ್ರತಿಭಟನೆ: ಟೋಲ್ ಮುಕ್ತಿಗೆ ಮನವಿ
Team Udayavani, Feb 26, 2020, 3:12 PM IST
ಗದಗ: ತಾಲೂಕಿನ ಪಾಪನಾಶಿ ಬಳಿ ಟೋಲ್‌ಗೇಟ್ ಅಳವಡಿಸಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಡೋಣಿ ಗ್ರಾಮಸ್ಥರು ಸೋಮವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬೆಳಗ್ಗೆ 11ರ ಸುಮಾರಿಗೆ ಏಕಾಏಕಿ ರಸ್ತೆಗಿಳಿದ ಪ್ರತಿಭಟನಾಕಾರರು, ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಟೋಲ್ ನಿರ್ಮಾಣದಿಂದ ಬಸ್ ಪ್ರಯಾಣ ದರ ದುಪ್ಪಟ್ಟಾಗಿದೆ. ಟಂಟಂ ಹೊರತಾಗಿ ಎಲ್ಲ ಗೂಡ್ಸ್ ವಾಹನಗಳಿಗೆ ಟೋಲ್ ವಿಧಿಸಲಾಗುತ್ತಿದೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ಹೊರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರಿಗೆಟೋಲ್‌ನಿಂದ ಮುಕ್ತಗೊಳಿಸಬೇಕು. ಇಲ್ಲವೇ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಪಟ್ಟು ಹಿಡಿದರು.
ಸುಮಾರು 15 ನಿಮಿಷಗಳ ಕಾಲ ನಡೆದ ಪ್ರತಿಭಟನೆಯಿಂದಾಗಿ ಹತ್ತಾರು ವಾಹನಗಳು ಸಾಲುಗಟ್ಟಿದ್ದವು. ಈ ಕುರಿತು ಸುದ್ದಿತಿಳಿಯುತ್ತಿದ್ದಂತೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ನೇತೃತ್ವದ ಸಿಬ್ಬಂದಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕರರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.
ಟೋಲ್ ಅಳವಡಿಕೆಯಿಂದ ಗದಗನಿಂದ ಮುಂಡರಗಿ ಮಾರ್ಗವಾಗಿ ಸಾಗುವ ಸಾರಿಗೆ ಬಸ್ ಪ್ರಯಾಣಿಕರಿಗೆ ತಲಾ 7 ರೂ. ಹೆಚ್ಚುವರಿಯಾಗಿ ಟಿಕೆಟ್ ನೀಡಲಾಗುತ್ತಿದೆ ಎಂದು ದೂರಿದರು. ಪ್ರತಿಭಟನಾನಿರತರ ಸಮಸ್ಯೆ ಆಲಿಸಿದ ಪೊಲೀಸ್ ಅಧಿಕಾರಿಗಳು, ಈ ಕುರಿತು ಏನೇ ತಕರಾರು ಇದ್ದರೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಮುನ್ಸೂಚನೆ ನೀಡದೇ ರಸ್ತೆ ತಡೆ ನಡೆಸುವುದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಈ ಕೂಡಲೇ ಪ್ರತಿಭಟನೆ ಹಿಂಪಡೆಯದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸುವ ಮೂಲಕ ಪ್ರತಿಭಟನೆ ಶಮನಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.