ಪ್ರವಾಹ ಎದುರಿಸಲು ಸನ್ನದ್ಧ
ನದಿ ಪಾತ್ರದ 16 ಗ್ರಾಮಗಳ ಜನರು ಎಚ್ಚರ ವಹಿಸಲಿ: ಜೆ.ಬಿ.ಜಕ್ಕನಗೌಡ್ರ
Team Udayavani, Jun 9, 2021, 8:16 PM IST
ರೋಣ: ನವೀಲು ತೀರ್ಥ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು, ಯಾವ ಸಮಯದಲ್ಲಾದರೂ ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ ಇದೆ. ರೋಣ ತಾಲೂಕಿನ ಹೊಳೆಆಲೂರು ಹೂಬಳಿ ವ್ಯಾಪ್ತಿಯ ನದಿ ಪಾತ್ರದ 16 ಗ್ರಾಮಗಳ ಜನರು ಎಚ್ಚರ ವಹಿಸಬೇಕೆಂದು ರೋಣ ತಹಶೀಲ್ದಾರ್ ಜೆ.ಬಿ.ಜಕ್ಕನಗೌಡ್ರ ಹೇಳಿದರು.
ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಅತಿವೃಷ್ಟಿ ಹಾಗೂ ಪ್ರವಾಹ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನವೀಲು ತೀರ್ಥ ಜಲಾಶಯದ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗುತ್ತಿದೆ. ಒಳ ಹರಿವು ಹೆಚ್ಚಾದಂತೆ ಜಲಾಶಯದಿಂದ ಯಾವ ಸಮಯದಲ್ಲಾದರೂ ನೀರು ಹರಿಬಿಡುವ ಸಾಧ್ಯತೆ ಇದೆ.
ರೋಣ ತಾಲೂಕಿನ ನದಿ ಪಾತ್ರದ ಜನರು ಎಚ್ಚರ ವಹಿಸಬೇಕು. ತಾಲೂಕು ಆಡಳಿತ ಸಂಭವನೀಯ ಪ್ರವಾಹ ಎದುರಿಸಲು ಸಕಲ ರೀತಿಯಲ್ಲಿ ಸನ್ನದ್ಧವಾಗಿದೆ ಎಂದು ಹೇಳಿದರು. ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿ ಕಾರಿ ಸಂತೋಷ ಪಾಟೀಲ ಮಾತನಾಡಿ, ನದಿ ಪಾತ್ರದಲ್ಲಿ ಬರುವ ಗ್ರಾಮಗಳಲ್ಲಿ ಪ್ರವಾಹ ಎದುರಿಸಲು ಸಕಲ ರೀತಿಯಲ್ಲಿ ತಾಲೂಕು ಆಡಳಿತ ಸಜ್ಜಾಗಿದೆ.
ಈಗಾಗಲೇ ನದಿ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರವಾಹದ ಕುರಿತು ಸೂಚನೆ ನೀಡಲಾಗಿದೆ.ನವಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸೂಚಿಸಲಾಗಿದೆ. ಹಾಗೂ ನದಿ ಪಾತ್ರದ ಆಯಾ ಗ್ರಾಮಗಳಲ್ಲಿ ಆಸರೆ ಕೇಂದ್ರಗಳನ್ನು ತೆರೆಯಲು ಚಿಂತಿಸಲಾಗುತ್ತಿದೆ. ಅಲ್ಲದೇ, ದನಕರುಗಳಿಗೆ ಮೇವು ಹಾಗೂ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಔಷಧಗಳನ್ನು ಸಮರ್ಪಕ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.