ರಸ್ತೆ ಸುರಕ್ಷಾ ಸಮಿತಿ ಸಭೆ

•ಸರಕು ವಾಹನಗಳಲ್ಲಿ ಪ್ರಯಾಣಿಕರ ಸಾಗಣೆ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಡಿಸಿ ಎಚ್ಚರಿಕೆ

Team Udayavani, May 10, 2019, 2:17 PM IST

gadaga-tdy-3..

ಗದಗ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆ ನಡೆಯಿತು.

ಗದಗ: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರವಾಗಿದೆ. ಇದನ್ನು ತಡೆಗಟ್ಟುವ ಮೂಲಕ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಜನ ಸೇರುವ ಸಂದರ್ಭಗಳಲ್ಲಿ, ಜಾತ್ರೆ ಹಾಗೂ ಸಂತೆಗಳು ನಡೆಯುವ ಪ್ರದೇಶಗಳ ಮಾಹಿತಿ ಪಡೆದು ಅಗತ್ಯದ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ನಿಗದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಆಟೋಗಳಲ್ಲಿ ಸಾಗಾಗಿಸುವುದನ್ನು ತಡೆಗಟ್ಟಲು ಸಂಬಂಧಿತ ಶಾಲಾ ಮುಖ್ಯಸ್ಥರೊಂದಿಗೆ ಚರ್ಚಿಸಿ ಮಕ್ಕಳ ಪಾಲಕರಿಗೂ ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಮಾತನಾಡಿ, ಯಾವುದೇ ಕಾರಣಕ್ಕೂ ಆಟೋ ರಿಕ್ಷಾಗಳಲ್ಲಿ 6 ಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಸಾಗಿಸಬಾರದು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಶಿಕ್ಷಣ ಇಲಾಖೆ ನಗರದ ಎಲ್ಲ ಶಾಲಾ ಪ್ರಾಂಶುಪಾಲರ ಜತೆ ಈ ಕುರಿತು ಚರ್ಚಿಸಿ ನಿರ್ದೇಶನ ನೀಡಿ ರಸ್ತೆ ಸುರಕ್ಷಾ ನಿಯಮ ಪಾಲಿಸಲು ಆಟೋ ಹಾಗೂ ಶಾಲಾ ವಾಹನಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.

ಆಟೋ ಮಾಲೀಕರು ನಿಗದಿಗಿಂತ ಹೆಚ್ಚಿನ ಸಂಖ್ಯೆ ಮಕ್ಕಳನ್ನು ಆಟೋಗಳಲ್ಲಿ ಸಾಗಾಣೆ ಮಾಡದಂತೆ ಜಾಗೃತಿ ಮೂಡಿಸಬೇಕು. ನಿಯಮ ಪಾಲಿಸದೇ ಇರುವ ಆಟೋಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಟೋ, ಮ್ಯಾಕ್ಸಿ ಕ್ಯಾಬ್‌ ಹಾಗೂ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಈ ಕುರಿತು ಅಗತ್ಯದ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಬೆಳಗ್ಗೆ 9:00ರಿಂದ ರಾತ್ರಿ 8:00ರ ವರೆಗೆ ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಲು ಲಾರಿಗಳ ನಗರ ಪ್ರವೇಶ ನಿರ್ಭಂದಿಸಲಾಗುವುದು. ನಗರದ ಎಲ್ಲ ವೃತ್ತಗಳನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ರಸ್ತೆ ಉಬ್ಬುಗಳಿರುವಲ್ಲಿ ಅಗತ್ಯದ ಫಲಕ ಅಳವಡಿಸಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯವವರ ವಿರುದ್ಧ ಕೈಗೊಳ್ಳುವ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕೋಟಲೂರ ಆರ್‌, ಪೋಲಿಸ್‌ ಇಲಾಖೆ, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಆಟೋ, ಮ್ಯಾಕ್ಸಿ ಕ್ಯಾಬ್‌ ಹಾಗೂ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.