ಗದಗ ವೈದ್ಯಕೀಯ ಸೌಲಭ್ಯದಲ್ಲಿ ಗಣನೀಯ ಸುಧಾರಣೆ

ಶೇ.25 ಬೆಡ್‌ಗಳಿಗೆ ವೆಂಟಿಲೇಟರ್‌ ಹೊಂದಿರುವ ಉತ್ತರ ಕರ್ನಾಟಕದ ಏಕೈಕ ಸರ್ಕಾರಿ ಜಿಲ್ಲಾಸ್ಪತ್ರೆ ಜಿಮ್ಸ್‌

Team Udayavani, Aug 26, 2021, 7:27 PM IST

ಗದಗ ವೈದ್ಯಕೀಯ ಸೌಲಭ್ಯದಲ್ಲಿ ಗಣನೀಯ ಸುಧಾರಣೆ

ಗದಗ: ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಿಂದಾಗಿ ಜಿಲ್ಲೆಯ ವೈದ್ಯಕೀಯ ಸೇವೆ ಮತ್ತು ಸೌಲಭ್ಯಗಳಲ್ಲಿ ಗಣನೀಯ ಸುಧಾರಣೆ
ಕಂಡಿದೆ. ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆ ಹೊಂದುವುದರೊಂದಿಗೆ ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್‌ ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಕೋವಿಡ್‌ ಚಿಕಿತ್ಸೆಯಲ್ಲಿ ಉತ್ತಮ ಸಾಧನೆಯೊಂದಿಗೆ ಶೇ.25ರಷ್ಟು ಬೆಡ್‌ಗಳಿಗೆ ವೆಂಟಿಲೇಟರ್‌ ಹೊಂದಿರುವ ಉತ್ತರ ಕರ್ನಾಟಕದ ಏಕೈಕ ಸರ್ಕಾರಿ ಜಿಲ್ಲಾಸ್ಪತ್ರೆ ಎಂಬ ಖ್ಯಾತಿಗೆ ಜಿಮ್ಸ್‌ ಪಾತ್ರವಾಗಿದೆ.

ಕಣ್ಣಿಗೆ ಕಾಣದ ವೈರಸ್‌ ವಿರುದ್ಧದ ಹೋರಾಟದಲ್ಲಿ ಜಿಲ್ಲೆಯ ವೈದ್ಯರು ಹಾಗೂ ಜಿಲ್ಲಾಡಳಿತ ಈಗಾಗಲೇ ಮೇಲುಗೈ ಸಾಧಿಸಿದೆ. ವಿವಿಧ ಸೌಲಭ್ಯಗಳ ಕೊರತೆ ಮಧ್ಯೆಯೂ ಮೊದಲನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆನಂತರ ಆಕ್ಸಿಜನ್‌ ಸಂಗ್ರಹಗಾರ, ಹೆಚ್ಚುವರಿ ಬೆಡ್‌ ಹಾಗೂ ವೆಂಟಿಲೇಟರ್‌ಗಳ ವ್ಯವಸ್ಥೆಯೊಂದಿಗೆ ಎರಡನೇ ಅಲೆಯನ್ನು ಸಮರೋಪಾದಿಯಲ್ಲಿ ಎದುರಿಸಲಾಗಿದೆ. ವೈದ್ಯರು ಗುಣಮಟ್ಟದ
ಚಿಕಿತ್ಸೆ ನೀಡುವ ಮೂಲಕ ಜಿಲ್ಲೆಯಲ್ಲಿ ಕೋವಿಡ್‌  ಸಾವಿನ ಪ್ರಮಾಣವನ್ನು ಕಡಿಮೆಗೊಳಿಸಿದ್ದರು. ಇದೀಗ ತಜ್ಞರು ಕೋವಿಡ್‌ 3ನೇ ಅಲೆ ಸಂಭವಿಸುವ ಬಗ್ಗೆ ಅಭಿಪ್ರಾಯಪಟ್ಟಿದ್ದಾರೆ. 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಬಹುದು ಎನ್ನಲಾಗುತ್ತಿದ್ದು, ಸಹಜವಾಗಿಯೇ ಆತಂಕ
ಸೃಷ್ಟಿಸಿದೆ.

ಶೇ.98.76 ಮರಣ ಪ್ರಮಾಣ: 2020, ಏ.7ರಂದು ಗದಗ ನಗರದ ರಂಗನವಾಡದಲ್ಲಿ ಮೊದಲ ಕೋವಿಡ್‌ ಪ್ರಕರಣ ಪತ್ತೆಯಾಗಿತ್ತು.ಜಿಲ್ಲೆಯಲ್ಲಿ ಈವರೆಗೆ 522628 ಜನರಿಂದ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, 26017 ಜನರಲ್ಲಿ ಸೋಂಕು ದೃಢಪಟ್ಟಿದೆ.25683 ಗುಣಮುಖ ರಾಗಿದ್ದು, 316 ಜನರು ಮೃತಪಟ್ಟಿದ್ದಾರೆ. ಆ.19ರವರೆಗೆ ಜಿಲ್ಲೆಯಲ್ಲಿ ಶೇ.98.76 ರಷ್ಟು ಜನರು ಗುಣಮುಖರಾಗಿದ್ದು, ಶೇ.1.21ರಷ್ಟು ಮರಣ ಪ್ರಮಾಣ ದಾಖಲಾಗಿದೆ. ಇನ್ನುಳಿದಂತೆ 18 ಪ್ರಕರಣಗಳು ಸಕ್ರಿಯವಾಗಿವೆ. ಅವರಲ್ಲಿ ಬಹುತೇಕರು ಮನೆಯಲ್ಲಿದ್ದು, ಸೋಂಕಿನ ಗಂಭೀರ ಲಕ್ಷಣಗಳಿಲ್ಲ ಎನ್ನುತ್ತಾರೆ ಆರೋಗ್ಯ ಇಲಾಖೆ ಹಿರಿಯ ವೈದ್ಯರು.

ಇದನ್ನೂ ಓದಿ:ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್‌

ಕೋವಿಡ್‌ 3ನೇ ಸಮರಕ್ಕೆ ಸಿದ್ಧತೆ: ಕೋವಿಡ್‌-1 ಮತ್ತು 2ನೇ ಅಲೆಯಲ್ಲಿ ಬೆಡ್‌ ಮತ್ತು ವೆಂಟಿಲೇಟರ್‌ಗಳ ಅಗತ್ಯತೆಯನ್ನುಮನಗಂಡಿರುವ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿ ಗಳು ಜಿಮ್ಸ್‌ ಆಸ್ಪತ್ರೆಯನ್ನು ಉನ್ನತೀಕರಿಸಿದ್ದಾರೆ. ಆಸ್ಪತ್ರೆಯ ಎಲ್ಲಾ 440 ಬೆಡ್‌ಗಳಿಗೂ ಆಕ್ಸಿಜನ್‌ ಒದಗಿಸಿದೆ. ಜತೆಗೆ 110 ಬೆಡ್‌ಗಳಿಗೆ ವೆಂಟಿಲೇಟರ್‌ ಕಲ್ಪಿಸಿದೆ. ಈ ಮೂಲಕ ಪ್ರತಿ ನಾಲ್ವರು ರೋಗಿಗಳಲ್ಲಿ ಒಬ್ಬರಿಗೆ ವೆಂಟಿಲೇಟರ್‌ ಸಹಿತ ಚಿಕಿತ್ಸೆ ದೊರೆಯುವಂತೆ ಮಾಡಲಾಗಿದೆ. ಆಸ್ಪತ್ರೆಯ ಒಟ್ಟು ಬೆಡ್‌ಗಳಲ್ಲಿ ಶೇ.25ರಷ್ಟು ವೆಂಟಿಲೇಟರ್‌ ಬೆಡ್‌ ಹೊಂದಿದೆ ಎಂಬುದು ಗಮನಾರ್ಹ ಎಂಬುದು ಜಿಮ್ಸ್‌ ನಿರ್ದೇಶಕ ಡಾ|ಪಿ.ಎಸ್‌.ಭೂಸರೆಡ್ಡಿ ಅವರ ಮಾತು. ಅದರೊಂದಿಗೆ ಮುಂಡರಗಿ, ರೋಣ,
ನರಗುಂದ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 50 ಆಕ್ಸಿಜನ್‌ ಬೆಡ್‌ ಒದಗಿಸಲಾಗಿದೆ. ರೋಣ, ಮುಂಡರಗಿ, ಶಿರಹಟ್ಟಿ ಮತ್ತು ನರಗುಂದ ತಾಲೂಕಿನಲ್ಲಿ ತಲಾ 10 ಬೆಡ್‌ಗಳ ಮಕ್ಕಳ ವಾರ್ಡ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಜಿಮ್ಸ್‌ ನಲ್ಲಿ 33 ಬೆಡ್‌ನ‌ಲ್ಲಿ ಮಕ್ಕಳ ವಾರ್ಡ್‌ ವ್ಯವಸ್ಥೆ ಮಾಡಿದ್ದು, ಹೆಚ್ಚಿನ ಪ್ರಕರಣಗಳು ಕಂಡು ಬಂದಲ್ಲಿ 100 ಬೆಡ್‌ಗಳನ್ನಾಗಿ ಪರಿವರ್ತಿಸಬಹುದಾಗಿದೆ. ಹೊಸದಾಗಿ 12 ಪೆಡಿಯಾಟ್ರಿಕ್‌ ವೆಂಟಿಲೇಟರ್‌ಗಳು ಬಂದಿವೆ.

ಮೊದಲಿಗಿಂತ ಈಗ ಆಸ್ಪತ್ರೆಗಳಲ್ಲಿ ವೈದ್ಯಕೀಯ ಉಪಕರಣ ಮತ್ತಿತರೆ ಸೌಲಭ್ಯಗಳನ್ನು ದ್ವಿಗುಣಗೊಳಿಸಲಾಗಿದೆ. ಸರ್ಕಾರ ಮತ್ತು ವಿವಿಧ ದಾನಿಗಳು ಸುಮಾರು 100ಕ್ಕೂ ಹೆಚ್ಚು ಆಕ್ಸಿಜನ್‌  ಕಾನ್ಸ್ಂಟ್ರೇಟರ್ ಮತ್ತು ತೆಲಂಗಾಣದ ಹಿರಿಯ ಐಪಿಎಸ್‌ ಅಧಿಕಾರಿಯಾಗಿರುವ ಮೂಲತಃ
ರೋಣ ತಾಲೂಕಿನ ಸಜ್ಜನ್‌ ಹಾಗೂ ಮತ್ತಿತರೆ ದಾನಿಗಳಿಂದ ನೂರಾರು ಜಂಬೋ ಸಿಲಿಂಡರ್‌ಗಳು ದೇಣಿಗೆ ರೂಪದಲ್ಲಿ ಬಂದಿದ್ದು, ಜಿಲ್ಲೆಯ
ವೈದ್ಯಕೀಯ ಸೇವೆಗಳಿಗೆ ಮತ್ತಷ್ಟು ಬಲ ತುಂಬಿವೆ.

ಆಕ್ಸಿಜನ್‌ ಉತ್ಪಾದನೆಗೆ ಒತ್ತು: ಕೋವಿಡ್‌ 2ನೇ ಅಲೆಯಲ್ಲಿ ವೆಂಟಿಲೇಟರ್‌ ಬೆಡ್‌ಗಳು ಸಿಗದೇ ಪ್ರಾಣ ಕಳೆದುಕೊಂಡವರ ಸಂಖ್ಯೆ ಲೆಕ್ಕವಿಲ್ಲ. ಹೀಗಾಗಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಸರ್ಕಾರ ಮತ್ತು ಖಾಸಗಿ ಕಂಪನಿಗಳ ಸಹಯೋಗದಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕಗಳು ಸ್ಥಾಪನೆಯಾಗುತ್ತಿವೆ. ಜಿಮ್ಸ್‌ ಆಸ್ಪತ್ರೆಯಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ 20 ಕೆಎಲ್‌ ಆಮ್ಲಜನರ
ಸಂಗ್ರಾಹಾಗಾರ ಹಾಗೂ ಸಿಎಸ್‌ಆರ್‌ ಯೋಜನೆಯಡಿ 500 ಎಂಪಿಎಲ್‌ ಮತ್ತು ಪಿಎಂ ಕೇರ್‌ ಯೋಜನೆಯಡಿ ಜಿಮ್ಸ್‌ನಲ್ಲಿ 1000 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾಧನಾ ಘಟಕ ಸ್ಥಾಪಿಸಲಾಗುತ್ತಿದ್ದು, ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ. ನರಗುಂದ ತಾಲೂಕು ಆಸ್ಪತ್ರೆಯಲ್ಲಿ 390 ಎಂಪಿಎಲ್‌, ಗದಗ ಮಹಿಳೆ ಮತ್ತು ಮಗು ಆಸ್ಪತ್ರೆ, ಮುಂಡರಗಿಯಲ್ಲಿ ತಲಾ 500 ಎಲ್‌ ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕ ಕಾರ್ಯಾರಂಭ ಮಾಡಲಿವೆ.

3 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ: ಕೋವಿಡ್‌ 3ನೇ ಅಲೆಗೆ ಸಂಬಂಧಿ ಸಿದಂತೆ ಯಾವ್ಯಾವ ರೀತಿಯಲ್ಲಿ ಮುಂಜಾಗ್ರತೆ ತೆಗೆದುಕೊಳ್ಳಬೇಕು
ಎನ್ನುವ ಬಗ್ಗೆ ಎಲ್ಲ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯಾ ಧಿಕಾರಿಗಳು, ನರ್ಸ್‌, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ತಜ್ಞರಿಂದ ಎರಡು ಬಾರಿ ತರಬೇತಿ ನೀಡಲಾಗಿದೆ. ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಹಯೋಗದಲ್ಲಿ 18 ವರ್ಷದೊಳಗಿನವರ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಗಿದೆ. ಮುಂದಿನ 3 ವಾರಗಳಲ್ಲಿ ಜಿಲ್ಲೆಯಲ್ಲಿರುವ ಒಟ್ಟು 3 ಲಕ್ಷ ಮಕ್ಕಳನ್ನು ವೈದ್ಯಕೀಯ ತಪಾಸಣೆ ನಡೆಸುವ ಗುರಿ ಹೊಂದಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 3ನೇ ಅಲೆ ನಿಯಂತ್ರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ|ಸತೀಶ ಬಸರಿಗಿಡದ ಮಾಹಿತಿ ನೀಡಿದರು.

ಅಪೌಷ್ಟಿಕ ಮಕ್ಕಳಿಗಾಗಿ ವಿಶೇಷ ಶಿಬಿರ:
ತಜ್ಞರ ಅಭಿಪ್ರಾಯದಂತೆ ಸಂಭವನೀಯ ಮೂರನೇ ಅಲೆ ಮಕ್ಕಳಿಗೆ ಬಾ ಧಿಸುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆ ಯಲ್ಲಿರುವ 243 ತೀವ್ರ ಅಪೌಷ್ಟಿಕ ಮಕ್ಕಳ ಸುಧಾರಣೆಗಾಗಿ 14 ದಿನಗಳ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ. ಜತೆಗೆ 3 ಲಕ್ಷ ರೂ.ವೆಚ್ಚದಲ್ಲಿ ಎಲ್ಲ ಮಕ್ಕಳಿಗೂ ರೋಗ ನಿರೋಧಕ ಶಕ್ತಿ ವೃದ್ಧಿಸುವ ಇನು#ಯೆಂಜಾ ಲಸಿಕೆ ನೀಡಲಾಗಿದೆ. ಜತೆಗೆ ಅಂತಹ ಮಕ್ಕಳ ಮೇಲೆ ಅಧಿಕಾರಿ ಗಳು ನಿರಂತರ ನಿಗಾ ವಹಿಸಿದ್ದಾರೆ.

ಕೋವಿಡ್‌ 1 ಮತ್ತು 2ನೇ ಅಲೆಗಿಂತ ಈಗ ವೈದ್ಯಕೀಯ ಸೌಲಭ್ಯಗಳು ಗಣನೀಯವಾಗಿ ಹೆಚ್ಚಿವೆ. ಕೋವಿಡ್‌ನಿಂದ ಚೇತರಿಸಿಕೊಂಡ ಮಕ್ಕಳ ತಪಾಸಣೆ ನಡೆಸಿದ್ದೇವೆ. ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಪ್ರತಿ ತಾಲೂಕಿನಲ್ಲಿ ಎರಡು ಹಂತದಲ್ಲಿ ವಿಶೇಷ ಶಿಬಿರ ನಡೆಸಲಾಗಿದೆ. ವಿಶೇಷವಾಗಿ ಜಿಲ್ಲೆಯ ಎಲ್ಲ ಮಕ್ಕಳ ಆರೋಗ್ಯ ತಪಾಸಣೆಗೆ ಸೂಚಿಸಲಾಗಿದೆ. 40 ಎಂಬಿಬಿಎಸ್‌ ವೈದ್ಯರು, 6 ತಜ್ಞ ವೈದ್ಯರು ಹೊಸದಾಗಿ ನೇಮಕಗೊಂಡು ಬಂದಿದಾರೆ. ಇದೊಂದು ನಿರಂತರ ಪ್ರಕ್ರಿಯೆಯನ್ನಾಗಿ ಮುಂದುವರಿಸಲಾಗಿದೆ.
-ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿ, ಗದಗ

ಮೊದಲ ಅಲೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಸಾಕಷ್ಟು ಕೊರತೆ ಮಧ್ಯೆಯೂ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಆನಂತರ ಎರಡನೇ ಅಲೆಗೆ ತಕ್ಕಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಸದ್ಯ ಜಿಲ್ಲೆಯಲ್ಲಿ ಆತಂಕಪಡುವ ಅಗತ್ಯವಿಲ್ಲ. ಆದರೂ, 3ನೇ ಅಲೆ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ. ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ,ಸನ್ನದ್ಧಗೊಳಿಸಲಾಗಿದೆ.
-ಡಾ|ಸತೀಶ ಬಸರಿಗಿಡದ, ಜಿಲ್ಲಾ ಆರೋಗ್ಯಾಧಿಕಾರಿ

ಕೋವಿಡ್‌ ಚಿಕಿತ್ಸೆಯಲ್ಲಿ ಜಿಲ್ಲೆ ಗಂಭೀರವಾಗಿ ಯಾವುದೇ ಸಮಸ್ಯೆಗಳಾಗಿಲ್ಲ. ಆದರೆ, 3ನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. 2ನೇ ಅಲೆಯಲ್ಲಿ ಮುಂಡರಗಿ, ರೋಣದಲ್ಲಿ ವೆಂಟಿಲೇಟರ್‌ ಸಿಗದೇ ಕೆಲವರು ಮೃತಪಟ್ಟಿರುವ ಕಹಿ ಘಟನೆಗಳುಮರುಕಳಿಸದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದರೆ ಸಾಕು.
-ಮುತ್ತಣ್ಣ ಭರಡಿ, ಸಾಮಾಜಿಕ ಕಾರ್ಯಕರ್ತ

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.