ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳ
Team Udayavani, Jan 15, 2020, 2:52 PM IST
ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕು ಕೇಂದ್ರದಲ್ಲಿ ಫೆ. 14ರಿಂದ 16ರ ವರೆಗೆ ಮೂರು ದಿನಗಳ ಕಾಲ ರಾಜ್ಯಮಟ್ಟದ ಯುವಜನ ಮೇಳ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆ ಹಾಗೂ ರೋಣ ಶಾಸಕ ಕಳಕಪ್ಪ ಬಂಡಿ ಅವರ ಉಪಸ್ಥಿತಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
2008- 09ರಲ್ಲಿ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳ ಯಶಸ್ವಿಯಾಗಿ ಜರುಗಿತ್ತು. ಇದೀಗ ಎರಡನೇ ಬಾರಿಗೆ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳ ಸಂಘಟಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ದಕ್ಷತೆಯಿಂದ ಕಾರ್ಯ ನಿರ್ವಹಿಸುವಂತೆ ನಿರ್ದೇಶಿಸಿದರು.
ಶಾಸಕ ಕಳಕಪ್ಪ ಬಂಡಿ ಮಾತನಾಡಿ, ರಾಜ್ಯ ಸರ್ಕಾರ ಈ ಬಾರಿಯ ರಾಜ್ಯಮಟ್ಟದ ಯುವ ಜನ ಮೇಳ ಜರುಗಿಸುವ ಅವಕಾಶವನ್ನು ಜಿಲ್ಲೆಯ ಗಜೇಂದ್ರಗಡ ಪಟ್ಟಣಕ್ಕೆ ನೀಡಿದೆ. ಗಜೇಂದ್ರಗಡ ಎಪಿಎಂಸಿ ಆವರಣದ ಮುಂಭಾಗದ ಬಯಲಲ್ಲಿ 3 ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಯುವಜನ ಮೇಳಕ್ಕೆ ನಾಲ್ಕು ವಿಭಾಗಗಳಿಂದ ಆಗಮಿಸುವ ಸ್ಪರ್ಧಾಳುಗಳಿಗೆ ಸಾರಿಗೆ, ವಸತಿ, ಊಟೋಪಹಾರ, ಸ್ಪರ್ಧಾ ಕಾರ್ಯಕ್ರಮಗಳ ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜವಾಬ್ದಾರಿಯುತವಾಗಿ ಸಂಬಂಧಿತ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ವೇದಿಕೆ, ಉದ್ಘಾಟನಾ ಸಮಾರಂಭ, ಆಹ್ವಾನ ಮುಂತಾದ ವಿಷಯಗಳಿಗೆ ಹೆಚ್ಚಿನ ಗಮನ ಹರಿಸಬೇಕು. ವಸತಿ ಕುರಿತಂತೆ ಸ್ಪರ್ಧಾಳುಗಳಿಗೆ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯವಸ್ಥೆ ಮಾಡಬೇಕು. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಸಮಿತಿಗಳನ್ನು ರಚಿಸಲು ಶಾಸಕರು ಸೂಚಿಸಿದರು.
ಸಾರಿಗೆಗಾಗಿ ಜಿಲ್ಲಾಡಳಿತ ಶಾಲಾ ಬಸ್‌ಗಳನ್ನು ಒದಗಿಸಲು, ನೋಂದಣಿ ಸಂದರ್ಭದಲ್ಲಿ ಸ್ಪರ್ಧಾಳುಗಳಿಗೆ ಗುರುತಿನ ಚೀಟಿ, ಕಾರ್ಯಕ್ರಮ ಮಾಹಿತಿ, ವಸತಿ, ಸಾರಿಗೆ ವ್ಯವಸ್ಥೆ ಕುರಿತು ಮಾಹಿತಿ ನೀಡಬೇಕು ಎಂದು ಶಾಸಕ ಕಳಕಪ್ಪ ಬಂಡಿ ತಿಳಿಸಿದರು.
ರಾಜ್ಯಮಟ್ಟದ ಯುವಜನ ಮೇಳದ ಸ್ವಾಗತ, ಸಂಘಟನಾ, ಹಣಕಾಸು, ವೈದ್ಯಕೀಯ, ಸ್ಮರಣ ಸಂಚಿಕೆ, ಸಾರಿಗೆ, ಪ್ರಚಾರ, ನೋಂದಣಿ, ನ್ಯಾಯ ನಿರ್ಣಯ, ಸ್ವತ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ, ಪೆಂಡಾಲ್, ಲೈಟಿಂಗ್, ಊಟೋಪಚಾರ,
ವಸತಿ, ಆಹ್ವಾನ ಪತ್ರಿಕೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ, ವಿಜೇತರಿಗೆ ನಗದು ಬಹುಮಾನ ಸೇರಿದಂತೆ ಮುಂತಾದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ್, ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಯುವಕ-ಯುವತಿಯರಿಗೆ ಸ್ಪರ್ಧೆ : ರಾಜ್ಯಮಟ್ಟದ ಯುವಜನ ಮೇಳದಲ್ಲಿ ಯುವಕರಿಗಾಗಿ 15 ಸ್ಪರ್ಧೆಗಳು ಹಾಗೂ ಯುವತಿಯರಿಗಾಗಿ 11 ಸ್ಪರ್ಧೆಗಳು ಜರುಗಲಿದ್ದು, ಒಟ್ಟು 260 ಯುವತಿಯರು ಹಾಗೂ 524 ಯುವಕರು, 15 ಜನ ನಿರ್ಣಾಯಕರು, 30 ಜನ ತಂಡದ ವ್ಯವಸ್ಥಾಪಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಬಿ. ವಿಶ್ವನಾಥ್ ಸಭೆಗೆ ಮಾಹಿತಿ ನೀಡಿದರು. ಯುವಕ ಯುವತಿಯರಿಗಾಗಿ ಭಾವಗೀತೆ, ಲಾವಣಿ ಪದ, ರಂಗಗೀತೆ ಮತ್ತು ಏಕಪಾತ್ರಾಭಿನಯ ಜರುಗಲಿವೆ. ಗುಂಪು ಸ್ಪರ್ಧೆಗಳಾದ ಗೀಗಿ ಪದ, ಕೋಲಾಟ, ಜಾನಪದ ನೃತ್ಯ, ಭಜನೆ, ಜಾನಪದ ಗೀತೆಗಳು ಏರ್ಪಡಲಿವೆ. ಯುವತಿಯರಿಗಾಗಿ ರಾಗಿ ಜೋಳ ಬೀಸುವ ಒನಕೆ ಪದ ಹಾಗೂ ಸೋಬಾನ ಪದಗಳ ಗುಂಪು ಸ್ಪರ್ಧೆ ನಡೆಯಲಿವೆ. ಯುವಕರಿಗಾಗಿ ವೀರಗಾಸೆ, ಡೊಳ್ಳು ಕುಣಿತ, ದೊಡ್ಡಾಟ, ಸಣ್ಣಾಟ, ಯಕ್ಷಗಾನ, ಚರ್ಮವಾದ್ಯ ಸ್ಪರ್ಧೆಗಳು ನಡೆಯಲಿದ್ದು, ವಿಭಾಗವಾರು ಆಯ್ಕೆಗೊಂಡ ಯುವ ಸ್ಪರ್ಧಾಳುಗಳು ಇವುಗಳಲ್ಲಿ ಭಾಗವಹಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.