ಕಳಸಾ-ಬಂಡೂರಿ ಯೋಜನೆ ಶೀಘ್ರ ಪ್ರಾರಂಭಿಸಿ: ಸ್ವಾಮೀಜಿ
Team Udayavani, Aug 1, 2020, 12:42 PM IST
ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಮಹದಾಯಿ ನ್ಯಾಯಾಧೀಕರಣ ನದಿ ನೀರು ಹಂಚಿಕೆ ಮಾಡಿ 2 ವರ್ಷ ಗತಿಸುತ್ತ ಸಾಕಷ್ಟು ವಿಳಂಬವಾಗಿದೆ. ಇನ್ನಾದರೂ ಶೀಘ್ರ ಯೋಜನೆ ಕಾಮಗಾರಿಗೆ ಅಗತ್ಯ ಟೆಂಡರ್ ಕರೆದು ಕೆಲಸ ಪ್ರಾರಂಭಿಸಲಿ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಶುಕ್ರವಾರ ನರಗುಂದ ಮಹದಾಯಿ ಹೋರಾಟ ವೇದಿಕೆ ವತಿಯಿಂದ ಪತ್ರಿಕಾ ಪ್ರಕಟನೆ ನೀಡಿದ ಅವರು, ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ನೀರಾವರಿ ಸಚಿವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಕಾಮಗಾರಿ ಪ್ರಾರಂಭಿಸುವಲ್ಲಿ ತುಂಬಾ ವಿಳಂಬವಾಗಿದೆ. ಜಲಸಂಪನ್ಮೂಲ ಸಚಿವರು ಮತ್ತು ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಬರುವ ಆಗಸ್ಟ್ ತಿಂಗಳ ಒಳಗಾಗಿ ಕಾಮಗಾರಿ ಪ್ರಾರಂಭಿಸಲು ಅಗತ್ಯ ಟೆಂಡರ್ ಪ್ರಕ್ರಿಯೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಉತ್ತಮ ಗುಣಮಟ್ಟ ಕಾಮಗಾರಿ ನಡೆಸುವಂತಹ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಬೇಕು. ಕಾರಣ ಈ ಯೋಜನೆಯಲ್ಲಿ ಉತ್ತರ ಕರ್ನಾಟಕದ ಜನರ ಭವಿಷ್ಯ ಅಡಗಿದೆ. ಯೋಜನೆ ಈ ಭಾಗದ ಜನರ ದಶಕಗಳ ಬೇಡಿಕೆಯಾಗಿದೆ. ಆಗಸ್ಟ್ ತಿಂಗಳೊಳಗೆ ಕಾಮಗಾರಿ ಪ್ರಾರಂಭಿಸದಿದ್ದರೆ ನಮ್ಮ ಹೋರಾಟ ಅಚಲವಾಗಿದೆ ಎಂದು ಸೊಬರದಮಠ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.