ಗದಗ-ಬೆಟಗೇರಿ ನಗರಸಭೆಗೆ ಪರಿಷ್ಕೃತ ಮೀಸಲು ಪ್ರಕಟ
ಕಳೆದ ಎರಡೂವರೆ ವರ್ಷಗಳಿಂದ ಚುನಾವಣೆ ನನೆಗುದಿಗೆ ಬಿದ್ದಿತ್ತು.
Team Udayavani, Nov 25, 2021, 2:20 PM IST
ಗದಗ: ಪ್ರಸಕ್ತ ಸಾಲಿನ ಅಂತ್ಯದೊಳಗೆ ಗದಗ-ಬೆಟಗೇರಿ ನಗರಸಭೆಗೆ ಚುನಾವಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ನ ಧಾರವಾಡ ಪೀಠ ಸೂಚಿಸಿದ ಬೆನ್ನಲ್ಲೇ ರಾಜ್ಯ ಸರಕಾರ ಪರಿಷ್ಕೃತ ಮೀಸಲಾತಿ ಪಟ್ಟಿ ಪ್ರಕಟಿಸಿದೆ.
ನ.4 ರಂದು ಪ್ರಕಟಿಸಿದ್ದ ಪಟ್ಟಿಯ 8 ವಾರ್ಡ್‌ಗಳ ಮೀಸಲು ಬದಲಾಯಿಸಿ ಆದೇಶ ಹೊರಡಿಸಿದೆ. ಕಳೆದ ಬಾರಿ ಮತ್ತು ಈ ಬಾರಿ ಪಟ್ಟಿಯಲ್ಲಿ 8 ವಾಡ್ ìಗಳ “ಸಾಮಾನ್ಯ’ ಮತ್ತು “ಸಾಮಾನ್ಯ ಮಹಿಳೆ’ ಯಾಗಿ ಅದಲು ಬದಲಾಗಿವೆ. ಗದಗ-ಬೆಟಗೇರಿ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯ ಹೈಕೋರ್ಟ್, ಡಿಸೆಂಬರ್ ಒಳಗಾಗಿ ಚುನಾವಣೆ ಪೂರ್ಣಗೊಳಿಸುವಂತೆ ಸೂಚಿಸಿತ್ತು.
ಇದರಿಂದಾಗಿ ಗದಗ-ಬೆಟಗೇರಿ ನಗರಸಭೆ ಸ್ಪರ್ಧಾಕಾಂಕ್ಷಿಗಳಲ್ಲಿ ಚುನಾವಣೆಯ ಕನಸು ಗರಿಗೆದರಿದ್ದು, ವಾರ್ಡ್ ಮೀಸಲಾತಿ ಪಟ್ಟಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದವರಿಗೆ ಈಗ ರೆಕ್ಕೆ-ಪುಕ್ಕ ಬಂದಂತಾಗಿದೆ.
ಎರಡೂವರೆ ವರ್ಷದಿಂದ ನನೆಗುದಿಗೆ: ಗದಗ-ಬೆಟಗೇರಿ ನಗರಸಭೆಗೆ ಹಿಂದಿನ ಚುನಾಯಿತ ಮಂಡಳಿಯ ಐದು ವರ್ಷಗಳ ಅವ ಧಿ 9-3-2019 ರಂದು ಪೂರ್ಣಗೊಂಡಿತ್ತು. ಆನಂತರ ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲಾತಿ ಗೊಂದಲದಿಂದ ಕಳೆದ ಎರಡೂವರೆ ವರ್ಷಗಳಿಂದ ಚುನಾವಣೆ ನನೆಗುದಿಗೆ ಬಿದ್ದಿತ್ತು. ಈ ನಡುವೆ ರಾಜ್ಯ ಚುನಾವಣಾ ಆಯೋಗ 2 ಬಾರಿ ವಾರ್ಡ್‌ವಾರು ಮೀಸಲಾತಿ ಪಟ್ಟಿ ಪ್ರಕಟಿಸಿತ್ತಾದರೂ, ರೋಸ್ಟರ್ ಪಾಲನೆಯಲ್ಲಿ ಲೋಪವಾಗಿದೆ ಎಂದು ಆಕ್ಷೇಪಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ 4ನೇ ಬಾರಿಗೆ ರಾಜ್ಯ ಸರಕಾರ ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ವರ್ಗವಾರು ಪರಿಷ್ಕೃತ ಮೀಸಲು ಪಟ್ಟಿ ಪ್ರಕಟಿಸಿದೆ.
ಮೀಸಲಾತಿ ಬದಲಾವಣೆ ಎಲ್ಲೆಲ್ಲಿ?:
ಪರಿಷ್ಕೃತ ಮೀಸಲಾತಿ ಪಟ್ಟಿಯಲ್ಲಿ ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಪೈಕಿ 8 ವಾರ್ಡ್ ಮೀಸಲು ಬದಲಾಗಿದೆ. ಕಳೆದ ಸೆಪ್ಟೆಂಬರ್ 4 ರಂದು ಹೊರಡಿಸಿದ ಪಟ್ಟಿಯಲ್ಲಿ ಸಾಮಾನ್ಯ ವಾರ್ಡ್‌ಗಳಾಗಿದ್ದ 12, 17, 27 ನೇ ವಾರ್ಡ್‌ಗಳು ಈಗ ಸಾಮಾನ್ಯ ಮಹಿಳೆಯಾಗಿವೆ. ಅದರಂತೆ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ 14, 19, 25 ನೇ ವಾರ್ಡ್‌ಗಳು ಪರಿಷ್ಕೃತ ಪಟ್ಟಿಯಲ್ಲಿ ಸಾಮಾನ್ಯವಾಗಿ ಮಾರ್ಪಡಿಸಲಾಗಿದೆ.
ಹಿಂದೆ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ 5ನೇ ವಾರ್ಡ್ ಈಗ ಹಿಂದುಳಿದ ವರ್ಗ ಎ(ಮಹಿಳೆ) ಮತ್ತು ಈ ಹಿಂದೆ ಹಿಂದುಳಿದ ವರ್ಗ ಎ(ಮಹಿಳೆ)ಗೆ ಮೀಸಲಾಗಿದ್ದ
15ನೇ ವಾರ್ಡ್ ಈಗ ಸಾಮಾನ್ಯ ವಾರ್ಡ್ ಆಗಿ ಬದಲಾಯಿಸಲಾಗಿದೆ. ಇನ್ನುಳಿದ ಎಲ್ಲ ವಾರ್ಡ್ ಮತ್ತು ವರ್ಗಗಳ ಮೀಸಲಾತಿಯನ್ನು ಯಥಾವತ್ತಾಗಿ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.