ಪ್ರಮಾಣೀಕೃತ ಬೀಜ ಮಾರಾಟ ಮಾಡಿ
Team Udayavani, May 2, 2020, 6:29 PM IST
ಮುಂಡರಗಿ: ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿದ್ದು, ತಾಲೂಕಿನಲ್ಲಿ ಕೃಷಿ ಪರಿಕರ ಮಾರಾಟಗಾರರು ಕಡ್ಡಾಯವಾಗಿ ಪ್ರಮಾಣೀಕರಿಸಿದ ಬೀಜವನ್ನು ಮಾರಾಟ ಮಾಡಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯ ಕಾರ್ಯಾಲಯದಲ್ಲಿ ನಡೆದ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ ಪರಿಕರ ಮಾರಾಟಗಾರರು ಹೆಚ್ಚಿನ ಬೆಲೆಗಳಿಗೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟ ಮಾಡಬಾರದು. ಮಾರಾಟ ಮಳಿಗೆಯಲ್ಲಿ ಕಡ್ಡಾಯವಾಗಿ ದರಪಟ್ಟಿ ಹಾಕಬೇಕು. ರೈತರು ಬೀಜ ಖರೀದಿಸಿದಾಗ ಪರಿಕರ ಮಾರಾಟಗಾರರಿಂದ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳಬೇಕು.
ಅಕ್ರಮವಾಗಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೇ ದೃಢೀಕೃತವಲ್ಲದ ಮೆಕ್ಕೆಜೋಳದ ಬೀಜಗಳನ್ನು ಮೋಸದಿಂದ ರೈತರಿಗೆ ಮಾರಾಟ ಮತ್ತು ದಾಸ್ತಾನು ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸುವ ಕುರಿತು ಕೃಷಿ ಪರಿಕರ ಮಾರಾಟಗಾರರಿಗೆ ಕ್ರಮ ಜರುಗಿಸಲಾಗುವುದು. ರೈತರು ಅನಧಿ ಕೃತ ಬೀಜಗಳ ಮಾರಾಟ ಕಂಡುಬಂದರೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು ಇವರಿಗೆ ದೂರು ಸಲ್ಲಿಸಬೇಕು. ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ತಾಂತ್ರಿಕ ಅಧಿಕಾರಿ ರವಿಕುಮಾರ ಹಾವನೂರ, ಗೌರಿಶಂಕರ ಸಜ್ಜನರ, ತಾಲೂಕಿನ ಕೃಷಿ ಪರಿಕರ ಮಾರಾಟಗಾರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.