ಬೆಳೆಹಾನಿ ಪರಿಹಾರ ನೀಡಲು ಒತ್ತಾಯಿಸಿ ಪ್ರತಿಭಟನೆ
Team Udayavani, Oct 6, 2020, 4:14 PM IST
ಗದಗ: ತಾಲೂಕಿನಲ್ಲೂ ಅತಿವೃಷ್ಠಿಯಿಂದ ಬೆಳೆ ಹಾನಿಯಾಗಿದ್ದರೂ ಬೆಳೆ ಪರಿಹಾರ ನೀಡದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ರೈತಸಂಘ, ರೈತಾಭಿವೃದ್ಧಿ ಸಂಘ, ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಚುಕ್ಕಿ ನಂಜುಂಡಸ್ವಾಮಿ ಬಣದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಆರಂಭಗೊಂಡ ರೈತರ ಪ್ರತಿಭಟನಾ ಮೆರವಣಿಗೆ ಮುಳಗುಂದ ನಾಕಾ, ಟಿಪ್ಪು ಸುಲ್ತಾನ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಇದಕ್ಕೂ ಮುನ್ನ ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಉಪಾಧ್ಯಕ್ಷ ಬಸವರಾಜ ಬೆಳದಡಿ, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಎಲ್ಲ ಸರಕಾರಗಳಿಂದಲೂ ರೈತರಿಗೆ ಅನ್ಯಾಯವಾಗಿದೆ. ಈ ಬಾರಿ ಜಿಲ್ಲಾದ್ಯಂತ ನಿರಂತರ ಮಳೆಯಿಂದಾಗಿ ಅತಿವೃಷ್ಟಿ ಆವರಿಸಿದೆ. ಪರಿಣಾಮ ಹೆಸರು,
ಮೆಣಸಿನಕಾಯಿ, ಹತ್ತಿ ಸೇರಿ ಬಹುತೇಕ ಎಲ್ಲ ಬೆಳೆಗಳು ಹಾನಿಗೀಡಾಗಿವೆ. ಜಿಲ್ಲೆಯ ಎಲ್ಲ ತಾಲೂಕಿನ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಿಸಲಾಗುತ್ತಿದೆ. ಆದರೆ ಗದಗ ತಾಲೂಕನ್ನು ಮಾತ್ರ ಕಡೆಗಣಿಸಿರುವುದು ಖಂಡನೀಯ ಎಂದರು.
ಇದನ್ನೂ ಓದಿ :ಕೊನೆಗೂ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಜಲ್ ಅಗರ್ವಾಲ್! ಮದುವೆಗೆ ಡೇಟ್ ಫಿಕ್ಸ್
ರೈತ ಮುಖಂಡ ಪರಮೇಶ್ವರ ಜಂತ್ಲಿ ಮಾತನಾಡಿ, ಮುಂಗಾರಿನಲ್ಲಿ ಅಲ್ಪಸ್ವಲ್ಪ ಹೆಸರು ಬಂದಿದ್ದರೂ, ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯುವುದು ವಿಳಂಬವಾಗಿದ್ದರಿಂದ ಬಹುತೇಕ ಫಸಲು ಮಾರಾಟವಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಿಲ್ಲ. ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ದೊರೆಯದೇ, ಅನ್ನದಾತ ಆತ್ಮಹತ್ಯೆಯ ಹಾದಿ ತುಳಿಯುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತ ಮುಖಂಡ ನಾಗನಗೌಡ ಹಿರೇಮನಿ ಪಾಟೀಲ ಮಾತನಾಡಿ, ಬೆಳೆ ಪರಿಹಾರ ವಿತರಣೆಯಲ್ಲಿ ಗದಗ ತಾಲೂಕನ್ನು ಸರಕಾರ ಉದ್ದೇಶ ಪೂರ್ವಕವಾಗಿ ಕೈಬಿಟ್ಟಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಗಮನ ಹರಿಸಬೇಕು. ಶಾಸಕರು ನಗರಕ್ಕೆ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ್ದಾರೆ. ಆದರೆ, ರೈತರಿಗೆ ಏನು ಮಾಡಿಲ್ಲ ಎಂದು ಆರೋಪಿಸಿದ ಅವರು, 8 ದಿನಗಳಲ್ಲಿ ರೈತರಿಗೆ ನ್ಯಾಯ ದೊರಕಿಸದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ಅಧ್ಯಕ್ಷ ಬಸವರಾಜ ಕವಳಿಕಾಯಿ, ಕಾರ್ಯದರ್ಶಿ ಮೋಹನ ಇಮರಾಪೂರ, ರೈತ ಮುಖಂಡ ಎಂ.ಎಸ್. ಪರ್ವತಗೌಡ್ರ, ವಿರೂಪಾಕ್ಷಪ್ಪ ದೇಸಾಯಿಗೌಡ್ರ, ಎಂ.ಎಸ್. ಸಂಕನಗೌಡ್ರ, ನರಸಪ್ಪ ತುಕ್ಕಪ್ಪನವರ, ಬಸಪ್ಪ ಕಲಬಂಡಿ, ಬಸವರಾಜ ಹುಬ್ಬಳ್ಳಿ ವಿ.ಎಸ್.ಅಕ್ಕಿ, ಸಿದ್ದಲಿಂಗಪ್ಪ ಅರಳಿ, ಕರಬಸಯ್ಯ ನಲವತ್ವಾಡಮಠ, ಸೋಮು ಮುಳಗುಂದಸೇರಿದಂತೆ ತಾಲೂಕಿನ 58 ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.