ಸಾಮಾಜಿಕ ಅಂತರವೇ ಕೋವಿಡ್ 19ಕ್ಕೆ ಪರಿಹಾರ
Team Udayavani, Mar 29, 2020, 5:05 PM IST
ಗದಗ: ಕೋವಿಡ್ 19 ಬಗ್ಗೆ ಜಿಲ್ಲೆಯಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿದೆ. ಆದರೆ ಗದಗ-ಬೆಟಗೇರಿ ಅವಳಿ ನಗರದಲ್ಲಿ ಈ ಬಗ್ಗೆ ಗಂಭೀರತೆ ಕಾಣಿಸುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತೀವ್ರ ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎಂಬ ಮಹಾಮಾರಿ ದೇಶಾದ್ಯಂತ ಆತಂಕ ಸೃಷ್ಟಿಸಿದೆ. ಸೋಂಕು ಒಬ್ಬರಿಂದ ಒಬ್ಬರಿಗೆ ಹರಡಬಾರದು ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವನ್ನೇ ಲಾಕ್‌ಡೌನ್ ಮಾಡಿದ್ದಾರೆ. ಅದರಂತೆ ಗದಗ ಜಿಲ್ಲಾಡಳಿತವೂ ಮನೆ ಮನೆಗೆ ತರಕಾರಿ, ಪಡಿತರ ತಲುಪಿಸುವ ಪ್ರಯತ್ನ ನಡೆಸುತ್ತಿದೆ. ಆದರೂ ಕೆಲವರು ಬೇಕಾಬಿಟ್ಟಿಯಾಗಿ ಅಲೆದಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೋವಿಡ್ 19 ವೈರಸ್‌ಗೆ ಇನ್ನೂ ಔಷಧ ಲಭ್ಯವಾಗಿಲ್ಲ. ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಸದ್ಯಕ್ಕಿರುವ ಪರಿಹಾರ. ಹೀಗಾಗಿ ಮನೆಯಲ್ಲೇ ನಿಗಾಕ್ಕೆ ಒಳಗಾದವವರು ಸಾರ್ವಜನಿಕವಾಗಿ ಓಡಾಡಿ, ಸುಸೈಡ್ ಬಾಂಬರ್ ಆಗಬಾರದು ಎಂದು ಕಿಡಿಕಾರಿದರು.
ಸಾರ್ವಜನಿಕರ ಹಿತಕ್ಕಾಗಿ ಮುಂದಿನ ಆದೇಶದವರೆಗೆ ಜಿಲ್ಲೆಯಲ್ಲಿ ಮಾಂಸ, ಮೀನು ಹಾಗೂ ಮದ್ಯವನ್ನು ಸಂಪೂರ್ಣ ನಿಷೇಧಿ ಸಲಾಗಿದೆ. ಈ ಕ್ರಮವನ್ನು ಯಾವುದೇ ಸಮುದಾಯದ ಜನರು ಅನ್ಯತಾ ಭಾವಿಸದೇ ಸಹಕರಿಸಬೇಕು. ಅಗತ್ಯ ವಸ್ತುಗಳ ಕೃತಕ ಅಭಾವ ಸೃಷ್ಟಿಸುವವರು, ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ನಿರ್ಧಾಕ್ಷಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಸವಾಲ್ ಎದುರಿಸಲು ಸಿದ್ಧ: ಜಿಲ್ಲೆಯಲ್ಲಿ ಇಲ್ಲಿವರೆಗೆ 173 ಜನರು ನಿಗಾದಲ್ಲಿದ್ದು, 11 ಜನರು 28 ದಿನಗಳ ಅವಧಿ ಪೂರ್ಣಗೊಳಿಸಿದ್ದಾರೆ. 157 ಜನರು ಮನೆಯಲ್ಲೇ ನಿಗಾದಲ್ಲಿದ್ದಾರೆ. ಐವರು ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದೊಂದಿಗೆ ನಿಗಾದಲ್ಲಿದ್ದಾರೆ. 42 ಜನರ ಗಂಟಲಲು ದ್ರವ್ಯ ಮಾದರಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 37 ವರದಿಗಳು ನಕಾರಾತ್ಮಕವಾಗಿವೆ. ಇನ್ನುಳಿದ ಐದು ಪ್ರಕರಣಗಳೂ ನಕಾರಾತ್ಮಕವಾಗಿ ಬರಲಿ ಎಂದು ದೇವರಲ್ಲಿ ಪ್ರಾಥಿಸುತ್ತೇನೆ.
ಆದರೂ ಸಹ ಮುಂಬರುವ ದಿನಗಳಲ್ಲಿ ಎದುರಾಗ ಬಹುದಾದ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಜಿಲ್ಲಾಸ್ಪತ್ರೆ ಪಕ್ಕದಲ್ಲಿ ನಿರ್ಮಾಣ ಗೊಂಡಿರುವ ಆಯುಷ್ ಇಲಾಖೆಯ ಆಸ್ಪತ್ರೆ ಕಟ್ಟಡದಲ್ಲಿ 100 ಬೆಡ್‌ಗಳಿಗೆ ಕೃತಕ ಉಸಿರಾಟದ ಸೌಲಭ್ಯದೊಂದಿಗೆ ಸಿದ್ಧಗೊಳಿಸಲಾಗಿದೆ. ಜೊತೆಗೆ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರರನ್ನು ಮಲ್ಲಸಮುದ್ರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತ್ಯೇಕವಾಗಿರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್‌ಪಿ ಯತೀಶ್ ಎನ್., ಜಿಪಂ ಸಿಇಒ ಡಾ| ಆನಂದ ಕೆ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.