ಜಿಪಂ ಅಧ್ಯಕ್ಷರಾಗಿ ರಾಜೂಗೌಡ ಆಯ್ಕೆ
19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ನ 11, ಬಿಜೆಪಿಯ 5 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿ
Team Udayavani, Jun 20, 2020, 6:59 AM IST
ಗದಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇನ್ನುಳಿದ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ನೂತನ ಅಧ್ಯಕ್ಷರಾಗಿ ಕೊಣ್ಣೂರು ಕ್ಷೇತ್ರದ ಕಾಂಗ್ರೆಸ್ ಸದಸ್ಯ ಹಾಗೂ ಯುವ ನಾಯಕ ರಾಜೂಗೌಡ ಸಂಕನಗೌಡ ಕೆಂಚನಗೌಡ್ರ ಅವಿರೋಧವಾಗಿ ಆಯ್ಕೆಯಾದರು.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಆಮ್ಲನ್ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜಿಪಂ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಜರುಗಿತು. ಗದಗ ಜಿಪಂ ಅಧ್ಯಕ್ಷರಾಗಿದ್ದ ಸಿದ್ಧಲಿಂಗೇಶ್ವರ ಎಚ್. ಪಾಟೀಲ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದಸ್ಥಾನಕ್ಕೆ ರಾಜ್ಯ ಸರ್ಕಾರದ ಆದೇಶದಂತೆ ಇನ್ನುಳಿದ ಅವಧಿಗೆ ಚುನಾವಣೆ ನಡೆಸಲಾಯಿತು. ಜಿಪಂನ ಒಟ್ಟು 19 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ನ 11 ಹಾಗೂ ಬಿಜೆಪಿಯ ಐವರು ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಒಟ್ಟು 11 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಆಡಳಿತಾರೂಢ ಪಕ್ಷದಿಂದ ಕೊಣ್ಣೂರು ಕ್ಷೇತ್ರದ ಕಾಂಗ್ರೆಸ್ ಸದಸ್ಯ ಹಾಗೂ ಯುವ ನಾಯಕ ರಾಜೂಗೌಡ ಸಂಕನಗೌಡ ಕೆಂಚನಗೌಡ್ರ ಅವರೊಬ್ಬರೇ ಉಮೇದುವಾರಿಕೆ ಸಲ್ಲಿಸಿದರು. ನಿಯಮಾನುಸಾರ ರಾಜೂಗೌಡ್ರ ಅವರ ನಾಮಪತ್ರ ಪರಿಶೀಲಿಸಿದ ಪ್ರಾದೇಶಿಕ ಆಯುಕ್ತರು, ನಾಮಪತ್ರ ಕ್ರಮಬದ್ಧವಾಗಿದೆ ಎಂದು ಘೋಷಿಸಿದರು.
ನಂತರ ಚುನಾವಣಾ ನಿಯಮಗಳ ಪ್ರಕಾರ ನಾಮಪತ್ರಹಿಂಪಡೆಯಲು ನೀಡದ್ದ ಸಮಯಾವಕಾಶ ಮುಗಿದಿದ್ದರಿಂದ ರಾಜೂಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿ, ಹೂಗುತ್ಛ ನೀಡಿ ಅಭಿನಂದಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ|ಆನಂದ್.ಕೆ, ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್ ಎಂ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪಕಾರ್ಯದರ್ಶಿ ಕಲ್ಲೇಶ, ಜಿಪಂ ಹಂಗಾಮಿ ಅಧ್ಯಕ್ಷೆ ಮಲ್ಲವ್ವ ಬಿಜ್ಜೂರು, ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಎಸ್.ಪಿ. ಬಳಿಗಾರ, ಸಿದ್ಧಲಿಂಗೇಶ್ವರ ಎಚ್.ಪಾಟೀಲ, ಸದಸ್ಯರಾದ ರೂಪಾ ಅಂಗಡಿ, ಮಂಜುಳಾ ಹುಲ್ಲಣ್ಣವರ, ಶೋಭಾ ಮೇಟಿ, ರೇಖಾ ತಿಮ್ಮರೆಡ್ಡಿ ಅಳವಂಡಿ, ಬಿಜೆಪಿ ಸದಸ್ಯರಾದ ಶಿವಕುಮಾರ ನೀಲಗುಂದ, ಪಡಿಯಪ್ಪ ಪೂಜಾರ, ರೇಣುಕಾ ಶಿವಪುತ್ರಪ್ಪ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಬೆಂಬಲಿಗರು ಹೂಗುಚ್ಛ ನೀಡಿ, ಶುಭ ಕೋರಿದರು.
ನೆರೆ ಪರಿಹಾರದ ಭರವಸೆ: ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೂಗೌಡ ಕೆಂಚನಗೌಡ್ರ, ಜಿಲ್ಲೆಯ ನೆರೆ ಪೀಡಿತ ನರಗುಂದ ಮತ್ತು ರೋಣ ತಾಲೂಕಿನ ನೆರೆ ಪೀಡಿತ ಗ್ರಾಮಗಳಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವುದು, ಗ್ರಾಮೀಣ ಜನರಿಗೆ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಕಾರ್ಯಗಳಿಗೆ ಒತ್ತು ನೀಡಲಾಗುವುದು. ಈ ಹಿಂದೆ ಸಿದ್ದು ಪಾಟೀಲ ಅವರು ಅಧ್ಯಕ್ಷರಾಗಿದ್ದಾಗ ನೆರೆ ಪೀಡಿತ ಗ್ರಾಮಗಳ ಜನರ ಆಸ್ತಿ ಹಾಗೂ ಕುಡಿಯುವ ನೀರಿನ ಕರವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸರಕಾರಕ್ಕೆ ಜಿಪಂ ಠರಾವು ಸಲ್ಲಿಸಲಾಗಿತ್ತು. ಈ ಬಗ್ಗೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಈ ಕುರಿತು ಮರು ಪರಿಶೀಲಿಸಿ, ಸರಕಾರದ ಮೇಲೆ ಒತ್ತಡ ತರುವ ಕೆಲಸ ಮಾಡವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.