ಎಂಬಿಪಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗೆ ಖಂಡನೆ | ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ
Team Udayavani, May 7, 2019, 12:28 PM IST
ಗದಗ: ದ್ವೇಷದ ರಾಜಕಾರಣದಲ್ಲಿ ತೊಡಗಿರುವ ಗೃಹ ಸಚಿವ ಎಂ.ಬಿ. ಪಾಟೀಲ ಅವರ ರಾಜೀನಾಮೆಗೆ ಆಗ್ರಹಿಸಿ ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಗೃಹ ಸಚಿವ ಎಂ.ಬಿ. ಪಾಟೀಲ ಹಾಗೂ ವಿಪಕ್ಷಗಳ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿರುವ ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿರುವ ಬಿಜೆಪಿ ಹಿತೈಷಿಗಳು, ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ಗೃಹಮಂತ್ರಿ ಎಂ.ಬಿ. ಪಾಟೀಲ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಮಹೇಶ್ ವಿಕ್ರಮ್ ಹೆಗಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತ್‌ಕುಮಾರ್ ಮತ್ತು ಅಜಿತ್ ಶೆಟ್ಟಿ ಹೇರಂಜಿ ಎಂಬುವರ ವಿರುದ್ಧ ದಾಖಲಾಗಿರುವ ಪ್ರಕರಣಗಳೇ ಇದಕ್ಕೆ ಉತ್ತಮ ಉದಾಹರಣೆಯಾಗಿವೆ. ಅಮಾಯಕರ ವಿರುದ್ಧ ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗೃಹ ಸಚಿವ ಎಂ.ಬಿ. ಪಾಟೀಲ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕಳೆದ ಕೆಲ ತಿಂಗಳಿನಿಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವರು, ಶಾಸಕರು ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಒಂದಿಲ್ಲೊಂದು ರೀತಿಯಲ್ಲಿ ಸೇಡಿನ ರಾಜಕಾರಣ ಮಾಡಿದ್ದಾರೆ. ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವಂತೆ ಕರೆ ನೀಡುವ ಮೂಲಕ ತಮ್ಮ ಗೂಂಡಾ ಪ್ರವೃತ್ತಿ ತೋರಿದ್ದಾರೆ. ನಟರಾದ ಯಶ್, ದರ್ಶನ ಅವರಿಗೆ ಜೆಡಿಎಸ್ ಶಾಸಕ ನಾರಾಯಣಗೌಡ ಅವರು ನೇರವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ರಾಜ್ಯ ಸಮ್ಮಿಶ್ರ ಸರಕಾರ ತುಟಿ ಬಿಚ್ಚುತ್ತಿಲ್ಲ ಎಂದು ಕಿಡಿಕಾರಿದರು.
ರಾಜ್ಯ ಸಮ್ಮಿಶ್ರ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಾರ್ವಜನಿಕವಾಗಿ ಟೀಕಿಸುವವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಭಯದ ವಾತಾವರಣ ಸೃಷ್ಟಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಪತಿ ಉಡುಪಿ, ಶಹರ ಘಟಕದ ಅಧ್ಯಕ್ಷ ಜಗನ್ನಾಥಸಾ ಭಾಂಡಗೆ, ನಗರಸಭೆ ಮಾಜಿ ಸದಸ್ಯ ಅನಿಲ ಅಬ್ಬಿಗೇರಿ, ಪ್ರಮುಖರಾದ ಎಂ.ಎಸ್. ಕರಿಗೌಡ್ರ, ಬಿ.ಎಚ್. ಲದ್ವಾ, ಕಾಂತಿಲಾಲ್ ಬನ್ಸಾಲಿ, ಇರ್ಷಾದ್ ಮಾನ್ವಿ, ಅಶೋಕ ಸಂಕಣ್ಣವರ, ಬಿ.ಎಚ್. ಚಿಂಚಲಿ, ನಿಂಗಪ್ಪ ಮಣ್ಣೂರ, ಶಾರದಾ ಹಿರೇಮಠ, ರತ್ನಾ ದಾಸರ, ಪಾರ್ವತಿ ಪಟ್ಟಣಶೆಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.