ಕಪ್ಪತ್ತಗುಡ್ಡ ಪರಿಸರವಾದಿಗಳಿಗೆ ಸಿಕ್ತು ಜಯ

•ಸರಕಾರದಿಂದ ವನ್ಯಜೀವಿಧಾಮವಾಗಿ ಘೋಷಣೆ •ಸ್ಥಳೀಯರ ಹಲವು ದಶಕಗಳ ಹೋರಾಟ ಫಲ

Team Udayavani, May 18, 2019, 12:35 PM IST

gadaga-tdy-1..

ಮುಂಡರಗಿ: ಉತ್ತರ ರ್ಕಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡ.

ಮುಂಡರಗಿ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಖ್ಯಾತವಾಗಿರುವ ಕಪ್ಪತ್ತಗುಡ್ಡವನ್ನು ರಾಜ್ಯ ಸರಕಾರದ ಅರಣ್ಯ, ಜೀವವೈವಿಧ್ಯತೆ, ಪರಿಸರ ಇಲಾಖೆಯಿಂದ ವನ್ಯಜೀವಿಧಾಮವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ಕಪ್ಪತ್ತಗುಡ್ಡ ಉಳುವಿಗಾಗಿ ನಡೆದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇದು ಪರಿಸರ ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಸೃಷ್ಟಿಸಿದೆ.

ಹಲವು ದಶಕಗಳಿಂದ ಕಪ್ಪತ್ತಗುಡ್ಡದ ಜೌಷಧೀಯ ಸಸ್ಯ, ಜೀವವೈಧ್ಯತೆ, ಪರಿಸರ ಉಳಿಸಲು ಲಿಂಗೈಕ್ಯ ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಪ್ಪತ್ತಗುಡ್ಡದ ಹೋರಾಟಗಳು ನಡೆದಿತ್ತು. ಗದಗ ಭಾಗ ಸೇರಿದಂತೆ ರಾಜ್ಯದ ಹಲವಾರು ಪರಿಸರವಾದಿಗಳು ಭಾಗವಹಿಸಿದ್ದರು. ಇವರೆಲ್ಲರ ಪರಿಸರ ಹೋರಾಟ ತಾತ್ವೀಕ ಸುಖಾಂತ್ಯ ಕಂಡಂತಾಗಿದೆ.

ಕರ್ನಾಟಕ ಸರಕಾರದ ಅರಣ್ಯ, ಜೀವವೈವಿಧ್ಯತೆ, ಪರಿಸರ ಇಲಾಖೆ ಅಧಿಧೀನ ಕಾರ್ಯದರ್ಶಿ ಕೆ.ಆರ್‌. ರಮೇಶ ಅವರು ರಾಜ್ಯಪಾಲರ ಆದೇಶದ ಮೇರೆಗೆ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮವಾಗಿ ಘೋಷಣೆ ಮಾಡಿ ಮೇ 16ರಂದು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಕಪ್ಪತ್ತಗುಡ್ಡ ವನ್ಯಜೀವಿಧಾಮವು ರಾಜ್ಯದ ಸೆಕ್ಷನ್‌-26-ಎ(1)(ಬಿ)ಯ ವನ್ಯಜೀವಿ (ರಕ್ಷಣೆ) ಕಾಯ್ದೆ-1972ರನ್ವಯ ತಿದ್ದುಪಡಿ (2006). ಕೇಂದ್ರ ಕಾಯ್ದೆ-53ರ -1972ರನ್ವಯವಾಗಿ ಸೇಡ್ಯೂಲ್-1ರ ಪ್ರಕಾರ ಕಪ್ಪತ್ತಗುಡ್ಡ ವನ್ಯಜೀವಿಧಾಮವಾಗಿ ಘೋಷಣೆ ಮಾಡಲಾಗಿದೆ.

ಕಪ್ಪತ್ತಗುಡ್ಡ ವನ್ಯಜೀವಿಧಾಮದ ಪರಿಕಲ್ಪನೆ: ಜ. 9ರಂದು ರಾಜ್ಯ ವನ್ಯಜೀವಿ ಮಂಡಳಿಯ 11ನೇ ಸಭೆಯು ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದಾಗ ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಮುಂದುವರೆದಂತೆ ಕಪ್ಪತ್ತಗುಡ್ಡ ವನ್ಯಜೀವಿಧಾಮವಾಗಿ ಘೋಷಿಸಲ್ಪಟ್ಟಿತ್ತು. ಕಪ್ಪತ್ತಗುಡ್ಡವು ಜೀವವೈವಿಧ್ಯತೆ, ಅಪರೂಪದ ಸಸ್ಯಗಳು ಹಾಗೂ ಜೌಷಧೀಯ ಸಸ್ಯಗಳು ರಕ್ಷಿಸಬೇಕು. ಕಪ್ಪತ್ತಗುಡ್ಡದ ವನ್ಯಜೀವಿಧಾಮವು ಪರಿಸರದ ಜೀವಿವೈವಿಧ್ಯತೆ ಸೂಕ್ಷ ್ಮ ಪ್ರದೇಶವಾಗಿದೆ. ಜೀವವೈವಿಧ್ಯತೆಯ ಸಸ್ಯ ಸಂಪತ್ತು, ಅಮೂಲ್ಯ ಹಾಗೂ ವಿಶಿಷ್ಟತೆಯಿಂದ ಕೂಡಿದೆ. ಈ ವಿಶಿಷ್ಟವಾದ ಪರಿಸರ ವೈವಿಧ್ಯತೆಯನ್ನು ಮಾನವ ಸಮಾಜದ ಮುಂದಿನ ಪೀಳಿಗೆಗಾಗಿ ಕಾಯ್ದಿಡಲು ಸಂರಕ್ಷಣೆ ಮಾಡಬೇಕಿದೆ. ಜೀವವೈವಿಧ್ಯತೆ, ಸಸ್ಯವೈವಿಧ್ಯತೆ ಸಂಪತ್ತು ನಾಶವಾಗದಂತೆ ಕಾಪಾಡಬೇಕೆಂದು ಕಪ್ಪತ್ತಗುಡ್ಡ ವನ್ಯಜೀವಿಧಾಮ ಘೋಷಣೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕಂದಾಯ ಗ್ರಾಮಗಳು ವ್ಯಾಪ್ತಿಯಲ್ಲಿಲ್ಲ: ಕಪ್ಪತ್ತಗುಡ್ಡದ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಗದಗ, ಶಿರಹಟ್ಟಿ, ಮುಂಡರಗಿ ಭಾಗದ ಯಾವುದೇ ಕಂದಾಯ ಗ್ರಾಮಗಳು, ಪಟ್ಟಾ ಜಮೀನುಗಳು, ಕಂದಾಯ ಜಮೀನುಗಳು ಒಳಪಡುವುದಿಲ್ಲವೆಂದು ಸ್ಪಷ್ಟವಾಗಿ ಹೇಳಲಾಗಿದೆ.

ಜೊತೆಗೆ ಕಪ್ಪತ್ತಗುಡ್ಡದ ವನ್ಯಜೀವಿಧಾಮದ ವ್ಯಾಪ್ತಿಯು ಗದಗ, ಶಿರಹಟ್ಟಿ, ಮುಂಡರಗಿ ಸೇರಿದಂತೆ 24415.73 ಹೆಕ್ಟೇರ್‌ ಅಥವಾ 244.15 ಕಿಮೀ ಒಳಗೊಂಡಿದೆ. ಇದರಿಂದ ಈ ಭಾಗದ ಕಪ್ಪತ್ತಗುಡ್ಡದ ಪ್ರದೇಶದ ಸಂರಕ್ಷಣೆಯಲ್ಲಿ ಒಂದು ದೊಡ್ಡಮಟ್ಟದ ಬದಲಾವಣೆಯನ್ನು ಭವಿಷ್ಯದ ದಿನಗಳಲ್ಲಿ ಕಾಣಬಹುದಾಗಿದೆ. ಜೊತೆಗೆ ಕಪ್ಪತ್ತಗುಡ್ಡದ ಅಪರೂಪದ ಸಸ್ಯಗಳು, ಚಿರತೆ, ಕತ್ತೆ ಕಿರುಬ, ಜಿಂಕೆ,ನವಿಲುಗಳು, ಕಾಡು ಹಂದಿಗಳು ಸೇರಿದಂತೆ ಈ ಪರಿಸರದಲ್ಲಿರುವ ಪ್ರತಿಜೀವಿಗಳಿಗೆ ಬದುಕಲು ಮುಕ್ತವಾದ ವಾತಾವರಣವು ಪ್ರಾಪ್ತಿಯಾಗಲಿದೆ.

.ಹು.ಬಾ. ವಡ್ಡಟ್ಟಿ

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.