ಬೀಜ ಸಂರಕ್ಷಣೆ ಮಾಡಿಕೊಂಡು ಬಿತ್ತುವುದು ಸೂಕ್ತ
Team Udayavani, May 26, 2020, 10:30 AM IST
ನರಗುಂದ: ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಸರಕಾರದ ಉದ್ದೇಶ ಸಾರ್ಥಕತೆ ಪಡೆದುಕೊಳ್ಳಬೇಕು. ಇದರೊಂದಿಗೆ ರೈತರು ಸ್ವಯಂ ಉತ್ಪಾದಿಸಿದ ಬೀಜ ಸಂರಕ್ಷಣೆ ಮಾಡಿಕೊಂಡು ಬಿತ್ತನೆ ಮಾಡುವುದು ಕೂಡ ಸೂಕ್ತವಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಸೋಮವಾರ ಪಟ್ಟಣದ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ರಿಯಾಯ್ತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಮಾಡಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಪ್ರತಿ ರೈತರಿಗೆ ಗರಿಷ್ಠ 5 ಎಕರೆಗೆ 5 ಪ್ಯಾಕೇಟ್‌ಗಳಲ್ಲಿ 3 ಹೆಸರು ಬೀಜ, ಉಳಿದೆರಡು ಪ್ಯಾಕೇಟ್ ಬೇರೆ ಬೀಜ ಪೂರೈಕೆ ಮಹತ್ವದ್ದು. ಇದರಿಂದ ಪರ್ಯಾಯ ಬೆಳೆಗೆ ಅನುಕೂಲವಾಗುತ್ತದೆ ಎಂದು ಸಚಿವ ಪಾಟೀಲ ಹೇಳಿದರು.
ಸಹಾಯಕ ಕೃಷಿ ನಿರ್ದೇಶಕ ಚನ್ನಪ್ಪ ಅಂಗಡಿ ಮಾತನಾಡಿ, ಬೇರೆ ಬೆಳೆಗಾಗಿ ಪ್ರತಿ ರೈತರಿಗೆ 2 ಪ್ಯಾಕೇಟ್ ಬೇರೆ ಬೀಜ ವಿತರಣೆ ಮಾಡಲಾಗುತ್ತದೆ. ರೈತರು ಉತ್ಪಾದಿಸಿದ ಬೀಜ ಬಿತ್ತನೆಗೆ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ತಾಪಂ ಅಧ್ಯಕ್ಷ ವಿಠuಲ ತಿಮ್ಮರಡ್ಡಿ, ಚಂದ್ರು ದಂಡಿನ, ಬಿ.ಬಿ. ಐನಾಪೂರ, ಟಿಎಪಿಸಿಎಂಎಸ್ ಅಧ್ಯಕ್ಷ ಅಜ್ಜಪ್ಪ ಹುಡೇದ, ಜಿಪಂ ಸದಸ್ಯೆ ರೇಣುಕಾ ಕಲಹಾಳ, ಗುರಪ್ಪ ಆದೆಪ್ಪನವರ, ಎಂ.ಎಸ್. ಪಾಟೀಲ, ವಸಂತ ಜೋಗಣ್ಣವರ, ಬಿ.ಜಿ. ಸುಂಕದ, ಮಲ್ಲಪ್ಪ ಮೇಟಿ, ಉಮೇಶಗೌಡ ಚಿನ್ನಪ್ಪಗೌಡ್ರ, ಹನಮಂತಪ್ಪ ಹದಗಲ್ಲ, ಮಂಜು ಮೆಣಸಗಿ, ಸಿದ್ದೇಶ ಹೂಗಾರ ಮತ್ತು ಕೃಷಿ ಇಲಾಖೆ ಸಿಬ್ಬಂದಿ, ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.