ಸಮರ್ಪಕ ಬಸ್‌ ವ್ಯವಸ್ಥೆಗೆ ವಿದ್ಯಾರ್ಥಿಗಳ ಪ್ರತಿಭಟನೆ

Team Udayavani, Jan 29, 2020, 2:44 PM IST

00..

ಸಾಂಧರ್ಬಿಕ ಚಿತ್ರ

ರೋಣ: ತಾಲೂಕಿನ ಕೋತಬಾಳ, ಹಿರೇಹಾಳ, ನೈನಾಪುರ, ಮಾಡಲಗೇರಿ ಮಾರ್ಗವಾಗಿ ಸಂಚರಿಸುವ ರೋಣ-ನೈನಾಪುರ ಬಸ್‌ ಪ್ರತಿನಿತ್ಯ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಬರುತ್ತಿರುವುದನ್ನು ಖಂಡಿಸಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಹಿರೇಹಾಳ ಗ್ರಾಮದಲ್ಲಿ ಗದಗ-ಬಾಗಲಕೋಟೆ ಬಸ್‌ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಸನಗೌಡ ಅಚ್ಚನಗೌಡ್ರ ಮಾತನಾಡಿ, ನೈನಾಪುರ ಮಾಡಲಗೇರಿ ಗ್ರಾಮದಿಂದ ಪ್ರತಿನಿತ್ಯ ಸಂಚರಿಸುವ ರೋಣ-ನೈನಾಪುರ ಬಸ್‌ ನಿಗದಿತ ಸಮಯಕ್ಕೆ ಸಂಚರಿಸದೇ ಒಂದು ಗಂಟೆ ತಡವಾಗಿ ಸಂಚರಿಸುತ್ತಿದೆ. ಇದರಿಂದಾಗಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ತೊಂದರೆ ಉಂಟಾಗುತ್ತಿದೆ. ಬೆಳಗ್ಗೆ 8.15ಕ್ಕೆ ಮಾಡಲಗೇರಿ ಗ್ರಾಮಕ್ಕೆ ಆಗಮಿಸಬೇಕಿರುವ ಬಸ್‌ 9.15ಕ್ಕೆ ಬರುತ್ತಿದೆ. ಇದರಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಬಸ್‌ಗಾಗಿ ನಾವು ಕಾಯುತ್ತ ಕುಳಿತುಕೊಳ್ಳಬೇಕು. ಬಸ್‌ ತಡವಾಗಿ ಬರುತ್ತಿರುವ ಕಾರಣದಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲು ಸಾಧ್ಯವಾಗುತ್ತಿಲ್ಲ. ಕೆಲವೊಮ್ಮೆ ಬಸ್‌ ಬರುವುದೇ ಇಲ್ಲ. ಇಂತಹ ಸಂದರ್ಭದಲ್ಲಿ ನೈನಾಪುರ, ಮಾಡಲಗೇರಿ, ಕುರಹಟ್ಟಿ ಗ್ರಾಮಗಳ ವಿದ್ಯಾರ್ಥಿಗಳು ಐದು ಕಿ.ಮೀ ವರೆಗೂ ಕಾಲ್ನಡಿಗೆಯಲ್ಲಿ ಹಿರೇಹಾಳ ಗ್ರಾಮಕ್ಕೆ ನಡೆದುಕೊಂಡು ಬಂದು ರೋಣಕ್ಕೆ ತೆರಳಬೇಕು.

ಗದಗ-ಬಾಗಲಕೋಟ ಬಸ್‌ಗಳಲ್ಲಿ ಕೆಲವರು ಪಾಸ್‌ ಇರುವುದರಿಂದ ಬಸ್‌ನಲ್ಲಿ ಹತ್ತಿಸಿಕೊಳ್ಳುವುದಿಲ್ಲ. ಇದರಿಂದಾಗಿ ನಮಗೆ ಪ್ರತಿನಿತ್ಯ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಆಗುತ್ತಿಲ್ಲ. ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಹಲವು ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.  ಇದುವರೆಗೂ ಅಧಿಕಾರಿಗಳು ನಮ್ಮ ಸಮಸ್ಯೆಗೆ ಪರಿಹಾರ ನೀಡಿಲ್ಲ. ಶೀಘ್ರ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರೋಣ ಪಿಎಸ್‌ಐ ಪರಮೇಶ್ವರ ಕವಟಗಿ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸಲು ಯತ್ನಿಸಿದರು. ಸಾರಿಗೆ ಇಲಾಖೆ ಅಧಿಕಾರಿಗಳು ಬಂದು ಸಮಸ್ಯೆಬಗೆಹರಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟುಹಿಡಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿ ಸರ್ಪರಾಜ ಡಲಾಯತ್‌ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದುಕೊಂಡರು.

ರೇಣುಕಾ ಹೂಸೂರ, ಅನ್ನಪೂರ್ಣಾ ಮಿಟ್ಟಲಕೊಡ, ಪವಿತ್ರಾ ಭೀಮನಗೌಡ್ರ, ಭೀಮವ್ವ ಪೂಜಾರ, ಲಕ್ಷ್ಮೀ ಭೀಮನಗೌಡ್ರ, ಹನಮನಗೌಡ ಭೀಮನಗೌಡ್ರ, ಕುಮಾರ ಜೋಗಿ, ಮಹಾಗುಂಡಪ್ಪ ಬಾವಿ, ರಾಜೇಶ್ವರಿ ರಾಯನಗೌಡ್ರ, ಯಲ್ಲಮ್ಮ ಬಾವಿ,  ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.