ಹೊರಗುತ್ತಿಗೆ ನೌಕರರ ಸೇವೆ ಕಾಯಂಗೆ ಆಗ್ರಹಿಸಿ ಪ್ರತಿಭಟನೆ 


Team Udayavani, Oct 26, 2018, 4:43 PM IST

26-october-20.gif

ಗದಗ: ಹೊರಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರ ಸಂಘ ನೇತೃತ್ವದಲ್ಲಿ ನೂರಾರು ನೌಕರರು ಗುರುವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಮಹಾತ್ಮ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಆರಂಭವಾದ ಪ್ರತಿಭಟನೆಗೆ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಚಾಲನೆ ನೀಡಿದರು.

ಬಳಿಕ ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಆರೋಗ್ಯ ಇಲಾಖೆಯಲ್ಲಿ ಖಾಯಂ ಸಿಬ್ಬಂದಿಗಿಂತ ಗುತ್ತಿಗೆ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲಾಖೆಯಲ್ಲಿ ಒಳ ಹಾಗೂ ಹೊರ ಗುತ್ತಿಗೆ ಆಧಾರದಲ್ಲಿ ಜಿಲ್ಲೆಯ 500 ಸೇರಿದಂತೆ ರಾಜ್ಯಾದ್ಯಂತ 30 ಸಾವಿರಕ್ಕಿಂತ ಹೆಚ್ಚಿನ ಗುತ್ತಿಗೆ ನೌಕರರು ಅತ್ಯಲ್ಪ ಸಂಬಳದಲ್ಲಿ ದುಡಿಯುತ್ತಿದ್ದಾರೆ. ಕಡಿಮೆ ಸಂಬಳದಲ್ಲಿ ಸಂಸಾರ ಸಾಗಿಸುವುದೇ ಕಷ್ಟಕರವಾಗಿದೆ ಎಂದು ಅಳಲು ತೋಡಿಕೊಂಡರು.

ನೌಕರರ ಗುತ್ತಿಗೆ ಅವಧಿಯನ್ನು ವಾರ್ಷಿಕ ಬದಲಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ನವೀಕರಿಸಲಾಗುತ್ತಿದೆ. ವರ್ಷಕ್ಕೊಂದು ದಿನ ಬ್ರೇಕ್‌ ಇನ್‌ ಸರ್ವೀಸ್‌ ಪದ್ಧತಿ ಅನುಸರಿಸಲಾಗುತ್ತಿದೆ. ಇಲಾಖೆಯಡಿ ನೇರ ಗುತ್ತಿಗೆ ನೌಕರರಾಗಿದ್ದವರನ್ನು ಇದ್ದಕ್ಕಿಂತ ಹೊರ ಗುತ್ತಿಗೆ ನೌಕರರನ್ನಾಗಿಸುತ್ತಿದೆ. ಇದರಿಂದಾಗಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರಲ್ಲಿ ಸೇವಾ ಅಭದ್ರತೆ ಕಾಡುತ್ತಿದೆ ಎಂದು ದೂರಿದರು.

2016ರಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಂತೆ ಎಲ್ಲ ಗುತ್ತಿಗೆ ನೌಕರರಿಗೆ ಕನಿಷ್ಠ 14 ಸಾವಿರ ರೂ. ವೇತನ ನಿಗದಿಗೊಳಿಸಬೇಕು. ಸೇವಾ ಭದ್ರತೆ ಹಾಗೂ ಕೆಲಸದ ಸ್ಥಳದಲ್ಲಿ ನೌಕರರಿಗೆ ಘನತೆ ಖಾತ್ರಿಪಡಿಸಬೇಕು. ಹರಿಯಾಣ ಮಾದರಿಯಲ್ಲಿ 60 ವರ್ಷದ ಅವಧಿಗೆ ಸೇವಾ ಭದ್ರತೆ, ದೆಹಲಿ ಮಾದರಿಯಲ್ಲಿ ದ್ವಿಗುಣ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.  ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ಅಧ್ಯಕ್ಷ ಡಾ| ಜಯಕುಮಾರ ಬ್ಯಾಳಿ, ಡಾ| ಎಸ್‌.ಎ. ಬಿರಾದಾರ, ಮಹಮ್ಮದಗೌಸ್‌ ಹುನಗುಂದ, ಡಾ| ಮಹೇಶ ಕೊಪ್ಪದ, ರಾಜಣ್ಣ ಕಣವಿ, ಫಕ್ಕಿರೇಶ ಜಂತ್ಲಿ, ಗಿರೀಶ ಶೀರಿ, ರುದ್ರೇಶ ಬಳಿಗಾರ, ಗುರುರಾಜ ಕೆತ್ಯಾಳ, ದಯಾನಂದ ಕೆಂಚರೆಡ್ಡಿ, ಪ್ರವೀಣ ರಾಮಗೇರಿ, ರಘ, ಅಶ್ವತ ರೆಡ್ಡಿ, ರಾಜೇಶ ಜಾಲಿಹಾಳ, ಜ್ಯೋತಿ, ಡಾ| ಗೀತಾ ಧನಗರ, ವಾಸಂತಿ ಮಲ್ಲಾಪುರ, ಉಮೇಶ ಲಮಾಣಿ, ಡಾ| ನಂದಾ ಶಾಸ್ತ್ರಿ, ಮಂಜುನಾಥ ಹಿರೇಮಠ, ಮಂಜು ಕುಂಬಾರ, ಮಲ್ಲಿಕಾರ್ಜುನ ಇದ್ದರು.

ಟಾಪ್ ನ್ಯೂಸ್

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

7

Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ

1-wewqewq

Raichur; ರಾತ್ರೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

13

Udupi: 10 ತಿಂಗಳಲ್ಲಿ 228 ಕಳವು ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.