ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
Team Udayavani, Jun 2, 2020, 6:14 AM IST
ಗಜೇಂದ್ರಗಡ: 2003ರ ವಿದ್ಯುತ್ ಕಾಯ್ದೆ ಪ್ರಸ್ತಾಪಿತ ತಿದ್ದುಪಡಿ, ವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ ಹಾಗೂ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ಸಂಘ ಮತ್ತು ಅಸೋಸೀಯೇಷನ್‌ಗಳ ಒಕ್ಕೂಟದದಿಂದ ಸೋಮವಾರ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟ ಹಾಗೂ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ದೇಶದ ಜನತೆ ಮಹಾಮಾರಿಯ ಹೊಡೆತಕ್ಕೆ ನಲುಗಿ ಹೋಗಿದ್ದಾರೆ. ಕೇಂದ್ರವು ಪರಿಸ್ಥಿತಿಯ ಗಂಭೀರತೆ ಅರಿಯದೇ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಈ ಕಾಯ್ದೆಯಿಂದ ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಹಲವಾರು ಕಾರ್ಮಿಕರಿಗೆ ತೀವ್ರ ಹೊಡೆತ ಬೀಳಲಿದೆ ಎಂದು ದೂರಿದರು.
ಕಾಯ್ದೆ ತಿದ್ದುಪಡಿ ಮಾಡಿದರೆ ವಿದ್ಯುತ್ ಪ್ರಸರಣ ವ್ಯವಸ್ಥೆಯಲ್ಲಿ ಖಾಸಗಿ ಕಂಪನಿಗಳ ಕೈ ಬಲವಾಗಲಿದೆ. ವಿದ್ಯುತ್ ಮಾರಾಟ, ಖರೀದಿ, ಪ್ರಸರಣ, ಸಬ್ ಲೈಸೆನ್ಸಿಂಗ್ ಹಾಗೂ ಪ್ರಾಂಚೈಸಿ ವ್ಯವಸ್ಥೆ ಸಂಪೂರ್ಣವಾಗಿ ಖಾಸಗಿಯವರ ಪಾಲಾಗುತ್ತದೆ. ರೈತರು ಮತ್ತು ಬಡವರಿಗೆ ಉಚಿತವಾಗಿ ನೀಡುತ್ತಿದ್ದ ಸಬ್ಸಿಡಿ ದರದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ದರ ಹೆಚ್ಚಳದ ಅಧಿಕಾರ ಖಾಸಗಿಯವರ ಪಾಲಾಗಲಿದೆ.
ಈ ಹಿನ್ನೆಲೆಯಲ್ಲಿ ಕಾರ್ಮಿಕ, ರೈತರ, ಬಡವರ ವಿರೋಧಿ ಕಾಯ್ದೆಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಹೆಸ್ಕಾಂ ಅಧಿಕಾರಿಗಳಾದ ವೀರೇಶ ರಾಜೂರ, ಬಸವರಾಜ ಮಹಾಮನಿ, ಪ್ರಶಾಂತ್ ಸೂರ್ಯವಂಶಿ, ಜಿ.ಎನ್. ರಂಗ್ರೇಜಿ, ಸಿದ್ದು ಪಾಡಾ, ಬಿ.ವಿ. ಹವಳಪ್ಪನವರ, ಹೀನಾ ಕೌಜಲಗಿ, ಪರಶುರಾಮ ಸವಣೂರ, ಐ.ಬಿ. ಬಡಿಗೇರ, ಆನಂದ ಸೇರಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.