ಸಾಮೂಹಿಕ ವಿವಾಹಗಳಿಂದ ಸಾಮಾಜಿಕ ಪರಿವರ್ತನೆ
ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯಗಳಿಗೆ ಜಯ ಖಂಡಿತ
Team Udayavani, Dec 20, 2021, 6:15 PM IST
ಗಜೇಂದ್ರಗಡ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳು ಸೌಹಾರ್ದ ಕೇಂದ್ರಗಳಾಗಿ ಪರಿವರ್ತನೆ ಯಾಗಬೇಕಾದರೆ ಸಾಮೂಹಿಕ ವಿವಾಹದಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ನಡೆಸಬೇಕೆಂದು ಹೂವಿನ ಹಡಗಲಿ ಗವಿಮಠದ ಶಾಂತವೀರ ಸ್ವಾಮೀಜಿ ಹೇಳಿದರು.
ಸಮೀಪದ ಜಿಗೇರಿ ಗ್ರಾಮದಲ್ಲಿ ಲಿ. ಶ್ರೀ ಗುರುಸಿದ್ದೇಶ್ವರ ಶ್ರೀಗಳ 36ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು. ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು ಕಂಡುಕೊಳ್ಳಬಹುದು. ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸುತ್ತದೆ. ಮನುಷ್ಯ ಜೀವನದಲ್ಲಿ ಸರಳತೆ ಪಾಲಿಸಬೇಕು. ಅಂದಾಗ ಮಾತ್ರ ಜಿವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ ಎಂದರು.
ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೇನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯಗಳಿಗೆ ಜಯ ಖಂಡಿತ. ಇಂತಹ ಸಾಮಾಜಿಕ ಕಳಕಳಿಯಿಂದ ನಡೆಯುವ ಧರ್ಮ ಕಾರ್ಯಗಳು ಭಗವಂತನಿಗೆ ಇಷ್ಟ. ಜೊತೆಗೆ ಸಮಾಜವನ್ನು ಈಗಲೂ ಕಾಡುತ್ತಿರುವ ವರದಕ್ಷಿಣೆ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
ಜೀಗೇರಿ ಗುರುಸಿದ್ದೇಶ್ವರ ಮಠದ ಗುರುಸಿದ್ದೇಶ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವರ ಹಿತ ಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕು. ಇತ್ತೀಚಿನ ದಿನಗಳಲ್ಲಿ ಸಾಮೂಹಿಕ ವಿವಾಹಗಳ ಸಂಖ್ಯೆ ಕ್ಷೀಣಿಸುತ್ತಿವೆ. ಹೀಗಾಗಿ, ಬಡ ಹಾಗೂ ಕೂಲಿಕಾರರಿಗೆ ವಿವಾಹಗಳು ಭಾರವಾಗಿ ಪರಿಣಮಿಸುತ್ತಿವೆ.
ಆದ್ದರಿಂದ ಸಮಾಜದಲ್ಲಿನ ಉಳ್ಳವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಮೂಲಕ ಶ್ರೀಸಾಮಾನ್ಯರಕಲ್ಯಾಣಕ್ಕೆ ನೆರವಾಗಬೇಕು. ಅಂದಾಗ ಮಾತ್ರ ಸಮಾಜದ ಲ್ಲಿನ ಕೀಳರಿಮೆ ಕಣ್ಮರೆಯಾಗಲು ಸಾಧ್ಯ ಎಂದರು.
ಇದೇ ಸಂದರ್ಭದಲ್ಲಿ 8 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಯಲಬುರ್ಗಾದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ, ಬೆಳದಟ್ಟಿ ಹಿರೇಮಠದ ಶಿವಸಂಗಮೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಒಪ್ಪತ್ತೇಶ್ವರ ಮಠದ ಒಪ್ಪತ್ತೇಶ್ವರ ಸ್ವಾಮೀಜಿ, ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಮುಖಂಡರಾದ ಮಿಥುನ್ ಪಾಟೀಲ, ಶರಣಪ್ಪ ದೊಣ್ಣೆಗುಡ್ಡ, ಮುದಿಯಪ್ಪ ಕರಡಿ, ಬಸವರಾಜ ಮೂಲಿಮನಿ, ಆರ್.ಕೆ.ಚವ್ಹಾಣ, ಅಂದಪ್ಪ ಬಿಚೂರ, ಶಶಿಧರ ಹೂಗಾರ, ನೀಲಪ್ಪ ಗುರಿಕಾರ, ಮಹಾಂತೇಶ ಪೂಜಾರ, ಪರಶು ರಾಮ ಚಿಲಝರಿ, ಮಲ್ಲಿಕಾರ್ಜುನ ಅವಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.