ಸ್ವಚ್ಛ ಮೇವ ಜಯತೆ: ಜನ ಜಾಗೃತಿ ರಥಕ್ಕೆ ಚಾಲನೆ
Team Udayavani, Jun 8, 2019, 2:46 PM IST
ಗದಗ: ಜಿಲ್ಲಾಡಳಿತ ಭವನದಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನದ ಜಾಗೃತಿ ರಥಕ್ಕೆ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಚಾಲನೆ ನೀಡಿದರು.
ಗದಗ: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ವಾತಾವರಣ ನಿರ್ಮಿಸಿ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಕುರಿತು ಜನ ಜಾಗೃತಿ ಮೂಡಿಸುವ ಸ್ವಚ್ಛ ಮೇವ ಜಯತೆ ಆಂದೋಲನದ ಜಾಗೃತಿ ರಥಕ್ಕೆ ಇಲ್ಲಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ಪ್ರತಿಯೊಂದು ಗ್ರಾಮಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಆಂದೋಲನದ ಮುಖ್ಯ ಉದ್ದೇಶ. ವೈಯಕ್ತಿಕ, ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆಯಿಂದಾಗುವ ಪ್ರಯೋಜನೆ ಹಾಗೂ ಜಲ ಸಂರಕ್ಷಣೆ, ನೀರಿನ ಮೂಲಗಳ ಪುನಶ್ಚೇತನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲಿ ಸ್ವಚ್ಛ ಮೇವ ಜಯತೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಗ್ರಾಮಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಮಂಜುಳಾ ಹುಲ್ಲಣ್ಣವರ, ರೂಪಾ ಅಂಗಡಿ, ಜಿ.ಪಂ. ಸಿ.ಇ.ಒ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಕೆ. ಪ್ರಾಣೇಶರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿರೂಪಾಕ್ಷ ರೆಡ್ಡಿ ಮಾದಿನೂರ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.