ಬದುಕುವ ಕಲೆ ಕಲಿಸಿದೆ ವೀರೇಶ್ವರ ಪುಣ್ಯಾಶ್ರಮ

ಕತ್ತಲನ್ನು ಪ್ರೀತಿಸಿ ಅಂಧ-ಅನಾಥ ಮಕ್ಕಳಿಗೆ ಬೆಳಕು ನೀಡಿದ ಉಭಯ ಶ್ರೀಗಳು: ಉಜ್ಜಯಿನಿ ಜಗದ್ಗುರು

Team Udayavani, Jun 17, 2022, 1:36 PM IST

12

ಗದಗ: ಬಹಳಷ್ಟು ಜನರು ಬೆಳಕನ್ನು ಪ್ರೀತಿ ಮಾಡುತ್ತಾರೆ. ಆದರೆ, ಉಭಯ ಶ್ರೀಗಳು ಕತ್ತಲನ್ನು ಪ್ರೀತಿ ಮಾಡಿ ಅಂಧ-ಅನಾಥ ಮಕ್ಕಳಿಗೆ ಬೆಳಕು ನೀಡಿದ್ದಾರೆ ಎಂದು ಉಜ್ಜಯಿನಿ ಪೀಠದ ಜ|ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಶ್ರೀಗಳು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ 78ನೇ ಪುಣ್ಯಸ್ಮರಣೋತ್ಸವ, ಪದ್ಮಭೂಷಣ ಡಾ|ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ 12ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಜಗತ್ತಿನಲ್ಲಿ ತ್ಯಾಗಿ, ಯೋಗಿ ಹಾಗೂ ಭೋಗಿಗಳಿದ್ದರೂ ಜನರು ತ್ಯಾಗಿ, ಯೋಗಿಗಳನ್ನು ಮರೆತಿಲ್ಲ. ಆದರೆ, ಭೋಗಿಗಳನ್ನು ಮರೆತಿದ್ದಾರೆ. ಭಗವಂತ ನೀಡಿದ ಕಷ್ಟಗಳಿಗೆ ಸಾಕಷ್ಟು ಜನರು ನರಳುತ್ತಾರೆ. ಉಭಯ ಗುರುಗಳಾದ ಪಂಡಿತ ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಕವಿ ಗವಾಯಿಗಳು ತಮ್ಮ ಅಂಧತ್ವವನ್ನು ಮರೆತು ನಕಾರಾತ್ಮಕವಾದ ಜೀವನವನ್ನು ಸಕಾರಾತ್ಮಕವಾಗಿ ಬದಲಾಯಿಸಿದ ಧೀಮಂತ ಉಭಯ ಗುರುಗಳಾಗಿದ್ದಾರೆ ಎಂದರು.

ಉಭಯ ಗುರುಗಳು ಅಂಗ ಪೂಜೆ ಮಾಡದೆ, ಲಿಂಗ, ಸಂಗೀತ, ಕಲೆಗಳನ್ನು ಪೂಜೆ ಮಾಡಿ ಅಂಧ-ಅನಾಥರಿಗೆ ದಾರಿ ತೋರಿಸುವ ಕೆಲಸ ಮಾಡಿದ್ದಾರೆ. ಬಹಳ ವರ್ಷಗಳ ನಂತರ ಪಂಚಾಕ್ಷರ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ, ನೂತನವಾಗಿ ನಿರ್ಮಾಣಗೊಂಡ ಗಡ್ಡಿ ತೇರಿನ ರಥೋತ್ಸವ ಜರುಗುತ್ತಿರುವುದು ಸಂತಸ ತಂದಿದೆ. ಉಭಯ ಗುರುಗಳ ಕನಸನ್ನು ಕಲ್ಲಯ್ಯಜ್ಜನವರು ನನಸಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸೂಡಿ ಜುಕ್ತಿಹಿರೇಮಠದ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ಯಲಬುರ್ಗಾದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಅಟ್ನೂರ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯರು, ಮೈನಳ್ಳಿಯ ಸಿದ್ಧೇಶ್ವರ ಶಿವಾಚಾರ್ಯರು, ಸವಣೂರಿನ ಚನ್ನಬಸವ ಶ್ರೀಗಳು, ಶಿಗ್ಗಾವಿಯ ಸಂಗನಬಸವ ಶ್ರೀಗಳು, ಬೈಲಹೊಂಗಲದ ಡಾ| ಮಹಾಂತಯ್ಯ ಸ್ವಾಮಿಗಳು ಆರಾದ್ರಿಮಠ, ಅಡವೀಂದ್ರಮಠದ ಮಹೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

ಪಂ| ರಾಜಗುರು ಗುರುಸ್ವಾಮಿ ಕಲಕೇರಿ, ಚಂದ್ರು ಬಾಳೀಹಳ್ಳಿಮಠ, ವೀರೇಶ ಕೂಗು, ಡಾ| ಸಂಗಮೇಶ್‌ ಕೊಳ್ಳಿಯವರ, ನಿಂಗಪ್ಪ ಕೆಂಗಾರ, ವಸಂತಗೌಡ್ರು ಪೋಲಿಸ್‌ಪಾಟೀಲ, ಅನೀಲ ಅಬ್ಬಿಗೇರಿ, ಪ್ರಶಾಂತ ಬಿ. ಶಾಬಾದಿಮಠ, ಜಯಕುಮಾರ ಹಿರೇಮಠ, ವಿ.ಎಸ್‌. ಮಾಳೇಕೊಪ್ಪಮಠ, ಪಿ.ಸಿ.ಹಿರೇಮಠ, ರಾಜಣ್ಣ ಹಂಗರಿಗಿ, ನಾಗಪ್ಪ ಚಿನಗೂಡಿ, ಪ್ರಶಾಂತ ನಾಯ್ಕರ ಅವರನ್ನು ಸನ್ಮಾನಿಸಲಾಯಿತು.

ಶ್ರೀಮಠದ ವ್ಯವಸ್ಥಾಪಕ ಹೇಮರಾಜ ಶಾಸ್ತ್ರೀಜಿ ಹೆಡಿಗ್ಗೊಂಡ ಉಪಸ್ಥಿತರಿದ್ದರು. ಇದೇ ವೇಳೆ ಗದುಗಿನ ಗುರುವರ್ಯ ವಿಡಿಯೋ ಸಿಡಿ ಹಾಗೂ ಮತ್ತೂಮ್ಮೆ ಹುಟ್ಟಿ ಬಾ ಗುರು ಪುಟ್ಟರಾಜ ಸಿಡಿ ಬಿಡುಗಡೆ ಮಾಡಲಾಯಿತು.

ಡಾ|ಪಂ|ಪುಟ್ಟರಾಜ ಕವಿಗವಾಯಿಗಳ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿಗಳು ವೇದಘೋಷ ಮಾಡಿದರು. ಮಲ್ಲಯ್ಯಸ್ವಾಮಿ ಹಿರೇಮಠ ಪ್ರಾರ್ಥಿಸಿ, ನಾಗಯ್ಯಶಾಸ್ತ್ರಿ ವಡಗೇರ ನಿರೂಪಿಸಿ, ವಿರೇಶ ಕೂಗು ಸ್ವಾಗತಿಸಿದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.