ಒಮಿಕ್ರಾನ್ ತಡೆಗೆ ಕಂಕಣ ತೊಡಿ: ಡಿಸಿ
Team Udayavani, Jan 2, 2022, 10:13 PM IST
ಗದಗ: ದೇಶಾದ್ಯಂತ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿ ಕಾರಿ ಎಂ.ಸುಂದರೇಶ್ ಬಾಬು ಅವರು ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶಾದ್ಯಂತ ಕೋವಿಡ್ -19ರ ಜೊತೆಗೆ ಓಮೆಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಆದರೂ, ಅ ಧಿಕಾರಿಗಳು ಮೈಮರೆಯದೇ ಸೋಂಕು ನಿಯಂತ್ರಣಕ್ಕಾಗಿ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜೊತೆಗೆ ಜಿಲ್ಲೆಯಲ್ಲಿ ಸೋಂಕು ಹರಡದಂತೆ ನಿಗಾ ವಹಿಸಬೇಕು ಎಂದು ಆದೇಶಿಸಿದರು.
ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಅಗತ್ಯ ಹಾಸಿಗೆ, ಔಷ ಧ ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಾಗದಂತೆ ನಿಗಾ ವಹಿಸಬೇಕು. ಸೋಂಕಿತರ ಚಿಕಿತ್ಸೆಗಾಗಿ ನೀಡಲಾಗುವ ಔಷಧ ಗಳ ಬಳಕೆಗೆ ಇರುವ ಅವ ಧಿಯನ್ನು ಪರಿಶೀಲಿಸಬೇಕು. ಜಿಲ್ಲೆಯಲ್ಲಿ ಸ್ಥಾಪಿತವಾಗಿರುವ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಮೇಲಿಂದ ಮೇಲೆ ಪರಿಶೀಲಿಸಬೇಕು. ಈಗಾಗಲೇ ತಾಲೂಕು ಆಸ್ಪತ್ರೆಗಳಿಗೆ ಒದಗಿಸಲಾದ ಆಕ್ಸಿಜನ್ ಸಿಲಿಂಡರ್ ಗಳನ್ನು ಭರ್ತಿ ಮಾಡಿಟ್ಟುಕೊಂಡು, ಆಕ್ಸಿಜನ್ ಸಾಂಧ್ರಕಗಳು ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಿ, ಸೋಂಕಿತರ ಚಿಕಿತ್ಸೆ ಸಮಯದಲ್ಲಿ ಆಕ್ಸಿಜನ್ ಕೊರತೆ ಆಗದಂತೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಮೊದಲ ಡೋಸ್ ಲಸಿಕೆ ಪಡೆದು, ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಪತ್ತೆ ಮಾಡುವುದರ ಜೊತೆಗೆ ಶೀಘ್ರವೇ ಎರಡನೇ ಡೋಸ್ ಲಸಿಕೆ ನೀಡಲು ಕಾರ್ಯ ಪ್ರವೃತ್ತರಾಗಬೇಕು. ಅಲ್ಲದೇ, ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಸಮೀಕ್ಷೆ ಹಾಗೂ ಸೋಂಕಿತರ ಸಂಪರ್ಕಿತರ ಪತ್ತೆ ಕಾರ್ಯವನ್ನು ತ್ವರಿತಗೊಳಿಸುವುದರ ಜೊತೆಗೆ ಪರೀûಾ ಗುರಿ ಸಾ ಧಿಸಬೇಕು. ಗಂಟಲು ದ್ರವದ ಮಾದರಿ ಸಂಗ್ರಹಕ್ಕಾಗಿ ಬೇಕಾದ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳುವುದರ ಮೂಲಕ ಜಿಲ್ಲೆಯಲ್ಲಿ ಸೋಂಕು ತೀವ್ರತರವಾಗಿ ಹರಡದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರದ ಮಾರ್ಗಸೂಚಿ ಅನುಸಾರ ಜಿಲ್ಲೆಯ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಅಗತ್ಯ ಕ್ರಮ ಜರುಗಿಸಬೇಕು. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಕುರಿತು ಶಾಲಾ ಆಡಳಿತ ಮಂಡಳಿ ಹಾಗೂ ಮಕ್ಕಳ ಪೊಷಕರೊಂದಿಗೆ ಸಭೆ ಜರುಗಿಸಿ ಅಗತ್ಯ ತಿಳಿವಳಿಕೆ ನೀಡಬೇಕು.
ಲಸಿಕಾಕರಣಕ್ಕೆ ಬೇಕಾದ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಿಟ್ಟುಕೊಂಡು ಸಾಕಷ್ಟು ಮುಂಚಿತವಾಗಿ ಲಸಿಕೆ ನೀಡುವ ಶಾಲೆಗೆ ಮಾಹಿತಿ ನೀಡಬೇಕು. ಇದರಲ್ಲಿ ಏನಾದರೂ ಲೋಪಗಳು ಕಂಡುಬಂದಲ್ಲಿ ತಾಲೂಕು ಆರೋಗ್ಯಾ ಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಳ್ಳುವ ಪೋಷಣ್ ಅಭಿಯಾನದಡಿ ಸ್ವಾಸ್ಥ Â ಮಕ್ಕಳ ಯೋಜನೆಯಡಿ ಕೈಗೊಳ್ಳಲಾಗುವ ಮಕ್ಕಳ ತೂಕ ಹಾಗೂ ಅಳತೆ ಕಾರ್ಯವನ್ನು ಯಶ್ವಸಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿ ಕಾರಿಗಳು ನಿಗಾ ವಹಿಸಬೇಕು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪೂರೈಸುವ ಆಹಾರ ಸಾಮಗ್ರಿಗಳನ್ನು ನಿಗದಿತ ಸಮಯದೊಳಗೆ ಅವರ ಮನೆಗೆ ತಲುಪಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಧಿಕಾರಿ ಎಂ. ಸುಂದರೇಶ್ ಬಾಬು ಸೂಚನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಸತೀಶ ಬಸರಿಗಿಡದ ಮಾತನಾಡಿ, ಸರ್ಕಾರದ ಮಾರ್ಗಸೂಚಿಗಳ ಅನುಸಾರ ಜಿಲ್ಲೆಯಲ್ಲಿ 15-18ರ ವರೆಗಿನ ಮಕ್ಕಳಿಗೆ ಲಸಿಕಾಕರಣಕ್ಕೆ ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ 15-18ರ ವರೆಗೆ ಸುಮಾರು 50 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಅಂದಾಜಿಸಲಾಗಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಸತೀಶ ಕುಮಾರ ಎಂ., ಉಪ ವಿಭಾಗಾ ಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ತಹಶೀಲ್ದಾರ್‌ರು, ತಾಲೂಕು ಆರೋಗ್ಯಾ ಧಿಕಾರಿಗಳು, ವಿವಿಧ ಇಳಾಖೆ ಅಧಿ ಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.