ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಿ: ಡಿಸಿ

Team Udayavani, Aug 31, 2020, 4:18 PM IST

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಿ: ಡಿಸಿ

ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪಾತ್ರದ ಜನರು ಪ್ರತಿವರ್ಷ ಪ್ರವಾಹಕ್ಕೆ ಸಿಲುಕುತ್ತಿದ್ದು, ಜಿಲ್ಲೆಯ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಧಿಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

ನಗರದ ಜಿಪಂ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಜಿಲ್ಲೆಯ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿ ವರ್ಷ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳನ್ನು ಗುರುತಿಸಿ, ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ ನಷ್ಟವನ್ನು ತಪ್ಪಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಹದಿಂದ ಮುಳುಗಡೆಯಾಗಿರುವ ರೈತರ ಕೃಷಿ ಹಾಗೂ ತೋಟಗಾರಿಕೆ ಜಮೀನುಗಳ ಬೆಳೆಹಾನಿ ಕುರಿತು ಜಂಟಿ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ತಹಶೀಲ್ದಾರ್‌ರು ಸಮೀಕ್ಷೆಯಲ್ಲಿ ಭಾಗವಹಿಸಿ, ನಿಖರವಾದ ವರದಿ ನೀಡಬೇಕು. ಪ್ರಸಕ್ತ ಸಾಲಿನ ಬೆಳೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ರೈತರಿಗೆ ಮೊಬೈಲ್‌ ಆ್ಯಪ್‌ ಮೂಲಕ ಅವಕಾಶ ಒದಗಿಸಲಾಗಿದ್ದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ. ಯಾವುದೇ ರೈತ ಬೆಳೆ ಸಮೀಕ್ಷೆಯಿಂದ ವಂಚಿತರಾಗದಂತೆ ಕ್ರಮಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವವರ ಹಾಗೂ ಅನ ಧಿಕೃತವಾಗಿ ದಾಸ್ತಾನು ಮಾಡುವವರ ಮೇಲೆ ನಿಗಾವಹಿಸಿ, ರಸಗೊಬ್ಬರ ಹಂಚಿಕೆ ಸಂದರ್ಭದಲ್ಲಿ ನೂಕು ನೂಗ್ಗಲುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸಬೇಕು. ಕೃತಕ ಅಭಾವ ಹಾಗೂ ಅನ ಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತಿಳಿಸಿದರು. ಜಿಪಂ ಸಿಇಒ ಡಾ| ಆನಂದ್‌ ಕೆ. ಮಾತನಾಡಿ, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸೋಂಕಿತರಿಗೆ ನಿಯಮಾನುಸಾರ ಚಿಕಿತ್ಸೆ ನೀಡಿ, ಗುಣಮುಖರಾದ ತಕ್ಷಣ ಬಿಡುಗಡೆ ಮಾಡಬೇಕು. ಅಲ್ಲದೇ, ಆರೈಕೆ ಕೇಂದ್ರಗಳಲ್ಲಿ ಸೋಂಕಿತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ಕೊಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್‌ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಎಸ್‌.ಎನ್‌. ರುದ್ರೇಶ್‌, ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.