ಶಾಶ್ವತ ನೀರಿಗಾಗಿ ಸಹಿ ಸಂಗ್ರಹ
Team Udayavani, Sep 2, 2019, 12:26 PM IST
ಗಜೇಂದ್ರಗಡ: ಶಾಶ್ವತ ಕುಡಿಯುವ ನೀರಿನ ಯೋಜನೆ ಕುರಿತು ಡಿವೈಎಫ್‌ಐ ಸಂಘಟನೆಯಿಂದ ರಾಜವಾಡೆಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಗಜೇಂದ್ರಗಡ: ಶಾಶ್ವತ ಕುಡಿಯುವ ನೀರು ಪೂರೈಸುವ ಉದ್ದೇಶಿತ ಜಿಗಳೂರು ಕೆರೆ ನಿರ್ಮಾಣ ಕಾಮಗಾರಿಯನ್ನು ಮೂರು ತಿಂಗಳಿನಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತತ್ಮಕ ಯುವಜನ ಫೆಡರೇಶನ್ ತಾಲೂಕು ಸಮಿತಿ ಪಟ್ಟಣದ 1ನೇ ವಾರ್ಡನ ರಾಜವಾಡೆ ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಸಹಿ ಸಂಗ್ರಹಕ್ಕೆ ರವಿವಾರ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದಸಿಪಿಐಎಂ ಮುಖಂಡ ಎಂ.ಎಸ್ ಹಡಪದ, ನವೀಲುತೀರ್ಥ ಜಲಾಶಯದಿಂದ ಗಜೇಂದ್ರಗಡ, ರೋಣ ಹಾಗೂ ನರೇಗಲ್ಲ ಪಟ್ಟಣಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಜಿಗಳೂರು ಗ್ರಾಮದ ಬಳಿ 2008ರಲ್ಲಿಯೇ 307 ಎಕರೆ ಜಮೀನಿನಲ್ಲಿ ಕೆರೆ ನಿರ್ಮಿಸಲು ಪ್ರಾರಂಭಿಸಿ ಹತ್ತು ವರ್ಷ ಕಳೆದಿದೆ. ಯೋಜನೆಗೆ 110 ಕೋಟಿಗೂ ಅಧಿಕ ಅನುದಾನ ವ್ಯಯಿಸಲಾಗಿದೆ. ಆದರೂ ಯೋಜನೆ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳುವ ಲಕ್ಷಣಗಳು ಇನ್ನೂ ಗೋಚರಿಸುತ್ತಿಲ್ಲ. ಈಚೆಗೆ ಸುರಿದ ಮಳೆಯಿಂದಾಗಿ ನವಿಲು ತೀರ್ಥ ಜಲಾಶಯ ಭರ್ತಿಯಗಿ ಹೆಚ್ಚುವರಿ ನೀರನ್ನು ಮಲಪ್ರಭಾ ನದಿಗೆ ಹರಿಬಿಟ್ಟಿದ್ದರಿಂದ ಕೆಳ ಭಾಗದ ಹಲವು ಗ್ರಾಮಗಳು ಹಾನಿಯಾಗಿವೆ. ಇದೇ ನೀರನ್ನು ಉದ್ದೇಶಿತ ಜಿಗಳೂರ ಕೆರೆಗೆ ಹಾಯಿಸಿದ್ದರೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಬವಣೆ ನೀಗುತ್ತಿತ್ತು. ಆದರೆ ನಮ್ಮನ್ನಾಳುವ ಸರ್ಕಾರಗಳು, ಈ ಭಾಗದ ಶಾಸಕ, ಸಂಸದರ ನಿರ್ಲಕ್ಷ್ಯವೇ ಯೋಜನೆ ವಿಳಂಬಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಡಿವೈಎಫ್‌ಐ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಿದ್ದು, ಸಾರ್ವಜನಿಕರು ಕುಡಿಯುವ ನೀರಿನ ಹೋರಾಟಕ್ಕೆ ಸಂಘಟನೆ ಕರೆ ನೀಡಿದಾಗ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಡಿವೈಎಫ್‌ಐ ತಾಲೂಕು ಅಧ್ಯಕ್ಷ ಫಯಾಜ್ ತೋಟದ ಮಾತನಾಡಿ, 30 ಸಾವಿರಕ್ಕೂ ಅಧಿಕ ಜನಸಂಖ್ಯೆಯುಳ್ಳ ಗಜೇಂದ್ರಗಡ ಜನರ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಯಾವೊಂದು ಜಲಮೂಲಗಳಿಲ್ಲ. ಈ ಭಾಗದ ಜನಪ್ರತಿನಿಧಿಗಳು ಕೇವಲ ಚುನಾವಣೆ ಸಂದರ್ಭದಲ್ಲಿ ಜನರನ್ನು ಬಳಕೆ ಮಾಡಿಕೊಳ್ಳುತ್ತಾರೆ ಹೊರತು ಶಾಶ್ವತ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಂಡಿಲ್ಲ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡುವ ಉದ್ದೇಶದಿಂದ ಡಿವೈಎಫ್‌ಐ ನೇತೃತ್ವದಲ್ಲಿ ಹೋರಾಟ ರೂಪಿಸಲಾಗಿದೆ. ಪಕ್ಷಾತೀತವಾಗಿ ಸಾರ್ವಜನಿಕರು ಪಾಲ್ಗೊಂಡು ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣಗೊಳ್ಳಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ 1ನೇ ವಾರ್ಡ್‌ನ ಪ್ರತಿ ಮನೆಗೆ ತೆರಳಿ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು. ಅಲ್ಲದೇ ಸಹಿ ಸಂಗ್ರಹಿಸಲಾಯಿತು.
ಬಾಲು ರಾಠೊಡ, ಪೀರು ರಾಠೊಡ, ಮೈಬುಸಾಬ್ ಹವಾಲ್ದಾರ, ಕಾರ್ತಿಕ ಸಿಂಧೆ, ನಜೀರಸಾಬ್ ನಾಲಬಂದ, ರಜಾಕ್ ಗೋಡೇಕಾರ, ಚಂದ್ರು ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.