ದಿಢೀರ್ ದಾಳಿ: ಪ್ಲಾಸ್ಟಿಕ್ ವಶ
Team Udayavani, Dec 10, 2019, 3:26 PM IST
ಗಜೇಂದ್ರಗಡ: ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಸಂಪೂರ್ಣ ನಿಷೇಧಿಸಲು ಪಣತೊಟ್ಟಿರುವ ಗಜೇಂದ್ರಗಡ ಪುರಸಭೆ ಅಧಿಕಾರಿಗಳು ಪಟ್ಟಣದಲ್ಲಿ ಸೋಮವಾರ ದಿಢೀರ್ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡರು.
ಪಟ್ಟಣದ ಕುಷ್ಟಗಿ ರಸ್ತೆ ಬಳಿಯ ಶ್ರೀ ಶರಣಬಸವೇಶ್ವರ ಕಿರಾಣಿ ಸ್ಟೋರ್ ಮೇಲೆ ದಾಳಿ ನಡೆಸಿ 50 ಕೆಜಿ ಪ್ಲಾಸ್ಟಿಕ್‌ನ್ನು ವಶಕ್ಕೆ ಪಡೆದು 5 ಸಾವಿರ ರೂ. ದಂಡ ವಿಧಿಸಿದರು. ದುರ್ಗಾ ವೃತ್ತ, ಅಂಬೇಡ್ಕರ್ ವೃತ್ತ ಬಳಿಯ ಮಾಂಸದ ಅಂಗಡಿಗಳ ಮೇಲೆಯೂ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವುದಲ್ಲದೇ 6 ಮಾಂಸದ ಅಂಗಡಿಗಳಿಗೆ ತಲಾ 500 ರೂ. ನಂತೆ ದಂಡ ವಿಧಿಸಿದರು. ಬಳಿಕ ಸಾರ್ವಜನಿಕರು ಪ್ಲಾಸ್ಟಿಕ್ ಚೀಲಗಳನ್ನು ಹಿಡಿದು ತೆರಳುತ್ತಿದ್ದ ಮೂವರಿಗೆ 100 ರೂ. ದಂಡ ಹೇರಲಾಯಿತು. ಪುರಸಭೆ ಆರೋಗ್ಯ ನಿರೀಕ್ಷಕ ರಾಘವೇಂದ್ರ ಮಂತಾ, ಶಿವಕುಮಾರ ಇಲ್ಲಾಳ, ಹನಮಂತ ಚಲವಾದಿ, ದುರುಗಪ್ಪ ಬಂಗಾಳಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.