ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Jun 15, 2019, 10:17 AM IST
ಗದಗ: ಬರ ನಿರ್ವಹಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗದಗ: ಕಳೆದ ನಾಲ್ಕೈದು ವರ್ಷಗಳಿಂದ ಜಿಲ್ಲೆಯು ಬರಗಾಲದಿಂದ ತತ್ತರಿಸಿ ಹೋಗಿದೆ. ಈ ಹಿನ್ನೆಲೆಯಲ್ಲಿ ಸಮಪರ್ಕವಾಗಿ ಬರ ಪರಿಹಾರ ಕೈಗೊಳ್ಳುವುದರ ಜೊತೆಗೆ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಪ್ರಚಾರಕ್ಕೆ ಸೀಮಿತವಾಗಿದೆ. ವೈಜ್ಞಾನಿಕ ಬೆಲೆ ನಿಗದಿ, ಬೆಲೆ ನಿಗದಿ ಮತ್ತು ನಿಯಂತ್ರಣ ಆಪತ್ಕಾಲಿನ ನಿಧಿ ಸ್ಥಾಪನೆ, ಬೆಳೆ ವಿಮೆಯನ್ನು ಸರಕಾರವೇ ತುಂಬುವ ಯೋಜನೆ ಜಾರಿಗೆ ತರಬೇಕು. ಬರಗಾಲದ ಸಂದರ್ಭದಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ವಿಡಿಯೋ ಚಿತ್ರೀಕರಣ ಮಾಡಬೇಕು. ಮಹದಾಯಿ (ಕಳಸಾ-ಬಂಡೂರಿ) ಯೋಜನೆಗೆ ಸರಕಾರ ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.
ಶಾಶ್ವತ ಬರಗಾಲ ನಿವಾರಣೆಗೆ ಸಮಗ್ರ ನೀರಾವರಿ ಯೋಜನೆ ಜಾರಿಗೆ ತರಬೇಕು. ಕಬ್ಬಿನ ಬಾಕಿ ಹಣ ತಕ್ಷಣವೇ ಬಿಡುಗಡೆ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ರೈತರೊಂದಿಗೆ ಸಬ್‌ರಜಿಷ್ಟರ್ ಕಚೇರಿಯಲ್ಲಿ ನೋಂದಣಿ ಕರಾರು ಪತ್ರ ಕಡ್ಡಾಯಗೊಳಿಸಬೇಕು. 60 ವರ್ಷ ಮೀರಿದ ರೈತರಿಗೆ ಮಾಸಿಕ 6000 ರೂ. ಪಿಂಚಣಿ ಹಣ ಒದಗಿಸಬೇಕು. ನೈಸರ್ಗಿಕ ವಿಪತ್ತಿನಿಂದ ಆಸ್ತಿ ಹಾನಿಗೆ 5 ಪಟ್ಟು ಪರಿಹಾರ ನೀಡಬೇಕು. ಚಳವಳಿ ಸಂದರ್ಭದಲ್ಲಿ ರೈತರ ಮತ್ತು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ಕೈಬಿಡಬೇಕು. ಜಿಂದಾಲ್ ಕಂಪನಿಗೆ ಭೂಮಿ ಕೊಡಲು ಕೈಗೊಂಡಿರುವ ಸಂಪುಟ ನಿರ್ಣಯ ಹಿಂಪಡೆದು, ರಾಜ್ಯಪತ್ರ ಹೊರಡಿಸಬೇಕು. ರಾಜ್ಯದಲ್ಲಿ ರೈತರ ಸಾಲ ಮನ್ನಾ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ, ರಾಜ್ಯ ಕಾರ್ಯಾಧ್ಯಕ್ಷ ಕೆ.ಜಿ. ಶಾಂತಸ್ವಾಮಿಮಠ, ನೂಲೆನೂರು ಎಂ. ಶಂಕರಪ್ಪ, ಚೆ.ಎಂ. ವೀರಸಂಗಯ್ಯ, ರವಿಕಿರಣ ಪೂರ್ಣಚ್ಛ, ಆರ್.ಎಸ್. ಮಠ, ಟಿ.ಟಿ. ರಾಮಸ್ವಾಮಿ, ಎಂ. ರಾಮು, ರವಿಕುಮಾರ ಬಲ್ಲೂರ, ಪಿ. ಗೋಪಾಲ, ಎಂ.ಬಿ. ಸಂಕನಗೌಡ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.