ರಸ್ತೆ ಕಾಮಗಾರಿ ಕಳಪೆ: ದಿಢೀರ್ ಪ್ರತಿಭಟನೆ
Team Udayavani, Sep 17, 2019, 11:57 AM IST
ಲಕ್ಷ್ಮೇಶ್ವರ: ಲಕ್ಷೆ ್ಮೕಶ್ವರ-ದೊಡ್ಡೂರ ಮಾರ್ಗದ ರಸ್ತೆ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿ ತಾಲೂಕು ಕರವೇ ಕಾರ್ಯಕರ್ತರು ಧಿಡೀರ್ ಪ್ರತಿಭಟನೆ ನಡೆಸಿದರು.
ಲಕ್ಷ್ಮೇಶ್ವರ: ಕೇಂದ್ರ ರಸ್ತೆ ನಿಧಿ ಯೋಜನೆಯಡಿ (ಸಿಆರ್‌ಫ್) ಕಳೆದ ಮೂರ್‍ನಾಲ್ಕು ತಿಂಗಳ ಹಿಂದಷ್ಟೇ ಕೈಗೊಳ್ಳಲಾದ ಲಕ್ಷ್ಮೇಶ್ವರ-ದೊಡ್ಡೂರ ಮಾರ್ಗದ 2.3 ಕಿ.ಮೀ ರಸ್ತೆ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿ ತಾಲೂಕು ಕರವೇ ಕಾರ್ಯಕರ್ತರು ಸೋಮವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಸಿಆರ್‌ಎಫ್ ಯೋಜನೆಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ರಸ್ತೆಯು ಗುತ್ತಿಗೆದಾರರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಿರ್ಮಾಣಗೊಂಡ ಮೂರ್‍ನಾಲ್ಕು ತಿಂಗಳಲ್ಲಿಯೇ ಕಿತ್ತು ಹಾಳಾಗಿದೆ. ಗುತ್ತಿಗೆದಾರರು ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ರಸ್ತೆ ಮೇಲ್ಪದರವನ್ನು ತೆಗೆದು ಹಾಕದೇ ಅದರ ಮೇಲೆಯೇ ಖಡೀಕರಣ ಮಾಡಿದ್ದರಿಂದ ರಸ್ತೆ ಕೀಳಲು ಕಾರಣವಾಗಿದೆ. ರಸ್ತೆ ನಿರ್ಮಾಣದ ಸಂದರ್ಭದಲ್ಲಿಯೇ ಈ ಕುರಿತು ಕರವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಇಂಜಿನಿಯರ್ ಅವರ ಗಮನಕ್ಕೂ ತಂದು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತಾಯಪಡಿಸಲಾಗಿತ್ತು. ಆದರೆ ಗುತ್ತಿಗೆದಾರರು ಯಾರ ಮಾತನ್ನೂ ಲೆಕ್ಕಿಸದೇ ತಮ್ಮ ಪ್ರಭಾವ ಬಳಸಿ ಮನಬಂದಂತೆ ಕಾಮಗಾರಿ ಕೈತೊಳೆದುಕೊಂಡಿದ್ದಾರೆ.
ರಸ್ತೆ ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಮತ್ತು ಅವರ ಬಿಲ್ ತಡೆಹಿಡಿದು ಉತ್ತಮ ಗುಣಮಟ್ಟದ ರಸ್ತೆಯನ್ನು ಪುನರ್ ನಿರ್ಮಿಸಿಕೊಡುವಂತೆ ಕಟ್ಟುನಿಟ್ಟಿನ ಆದೇಶ ಮಾಡಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಸಿಂಗ್ ಅವರನ್ನು ಒತ್ತಾಯಿಸಿ 15/20 ದಿನಗಳಲ್ಲಿ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಜೈಲ್ಭರೋ ಚಳವಳಿ ಮಾಡುವುದಾಗಿ ಎಚ್ಚರಿಸಿದರು.
ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಸಹಾಯಕ ಇಂಜಿನಿಯರ್ ರಾಜೇಂದ್ರ, ಎಲ್ಲೆಲ್ಲಿ ರಸ್ತೆ ಹಾಳಾಗಿದೆಯೋ ಅದನ್ನು ಪುನರ್ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ರಸ್ತೆ ಕಾಮಗಾರಿಗೆ ಸಂಬಂಧಪಟ್ಟಂತೆ ಇದುವರೆಗೂ ಬಿಲ್ ಪಾವತಿಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಕರವೇ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ತಾಲೂಕಾಧ್ಯಕ್ಷ ನಾಗೇಶ ಅಮರಾಪುರ ವಹಿಸಿದ್ದರು. ಪ್ರಕಾಶ ಕೊಂಚಿಗೇರಿಮಠ, ಸಿ.ಎಫ್. ಗಡ್ಡದೇವರಮಠ, ಶಂಕರಗೌಡ ಪಾಟೀಲ, ಕಾರ್ತಿಕ ಕುಳಗೇರಿ, ದಾವುದ್ ಕಾರಡಗಿ, ಆಸ್ಪಾಕ್ ಬಾಗೋಡಿ, ಪ್ರವೀಣ ಗಾಣಿಗೇರ, ಗಂಗಾಧರ ಕೊಂಚಿಗೇರಿಮಠ, ಹನಮಂತ ದುತ್ತರಗಿ, ನವೀನ ಚಿತ್ರಗಾರ, ಮುತ್ತು ಗಾಣಿಗೇರ, ಬಸವರಾಜ ಅಮರಾಪುರ, ರಾಜು ಬೆಳ್ಳಟ್ಟಿ, ರವಿಕುಮಾರ ಕೋರಿ, ಸುಧಾಕರ ಮತ್ತೂರ, ಕೈಸರ್ ಮಹಮ್ಮದಲಿ ಸೇರಿ ಹಲವರಿದ್ದರು. ಸಿಪಿಐ ಆರ್.ಎಚ್. ಕಟ್ಟಿಮನಿ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.