ಹಡಗಲಿ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕೆ ಆಗ್ರಹಿಸಿ ಮನವಿ
Team Udayavani, Jul 15, 2019, 2:41 PM IST
ರೋಣ: ಯಾ.ಸ. ಹಡಗಲಿ ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಕಾರಿ ಅವರಿಗೆ ಮನವಿ ಸಲ್ಲಿಸಿದರು.
ರೋಣ: ತಾಲೂಕಿನ ಯಾ.ಸ. ಹಡಗಲಿ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಪ್ರಾರಂಭವಾಗಿ ಆರೇಳು ವರ್ಷಗಳು ಕಳೆದಿದೆ. ಇದುವರೆಗೂ ನೂತನ ಕಟ್ಟಡ ನಿರ್ಮಿಸಿಲ್ಲ. ಕೂಡಲೇ ಕಟ್ಟಡ ನಿರ್ಮಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿ ಯಾ.ಸ. ಹಡಗಲಿ ಗ್ರಾಮಸ್ಥರು ತಹಶೀಲ್ದಾರ ಶರಣಮ್ಮ ಕಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಹಾದಿಮನಿ, 2013 ರಲ್ಲಿ ಗ್ರಾಮದಲ್ಲಿ ಉನ್ನತೀಕರಿಸಿದ ಪ್ರೌಢಶಾಲೆ ಪ್ರಾರಂಭವಾಗಿದೆ. ಗ್ರಾಮದ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶಾಲೆ ಪ್ರಾರಂಭಿಸಿರುವುದು ಸ್ವಾಗತಾರ್ಹ. ಆದರೆ 7 ವರ್ಷಗಳು ಕಳೆದರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದುವರೆಗೂ ಇತ್ತ ಗಮನಹರಿಸುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕಟ್ಟಡ ನಿರ್ಮಾಣಕ್ಕೆ 1. 10 ಎಕರೆ ಜಾಗ ಗುರುತಿಸಲಾಗಿದೆ.ಎಲ್ಲ ಅನುಕೂಲತೆಗಳಿದ್ದರು ಕಟ್ಟಡ ನಿರ್ಮಾಣ ಮಾಡಲು ಹಿಂದೇಟು ಹಾಕುತ್ತಿರುವುದು ಖಂಡನೀಯ.
ಸ್ವಂತ ಕಟ್ಟಡವಿಲ್ಲದಿರುವುದರಿಂದ ಶಿಕ್ಷಕರು ಪ್ರಾಥಮಿಕ ಶಾಲೆ ಕೊಠಡಿಯಲ್ಲಿ ಪಾಠ ಮಾಡುವಂತ ಸ್ಥಿತಿ ನಿರ್ಮಾಣವಾಗಿದೆ.ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಶರಣಪ್ಪ ಬೇವಿನಕಟ್ಟಿ, ಮೆಹಬೂಬ್ ನದಾಫ್, ಶರಣಪ್ಪ ಕೊಪ್ಪದ, ಗುರುಶಾಂತಪ್ಪ ಸೂಡಿ, ನಿಂಗಪ್ಪ ಹೊನ್ನಾಪುರ, ಭೀಮಣ್ಣ ಇಂಗಳಿ, ರುದ್ರೇಶ ಮಾದರ, ಗದ್ದೇಶ ಹಿರೇಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.