Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
ಬೆಟಗೇರಿ ಬಡಾವಣೆ ಠಾಣೆ ಪೊಲೀಸರ ಕಾರ್ಯಕ್ಕೆ ಶ್ಲಾಘನೆ
Team Udayavani, Nov 2, 2024, 9:00 PM IST
ಗದಗ: ಬೆಟಗೇರಿ ಬಡಾವಣೆ ಠಾಣೆ ವ್ಯಾಪ್ತಿಯ ಎಪಿಎಂಸಿ ವರ್ತಕರಿಂದ ಒಣಮೆಣಸಿನಕಾಯಿ ಖರೀದಿಸಿ ಮೆಣಸಿನಕಾಯಿ ಚೀಲಗಳನ್ನು ತೆಗೆದುಕೊಂಡು ಹೋಗಿ ಹಣ ಕೊಡದೇ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ವಶಕ್ಕೆ ಪಡೆದು ಸೂರತ್ ನಲ್ಲಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ರೂ. ಮೌಲ್ಯದ 226 ಒಣಮೆಣಸಿನಕಾಯಿ ಚೀಲಗಳನ್ನು ಪತ್ತೆ ಮಾಡಲಾಗಿದೆ.
ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಖರೀದಿಸಿದಂತೆ ಮಾಡಿ ಮೆಣಸಿನಕಾಯಿ ಚೀಲಗಳನ್ನು ತೆಗೆದುಕೊಂಡು ಹೋಗಿ ಹಣ ಕೊಡದೇ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಮೋಸ ಮಾಡಿ ತೆಗೆದುಕೊಂಡು ಹೋದ ಒಣಮೆಣಸಿನಕಾಯಿ ಚೀಲಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಕೈಕೊಂಡಿದ್ದರು.
ಮೋಸ ಮಾಡಿ ತೆಗೆದುಕೊಂಡು ಹೋದ ಒಣಮೆಣಸಿನಕಾಯಿ ಚೀಲಗಳ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಒಂದು ವಿಶೇಷ ತಂಡ ರಚನೆ ಮಾಡಿದ್ದರು.
ಹೆಚ್ವುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ ಜಿ.ಎಚ್. ಇನಾಮದಾರ ಅವರ ಮಾರ್ಗದರ್ಶನದಲ್ಲಿ ಸಿಪಿಐ ಧೀರಜ್.ಬಿ. ಸಿಂಧೆ, ಪಿಎಸ್ಐ ಮಾರುತಿ ಜೋಗದಂಡಕರ ನೇತೃತ್ವದ ಅಧಿಕಾರಿಗಳ ತಂಡ ಗುಜರಾತ ರಾಜ್ಯದ ಸೂರತ್ನ ಉಮಾ ಕೋಲ್ಡ್ ಸ್ಟೋರೆಜ್ ದಲ್ಲಿ ಸಂಗ್ರಹಿಸಿಟ್ಟಿದ್ದ ₹6 ಲಕ್ಷ ಮೌಲ್ಯದ 226 ಒಣಮೆಣಸಿನಕಾಯಿ ಚೀಲಗಳನ್ನು ವಶಪಡಿಸಿಕೊಂಡು ತನಿಖಾ ಕಾರ್ಯ ಮುಂದುವರಿಸಿದ್ದಾರೆ.
ಘಟನೆ ಹಿನ್ನೆಲೆ: 2024ರ ಮೇ ತಿಂಗಳಿನಲ್ಲಿ ಗದಗ ಎಪಿಎಂಸಿಯ ನಾಜೀರಾ ಸಾದಿಕಸಹ್ಮದ್ ಖಾಜಿ ಎಂಬ ವರ್ತಕರಿಂದ ಗುಜರಾತ್ ರಾಜ್ಯದ ಬಾಬರಿ ಆನಂದ ಜಯಂತಿಲಾಲ್ ಹಾಗೂ ಬಾವಿನ್ ರೂಪರೆಲ್ಲಾ ಎಂಬುವವರು 6 ಲಕ್ಷ ಮೌಲ್ಯದ 226 ಚೀಲಗಳ ಒಣಮೆಣಸಿಕಾಯಿ ಖರೀದಿಸಿ ಹಣ ಕೊಡದೆ ನಾಪತ್ತೆಯಾಗಿದ್ದರು. ಈ ಕುರಿತು ಎಪಿಎಂಸಿ ವರ್ತರಕರಾದ ನಾಜೀರಾ ಅವರು ಬೆಟಗೇರಿ ಬಡಾವಣೆ ಠಾಣೆಯಲ್ಲಿ ದೂರು ದಾಖಲಿಸಿದದ್ದರು. ಒಣಮೆಣಸಿನಕಾಯಿ ಖರೀಸಿದ್ದ ಗುಜರಾತ್ ಮೂಲದ ವರ್ತಕರು ಸೂರತ್ನ ಉಮಾ ಕೋಲ್ಡ್ ಸ್ಟೋರೆಜ್ ನಲ್ಲಿ ಸಂಗ್ರಹಿಸಿಟ್ಟಿದ್ದರು. ಮಾಹಿತಿಯನ್ನು ಅರಿತ ಪೊಲೀಸರು ಸ್ಟೋರೇಜ್ ನಲ್ಲಿ ಸಂಗ್ರಹಿಸಿಟ್ಟಿದ್ದ ಒಣಮೆಣಸಿನಕಾಯಿಯನ್ನು ವಶಕ್ಕೆ ಪಡೆದು ಮರಳಿ ಗದಗನ ಗೋದಾಮಿನಲ್ಲಿ ಸಂರಕ್ಷಿಸಿಟ್ಟಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.