ಹದಗೆಟ್ಟ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಿ: ಡಿಸಿ


Team Udayavani, Oct 31, 2020, 1:10 PM IST

GADAGA-TDY-2

ಗದಗ: ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಸದ್ಯ ಮಳೆ ಕಡಿಮೆಯಾಗಿದ್ದರಿಂದ ಹದಗೆಟ್ಟಿರುವ ಎಲ್ಲ ರಸ್ತೆಗಳ ಸುಧಾರಣೆಗೆ ಮೊದಲ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ  ಎಂ.ಸುಂದರೇಶಬಾಬು ಸಂಬಂಧಿ ಸಿದ ಅಧಿ  ಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿವೆ. ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ರಸ್ತೆ ಸುಧಾರಣೆಗೆ ಸಂಬಂಧಿ  ಸಿದಂತೆ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದರು.

ಈಗಾಗಲೇ ಹಲವಾರು ಬಾರಿ ಸಭೆಗಳಲ್ಲಿ ರಸ್ತೆಗಳ ಗುಂಡಿ ಮುಚ್ಚುವ ಕುರಿತು ನಿರ್ದೇಶನಗಳನ್ನು ನೀಡಲಾಗಿದ್ದು, ಕೆಲವು ಅತೀ ಜನಸಂದಣಿ ಹಾಗೂ ವಾಹನ ಸಂಚಾರ ಇರುವ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿ, ಸಾರ್ವಜನಿಕ ಓಡಾಟಕ್ಕೆ ಕ್ರಮ ವಹಿಸಲಾಗಿದೆ. ಅತಿಯಾದ ಮಳೆಯಿಂದಾಗಿ ರಸ್ತೆಗಳ ದುರಸ್ತಿಗೆ ಅವಕಾಶಇಲ್ಲದಂತಾಗಿತ್ತು. ಆದರೆ, ಕಳೆದ ಒಂದು ವಾರದಿಂದ ಮಳೆ ಪೂರ್ಣ ಪ್ರಮಾಣದಲ್ಲಿ ನಿಂತಿದೆ. ಕೂಡಲೇ ಲೋಕೋಪಯೋಗಿ ಇಲಾಖೆ ತಮ್ಮ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದರು.

ಅದೇ ರೀತಿ,ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚು ವಾಹನ ಸಂಚಾರದ ರಸ್ತೆಗಳನ್ನು ಗುರುತಿಸಿ ಮೊದಲ ಹಂತದಲ್ಲಿ ಕೂಡಲೇ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೊಳ್ಳಬೇಕು. ಇತರೇ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚಿ ದುರಸ್ತಿಗೊಳಿಸಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು  ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಕೆ.ಯು. ಡಬ್ಲೂ.ಎಸ್‌. ವತಿಯಿಂದ ಒಳಚರಂಡಿ ಹಾಗೂ ಕೆ.ಯು.ಐ.ಡಿ.ಎಫ್‌.ಸಿ. ವತಿ ಯಿಂದ 24×7 ನೀರು ಸರಬರಾಜು ಅಭಿವೃದ್ಧಿ ಕಾಮಗಾರಿಗಳಿಂದ ಹಾಳಾದ ರಸ್ತೆಗಳನ್ನು ಪ್ರಥಮ ಆದ್ಯತೆ ಮೇರೆಗೆ ದುರಸ್ತಿಗೊಳಿಸಬೇಕು. ಅದೇ ರೀತಿ, ಗದಗ ಜಿಲ್ಲೆಗೆ ಸಂಬಂಧಿಸಿದ ನಗರದ ಹೊರವಲಯದಲ್ಲಿರುವ ಸಂಪರ್ಕ ರಸ್ತೆಗಳು ನಿರ್ವಹಣೆಯನ್ನು ರಾಜ್ಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ, ಕೆಶೀಪ್‌ ಹಾಗೂ ಲೋಕೋಪಯೋಗಿ ಇಲಾಖೆಗಳು ಹಾಳಾದ ರಸ್ತೆಗಳಲ್ಲಿ ಕೂಡಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಯಿತು. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರುದ್ರೇಶ ಎಸ್‌.ಎನ್‌., ಲೋಕೋಪಯೋಗಿ ಇಲಾಖೆ, ಕೆ.ಯು. ಡಬ್ಲೂ.ಎಸ್‌. ಮತ್ತು ಕೆ.ಯು.ಐ.ಡಿ.ಎಫ್‌.ಸಿ., ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು,ನಗರಸಭೆ ಅಭಿಯಂತರರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.