ಎನ್‌ಪಿಎಸ್‌ ರದ್ದತಿಗೆ ಆಗ್ರಹ


Team Udayavani, Oct 4, 2018, 4:09 PM IST

4-october-17.gif

ಗದಗ: ಸರಕಾರಿ ನೌಕರರಿಗೆ ಮಾರಕವಾಗಿರುವ ಎನ್‌ಪಿಎಸ್‌(ರಾಷ್ಟ್ರೀಯ ಪೆನ್ಶನ್‌ ಸ್ಕೀಮ್‌) ರದ್ದುಗೊಳಿಸುವಂತೆ ಆಗ್ರಹಿಸಿ ಎನ್‌ಪಿಎಸ್‌ ನೌಕರರು ನಗರದಲ್ಲಿ ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ‘ರಕ್ತ ಕೊಟ್ಟೇವು ಪಿಂಚಣಿ ಬಿಡೆವು’,’ ಎನ್‌ ಪಿಎಸ್‌ ಹಠಾವೋ ನೌಕರ ಬಚಾವೋ’ ಎಂಬ ಘೋಷಣೆಗಳೊಂದಿಗೆ ಕೂಗಿ ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಇಲ್ಲಿನ ಕೆ.ಸಿ.ರಾಣಿ ರಸ್ತೆಯಲ್ಲಿರುವ ದುಂಡಪ್ಪ ಮಾನ್ವಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೂರಾರು ಎನ್‌ಪಿಎಸ್‌ ನೌಕರರು ರಕ್ತದಾನ ಮಾಡಿ, ಸರಕಾರದ ವಿರುದ್ಧ ಹೋರಾಟದ ಕಹಳೆ ಊದಿದರು. ನೂತನ ಪಿಂಚಣಿ ಯೋಜನೆಯಲ್ಲಿ ಹಲವಾರು ಲೋಪದೋಷಗಳಿವೆ. ಎನ್‌ಪಿಎಸ್‌ನಲ್ಲಿರುವ ಅವೈಜ್ಞಾನಿಕ ಅಂಶಗಳಿಂದ ಸರಕಾರಿ ನೌಕರರು ತೊಂದರೆಗೊಳಗಾಗುವಂತಾಗಿದೆ. ಮರಣ ಹೊಂದಿದ ನೌಕರರ ಅವಲಂಬಿತರಿಗೆ ಸಮರ್ಪಕವಾಗಿ ಪಿಂಚಣಿ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಿಂಚಣಿ ಯೋಜನೆಯನ್ನು ಷರತ್ತು ರಹಿತವಾಗಿ ಸಂಪೂರ್ಣ ಹೊರತರಲು ಹಾಗೂ ನಿಶ್ಚಿತ ಪಿಂಚಣಿಯನ್ನು ಮರುಸ್ಥಾಪಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೃಹತ್‌ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಕ್ತದಾನಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ್‌ ಮಾತನಾಡಿ, 2006ರಿಂದ ರಾಜ್ಯ ಸರ್ಕಾರಿ ನೌಕರರಿಗೆ ನಿಗದಿತ ಪಿಂಚಣಿ ಯೋಜನೆ ರದ್ದುಪಡಿಸಿ, ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿ ಮಾಡಲಾಗಿದೆ. ಈ ಅವೈಜ್ಞಾನಿಕ ಪಿಂಚಣಿ ಯೋಜನೆಯಿಂದ ದಿನದಿಂದ ದಿನಕ್ಕೆ ಸಮಸ್ಯೆಗಳು ಹೆಚ್ಚುತ್ತಿವೆ. ಇಂತಹ ಅನೇಕ ಸಮಸ್ಯೆಗಳಿಂದ ಎನ್‌ಪಿಎಸ್‌ ನೌಕರರು ಮರಣ ಹೊಂದಿದ್ದು, ಅವರ ಕುಟುಂಬಗಳು ಸಂಕಷ್ಟ ಎದುರಿಸುವಂತಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಎನ್‌ಪಿಎಸ್‌ ಪಿಂಚಣಿ ಯೋಜನೆ ಕೈಬಿಡಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ ಮಾತನಾಡಿದರು. ಎನ್‌ ಪಿಎಸ್‌ ನೌಕರರ ಸಂಘದ ತಾಲೂಕಾಧ್ಯಕ್ಷ ಎಂ.ಕೆ. ಹುಯಿಲಗೋಳ ಅಧ್ಯಕ್ಷತೆ ವಹಿಸಿದ್ದರು.

ಪ್ರಕಾಶಗೌಡ ಪಾಟೀಲ, ಕೆ.ಎಫ್‌. ಹಳ್ಯಾಳ, ವಿ.ಬಿ. ಪೊಲೀಸ್‌ಪಾಟೀಲ, ಎಸ್‌.ಎಂ. ಪಾಟೀಲ, ಎಸ್‌.ಸಿ. ನಾಗರಳ್ಳಿ, ನಾಗರಾಜ ಸಂಕಣ್ಣವರ, ವಿ.ಜಿ. ಖೋಟೆ, ಡಿ.ಎಸ್‌. ತಳವಾರ, ಎಸ್‌.ಆರ್‌. ಕೋಣಿಮನಿ, ದೇವರಡ್ಡಿ ಸೋಮಣ್ಣವರ, ಎಂ.ಜೆ. ನದಾಫ, ಮಹ್ಮದಇಸ್ಮಾಯಿಲ್‌ ನದಾಫ್‌, ಶಿವಮೂರ್ತಿ ಲಿಂಗಶೆಟ್ಟರ, ಅಂದಾನಯ್ಯ ಮಠದ, ನಾಗರಾಜ ಸುರಕೋಡ, ಯೋಗೇಶ ನಾಟಗಾರ, ಫಕ್ರುಸಾಬ್‌ ಪಿಂಜಾರ, ಅಬ್ದುಲ್‌ ಶಿರಹಟ್ಟಿ, ಶಿವು ನಡಕಟ್ಟಿ, ಅಲ್ಲಾಭಕ್ಷಿ ಜವುಳಗೇರಿ ಇತರರು ಇದ್ದರು. 

ಟಾಪ್ ನ್ಯೂಸ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

1

Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.