ತಿಂಗಳಲ್ಲಿ ಸಾರಿಗೆ ಸಿಬ್ಬಂದಿ ಬೇಡಿಕೆ ಈಡೇರಿಕೆ: ಸವದಿ
Team Udayavani, Jan 25, 2021, 5:20 PM IST
ಗದಗ: ಸಾರಿಗೆ ಸಂಸ್ಥೆ ನೌಕರರ 10 ಬೇಡಿಕೆಗಳಲ್ಲಿ ಪ್ರಮುಖ 9 ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದ್ದು, ಒಂದು ತಿಂಗಳಲ್ಲಿ ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014ರಿಂದ ಪ್ರಯಾಣಿಕರ ಟಿಕೆಟ್ ದರ ಹೆಚ್ಚಿಸಿಲ್ಲ. ಆದರೂ ವಿದ್ಯಾರ್ಥಿಗಳ ರಿಯಾಯಿತಿ ಪಾಸ್, ವಿಕಲಚೇತರು, ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಸೇವೆ ಒದಗಿಸಲಾಗುತ್ತಿದೆ. ಇದೆಲ್ಲದರ ಮಧ್ಯೆ ಸಾರಿಗೆ ಸಂಸ್ಥೆಯ ನಾಲ್ಕು ಸಂದರ್ಭದಲ್ಲಿ ನಾನು ಅಧಿಕಾರ ವಹಿಸಿಕೊಂಡಿದ್ದೇನೆ. ಕೋವಿಡ್ ನಿಂದಾಗಿ ಇಲಾಖೆಯ 1.34 ಲಕ್ಷ ಸಿಬ್ಬಂದಿಗೆ ಸಂಬಳ ಕೊಡಲು ಹಣ ಇರಲಿಲ್ಲ. ಏಳು ತಿಂಗಳವರೆಗೆ ಸಿಬ್ಬಂದಿ ಸಂಕಷ್ಟ ಎದುರಿಸಬೇಕಾಯಿತು.
ಈ ಬಗ್ಗೆ ಮುಖ್ಯಮಂತ್ರಿಗಳಗಮನ ಸೆಳೆದಿದ್ದರಿಂದ ಶೇ.70ರಷ್ಟು ಸಂಬಳವನ್ನು ಸರ್ಕಾರ ನೀಡಿದ್ದರಿಂದ ಐದು ತಿಂಗಳ ಸಂಬಳವನ್ನು ಸಿಬ್ಬಂದಿಗೆ ಬಿಡುಗಡೆ ಮಾಡಲಾಗಿದೆ. ರಮೇಶ್ ಜಾರಕಿಹೊಳಿ ಚಿಕ್ಕಮಗಳೂರಿಗೆ ಪರಿಶೀಲನೆ ಸಭೆಗೆ ಹೋಗಿದ್ದರು. ಈ ವೇಳೆ ಅನೇಕ ಸಚಿವರು, ಶಾಸಕರು ಅವರನ್ನು ಭೇಟಿಯಾಗುವುದು ಸ್ವಾಭಾವಿಕ. ನಾನೂ ಗದಗ ಬಂದಿದ್ದೇನೆ. ನನಗೂ ಸಚಿವರು, ಶಾಸಕರು ಭೇಟಿಯಾಗೋದು ಸಹಜ. ಆ ಭಾಗದ ಅಭಿವೃದ್ಧಿ ಕುರಿತು ಚರ್ಚೆ ಮಾಡಿದ್ದಾರೆ. ಅದನ್ನೇ ರೆಸಾರ್ಟ್ ರಾಜಕೀಯವೆಂದು ಪರಿಗಣಿಸಬಾರದು.
ಇದನ್ನೂ ಓದಿ:ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ
ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲರಿಗೂ ಸಚಿವರು ಆಗಬೇಕು, ಜನರ ಸೇವೆ ಮಾಡಬೇಕು ಎನ್ನುವ ಬಯಕೆ ಇರೋದು ತಪ್ಪಲ್ಲ. ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಸಣ್ಣಪುಟ್ಟ ವ್ಯತ್ಯಾಸಗಳಿರುತ್ತವೆ. ಅದನ್ನು ಸರಿಪಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.