ಭರದಿಂದ ಸಾಗಿದೆ 52 ಮರಗಳ ಸ್ಥಳಾಂತರ ಕಾರ್ಯ

­ರಸ್ತೆ ಅಗಲೀಕರಣ ಹಿನ್ನೆಲೆ ಸ್ವತ್ಛಂದವಾಗಿ ಬೆಳೆದು ನಿಂತ ಮರಗಳಿಗೆ ಮರುಜೀವ ಕಲ್ಪಿಸಲು ಕ್ರಮ

Team Udayavani, Jul 11, 2021, 10:21 PM IST

10gjd1

ಗಜೇಂದ್ರಗಡ: ರಸ್ತೆ ಅಗಲೀಕರಣಕ್ಕೆ ಬಲಿಯಾಗುತ್ತಿದ್ದ ಸ್ವತ್ಛಂದವಾಗಿ ಬೆಳೆದು ನಿಂತಿದ್ದ 52 ಮರಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ಪಟ್ಟಣದಲ್ಲಿ ಭರದಿಂದ ಸಾಗಿದೆ.

ರಾಮಾಪೂರದಿಂದ ಗಜೇಂದ್ರಗಡ ಮಾರ್ಗವಾಗಿ ಕಾತ್ರಾಳ ಕ್ರಾಸ್‌ ವರೆಗಿನ ರಾಷ್ಟ್ರೀಯ ಹೆದ್ದಾರಿ 367ರ ಕಾಮಗಾರಿ ಈಗಾಗಲೇ ಪಟ್ಟಣದಲ್ಲಿ ಭರದಿಂದ ಸಾಗಿದೆ. ಹೆದ್ದಾರಿ ಪ್ರಾಧಿಕಾರ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಆದರೆ, ಸುಂದರವಾಗಿ ಬೆಳೆದು ನಿಂತ ಮರಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸ್ಥಳೀಯ ಶಾಸಕರ ಸಹಕಾರದಿಂದ ಅರಣ್ಯ ಇಲಾಖೆ ಮರಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಮರಗಳಿಗೆ ಮರುಜೀವ ತುಂಬುವ ಕಾರ್ಯ ಭರದಿಂದ ನಡೆದಿದೆ. ನಗರೀಕರಣದಿಂದ ಮರಗಳಿಗೆ ಕೊಡಲಿ ಪೆಟ್ಟು ಬೀಳುತ್ತಿದ್ದು, ಪರಿಸರ ರಕ್ಷಣೆಯ ಹಂಬಲದಿಂದ ಜನಪ್ರತಿನಿಧಿಗಳು ಮರಗಳನ್ನು ಸ್ಥಳಾಂತರಿಸಿ ಜೀವ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ.

ವಿದೇಶಗಳಲ್ಲಿ ಮರಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸ್ಥಳಾಂತರಿಸಿರುವ ನಿದರ್ಶನಗಳನ್ನು ಪ್ರೇರಣೆಯಾಗಿಸಿಕೊಂಡು ಮರಗಳ ಸ್ಥಳಾಂತರ ಮಾಡುವ ಉಪಾಯ ಕಂಡುಕೊಂಡಿದ್ದಾರೆ. ಸಮೀಪದ ರಾಮಾಪೂರ ಗ್ರಾಮದ ರಸ್ತೆ ಮಧ್ಯೆದಲ್ಲಿನ 20 ರಿಂದ 25 ವರ್ಷಗಳ 52 ಅರಳಿ ಮರ, ಹತ್ತಿ ಮರ, ಆಲದ ಮರಗಳನ್ನು ಸ್ಥಳಾಂತರಿಸಲು ಅರಣ್ಯ ಇಲಾಖೆ ನಿರ್ಧಸಿದೆ. ಈಗಾಗಲೇ ಮರಗಳ ಸ್ಥಳಾಂತರಕ್ಕೆ ಪಟ್ಟಣದ ಗುಡ್ಡಕ್ಕೆ ಹೊಂದಿಕೊಂಡಿರುವ ಇಂಗು ಕೆರೆಯಲ್ಲಿ ಗುಂಡಿಗಳನ್ನು ಸಹ ತೆಗೆಯಲಾಗಿದ್ದು, ಮರಗಳ ಬೇರು ಬಾಡದಂತೆ ರಾಸಾಯನಿಕ ನಿಂಪಡಿಸಲಾಗಿದೆ. ಗದಗ ಜಿಲ್ಲೆ ಹೊರತುಪಡಿಸಿದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮರಗಳ ಸ್ಥಳಾಂತರ ಕಾರ್ಯ ಗಜೇಂದ್ರಗಡದಲ್ಲಿಯೇ ನಡೆಯುತ್ತಿರುವುದು ಪರಿಸರ ಪ್ರೇಮಿಗಳ ಸಂತಸಕ್ಕೆ ಕಾರಣವಾಗಿದೆ.

ಮರ ಸ್ಥಳಾಂತರ ವಿಧಾನ: ರಾಮಾಪೂರ ಗ್ರಾಮದ ಬಳಿಯ ಮರದ ಸುತ್ತಳತೆಯ ಎರಡು ಪಟ್ಟು ಆಳದ ಗುಂಡಿ ತೆಗೆದು, ತಾಯಿ ಬೇರಿಗೆ ಹಾನಿಯಾಗದಂತೆ ಮಣ್ಣು ಸಮೇತ ಬೇರಿಗೆ ಹಾಗೂ ಮರಕ್ಕೆ ಔಷ ಧ ಹಾಕಲಾಗಿದೆ. ಮಣ್ಣು ಬೀಳದಂತೆ ಗೋಣಿ ಚೀಲದಿಂದ ಭದ್ರಪಡಿಸಿ, ಮರ ನೆಡುವ ಕಡೆಗೆ ಮರದ ಸುತ್ತಳತೆಗೆ ಮೂರು ಪಟ್ಟು ಮೀರಿ ಆಳ ತೆಗೆದು ಮರಳು ಮತ್ತು ಎನ್‌ಜಿನ್ಸ್‌ ಎಂಬ ಔಷಧ ಹಾಕಿ ನೆಡಲಾಗಿದೆ. ಮರ ನೆಟ್ಟ ಎರಡು ತಿಂಗಳೊಳಗೆ ಚಿಗುರೊಡೆಯಲಿದೆ ಎಂಬುದು ಅರಣ್ಯ ಇಲಾಖೆ ಅಧಿ ಕಾರಿಗಳ ಮಾತಾಗಿದೆ.

ಪರಿಸರ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ರಸ್ತೆ ಅಗಲೀಕರಣಕ್ಕೆ ಬಲಿಯಾಗುವ ಮರಗಳನ್ನು ಸ್ಥಳಾಂತರಿಸಲು ಸರಕಾರ ಅರಣ್ಯ ಇಲಾಖೆಯಲ್ಲಿ ಪ್ರತ್ಯೇಕ ಘಟಕ ತೆರೆದು ಹಣ ಮೀಸಲಿಡಬೇಕು. ಮರಗಳ ಸ್ಥಳಾಂತರಕ್ಕೆ ತಗಲುವ ವೆಚ್ಚ ದೊಡ್ಡದಲ್ಲ. ಬದಲಾಗಿ ಮರಗಳ ಮೌಲ್ಯವೇ ಮುಖ್ಯವಾಗಿದೆ. ಮರಗಳಿಗೆ ಸೋಂಕು ತಗಲದಂತೆ ಔಷಧ ಲೇಪನ ಮಾಡಬೇಕು. ಸ್ಥಳಾಂತರವಾಗುವ ಎಲ್ಲ ಮರಗಳು ಸಹ ಸುರಕ್ಷಿತವಾಗಿ, ಆರೋಗ್ಯಯುತವಾಗಿ ಸಮೃದ್ಧಗೊಳ್ಳುವಂತೆ ನೋಡಿಕೊಳ್ಳಬೇಕು ಎಂಬುದು ಪರಿಸರ ಪ್ರೇಮಿಗಳ ಒತ್ತಾಸೆಯಾಗಿದೆ.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.