ವಿದ್ಯಾರ್ಥಿಗಳ ನಡಿಗೆ ಶಾಲೆ ಕಡೆಗೆ

Team Udayavani, May 31, 2019, 11:43 AM IST

gadaga-tdy-1..

ಗದಗ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ನಗರದಲ್ಲಿ ನಡೆದ 'ಅಕ್ಷರ ಗುಡಿ' ಮೆರವಣಿಗೆಯನ್ನು ಒಕ್ಕಲಗೇರಿ 8ನೇ ನಂ. ಶಾಲೆಯಲ್ಲಿ ವಿದ್ಯಾರ್ಥಿನಿಯರು ಆರತಿ ಬೆಳಗಿ ಬರಮಾಡಿಕೊಂಡರು.

ಗದಗ: ಬೃಹತ್‌ ಗೋಪುರ… ಮೆರವಣಿಗೆಯುದ್ದಕ್ಕೂ ಕಲಾಮೇಳಗಳ ಝೇಂಕಾರ… ವಾದ್ಯಮೇಳಗಳನ್ನು ಬಾರಿಸಿದ ಅಧಿಕಾರಿಗಳು.. ಮೆರವಣಿಗೆ ಕಂಡು ಬೆರಗಾದ ಜನ…

ಇದು 2019-20ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ನಿಮಿತ್ತ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಗರದಲ್ಲಿ ನಡೆದ ‘ಅಕ್ಷರ ಗುಡಿ’ ವೈಭವದ ಮೆರವಣಿಗೆಯಲ್ಲಿ ಕಂಡುಬಂದ ದೃಶ್ಯ. ಸುಮಾರು 12 ಅಡಿ ಎತ್ತರದ ‘ಅಕ್ಷರ ಗುಡಿ’ ಶಾಲೆಗೆ ನಡಿ ಎಂಬ ಘೋಷ್ಯವಾಕ್ಯದೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಭೂಮರೆಡ್ಡಿ ವೃತ್ತದಲ್ಲಿರುವ ಜ| ತೋಂಟದಾರ್ಯ ವಿದ್ಯಾಪೀಠದ ಶ್ರೀ ಬಸವೇಶ್ವರ ಶಾಲೆಯಿಂದ, ಗಾಂಧೀ ಸರ್ಕಲ್, ಸ್ಟೇಷನ್‌ ರೋಡ್‌, ಟಾಂಗಾಕೂಟಾ, ಬಸವೇಶ್ವರ ವೃತ್ತ, ಮುಳಗುಂದ ನಾಕಾ ಮೂಲಕ ವಕ್ಕಲಗೆಠೀರಿ ಓಣಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 8ಕ್ಕೆ ತಲುಪಿ ಸಂಪನ್ನಗೊಂಡಿತು.

ಅದ್ಧೂರಿ ಮೆರವಣಿಗೆ: ‘ಅಕ್ಷರ ಗುಡಿ’ ರಥ ಯಾತ್ರೆಗೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಡೊಳ್ಳು ಕುಣಿತ, ಜಾಂಜ್‌ ಮೇಳ ಸೇರಿದಂತೆ ವಿವಿಧ ಕಲಾ ತಂಡಗಳ ಹಿಮ್ಮೇಳ ಮೆರವಣಿಗೆಗೆ ಮೆರಗು ನೀಡಿತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಅವಳಿ ನಗರದ ವಿವಿಧ ಶಾಲಾ- ಕಾಲೇಜಿನ ನೂರಾರು ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಸಾರುವ ಜಯಘೋಷಣೆ ಮೊಳಗಿಸಿದರು.

ಅಕ್ಷರ ಗುಡಿ ರಥ ಸಾಗುತ್ತಿದ್ದ ಮಾರ್ಗದುದ್ದಕ್ಕೂ ಇಕ್ಕೆಲಗಳಲ್ಲಿ ಜನರು ನಿಂತು ಅಚ್ಚರಿಯಿಂದ ನೋಡುತ್ತಿದ್ದರು. ದೂರದಿಂದ ನೋಡಿದವರ ಯಾವುದೋ ಜಾತ್ರೆ, ಪಲ್ಲಕ್ಕಿ ಉತ್ಸವವೆಂದು ಊಹಿಸಿದವರಿಗೆ ಅಕ್ಷರ ಗುಡಿ ಅಚ್ಚರಿ ಮೂಡಿಸಿತು. ಅಕ್ಷರ ಗುಡಿ ಸಾಗಿ ಬರುತ್ತಿದ್ದಂತೆ ಇದು ಶಿಕ್ಷಣ ಇಲಾಖೆ ಪ್ರಚಾರ ರಥವೆಂದು ಉದ್ಗರಿಸುತ್ತಿದರು.

ಇದೇ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಡಿಡಿಪಿಐ ಎನ್‌.ಎಚ್. ನಾಗೂರ ಡೊಳ್ಳು ಬಾರಿಸಿದರೆ, ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರೆ ವಾದ್ಯಮೇಳಗಳೊಂದಿಗೆ ಸಾಥ್‌ ನೀಡಿದರು. ಅಲ್ಲದೇ, ಅಕ್ಷರ ಗುಡಿ ಸಾಗುವ ಮಾರ್ಗದುದ್ದಕ್ಕೂ ಸಾರ್ವಜನಿಕರಿಗೆ ಕರ ಪತ್ರಗಳನ್ನು ವಿತರಿಸಿ, ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಹಿಸಬೇಕು ಎಂದು ಮನವರಿಕೆ ಮಾಡಿಕೊಟ್ಟರು.

ಇಲ್ಲಿನ ಒಕ್ಕಲಗೇರಿ ಸರಕಾರಿ ಪ್ರಾಥಮಿಕ ಶಾಲೆ ನಂ. 8ಕ್ಕೆ ತಲುಪಿ ‘ಅಕ್ಷರ ಗುಡಿ’ ರಥ ಯಾತ್ರೆ ಸಂಪನ್ನಗೊಂಡಿತು. ಈ ವೇಳೆ ಶಾಲೆ ಶಿಕ್ಷಕಿಯರು, ವಿದ್ಯಾರ್ಥಿನಿಯರು ಆರತಿ ಬೆಳಗಿ ಬರಮಾಡಿಕೊಂಡರು.

ಮೆರವಣಿಗೆಯಲ್ಲಿ ರಥ ಎರಡೂ ಕಡೆ ಮಕ್ಕಳು ಹಿಡಿದ್ದಿ ಅಕ್ಷರ ಸಹಿತ ಚತ್ರಿ, ಛಾಮರಗಳು ನೋಡುಗರಿಗೆ ದೇವರ ಜಾತ್ರೆಯಂತೆ ಭಾಸವಾಯಿತು. ಅಲ್ಲದೇ, ಶಿಕ್ಷಣದ ಮಹತ್ವ ಸಾರುವ ಹಿನ್ನೆಲೆ ಗಾಯನದೊಂದಿಗೆ ಸಾಗುತ್ತಿದ್ದ ‘ಅಕ್ಷರ ಗುಡಿ’ ಪ್ರಯೋಗಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ಟಾಪ್ ನ್ಯೂಸ್

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.