ಭರದಿಂದ ಸಾಗಿದೆ ಇಂದಿರಾ ಕ್ಯಾಂಟೀನ್ ಕಾಮಗಾರಿ
Team Udayavani, Nov 16, 2018, 4:19 PM IST
ಶಿರಹಟ್ಟಿ: ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಸ್ಥಾಪಿಸುವ ಮಹತ್ವಾಕಾಂಕ್ಷಿ ಯೋಜನೆ ತಡವಾದರೂ ಆರಂಭವಾಗಿರುವುದು ಈ ಭಾಗದ ಬಡಜನತೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಸದ್ಯ ಎಪಿಎಂಸಿ ಜಾಗೆಯಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡ ಕಾರ್ಯ ಭರದಿಂದ ಸಾಗಿದೆ.
ಬಡ ಮತ್ತು ಮಧ್ಯಮ ವರ್ಗದ ಜನರ ಹಸಿವು ನೀಗಿಸಲೆಂದೇ ಈ ಮಹತ್ತರ ಯೋಜನೆಯನ್ನು ಹಿಂದಿನ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿತ್ತು. ಆರಂಭದಲ್ಲಿ ಬೆಂಗಳೂರನಲ್ಲಿ ಆರಂಭಿಸಲ್ಪಟ್ಟ ಕ್ಯಾಂಟೀನ್ ಗಳು ನಂತರದ ದಿನಗಳಲ್ಲಿ ಅಧಿಕಾರಿಗಳ ನಿರುತ್ಸಾಹವೋ ಅಥವಾ ಹಣದ ಕೊರತೆಯಿಂದಾಗಿಯೋ ಯೋಜನೆಯ ಕಾರ್ಯ ಕುಂಟುತ್ತಾ ಸಾಗಿತ್ತು. ಇಂತಹ ಬಡವರ ಪರ ಯೋಜನೆಗಳನ್ನು ಈಗಿನ ಸಮ್ಮಿಶ್ರ ಸರಕಾರ ಜಾರಿಗೊಳಿಸುತ್ತಿರುವುದು ಸ್ವಾಗತಾರ್ಹ. ತಾಲೂಕು ಕೇಂದ್ರವಾಗಿರುವ ಶಿರಹಟ್ಟಿಗೆ ಬೆಳಗಾದರೆ ತಮ್ಮ ನಿತ್ಯದ ಕಚೇರಿ ಕೆಲಸಗಳಿಗೆ ತಾಲೂಕು ಕಚೇರಿಗೆ ಅಗಮಿಸುವ ಸುತ್ತಲಿನ ಗ್ರಾಮಸ್ಥರಿಗೆ ಹಾಗೂ ಪಟ್ಟಣದ ವಾಸಿಗಳಿಗೆ ಅನುಕೂಲವಾಗುವಂತೆ ತಹಶೀಲ್ದಾರ್ ಕಚೇರಿ ಹತ್ತಿರ ಇರುವ ಎಪಿಎಂಸಿ ಜಾಗೆಯಲ್ಲಿ ಇಂದಿರಾ ಕ್ಯಾಂಟೀನ್ ಕೆಲಸ ಪ್ರಾರಂಭವಾಗಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.
ಕರವೇ ತಾಲೂಕು ಅಧ್ಯಕ್ಷ ರಫೀಕ ಕರೇಮನಿ, ಕುಂದು ಕೊರತೆ ನಿವಾರಣೆ ಅಧ್ಯಕ್ಷ ಅಕ್ಬರ ಯಾದಗೇರಿ ಮಾತನಾಡಿ, ಇಂದಿರಾ ಕ್ಯಾಂಟೀನ್ ಕಟ್ಟಡ ಕಾರ್ಯ ಪ್ರಾರಂಭವಾಗಿರುವುದು ಸ್ವಾಗತಾರ್ಹ. ಕ್ಯಾಂಟೀನ್ ಮಂಜೂರಾಗಿ ವರ್ಷಗಳಾಗಿದ್ದರು ಕಟ್ಟಡ ಕಾರ್ಯ ಪ್ರಾರಂಭವಾಗಿರಲಿಲ್ಲ. ಅನೇಕ ಬಾರಿ ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ತಡವಾದರು ಕಾರ್ಯ ಪ್ರಾರಂಭವಾಗಿದೆ. ಕೆಲ ಜನಪ್ರತಿನಿಧಿಗಳು ಇದನ್ನು ಶಿರಹಟ್ಟಿಯಿಂದ ಬೇರೆಡೆಗೆ ಸ್ಥಳಾಂತರಿಸಲು ಪ್ರಯತ್ನಿಸಿದ್ದರು ಕರವೇ ಸದಸ್ಯರ ನಿರಂತರ ಹೋರಾಟದ ಫಲವಾಗಿ ಇಂದು ಕಾರ್ಯಾರಂಭವಾಗಿದೆ. ಇದರಿಂದ ಪಟ್ಟಣದಲ್ಲಿರುವ ಸರಕಾರಿ ಕಚೇರಿಗೆಳಿಗೆ ಆಗಮಿಸುವ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.