ಕಾರ್ಮಿಕರ ಬದುಕು ಕಟ್ಟಿಕೊಟ್ಟ ಸಿಐಟಿಯು

Team Udayavani, Jun 1, 2020, 5:02 AM IST

Gadaga-tdy-1

ಗಜೇಂದ್ರಗಡ: ದೇಶದಲ್ಲಿ ಕಾರ್ಮಿಕರ ಮೇಲೆ ಬಂಡವಾಳಶಾಹಿಗಳು ನಡೆಸುತ್ತಿದ್ದ ಶೋಷಣೆಯ ವಿರುದ್ಧ ಹೋರಾಡಿ ಕಾರ್ಮಿಕರಿಗೆ ನ್ಯಾಯ ಒದಗಿಸಿ ಅವರ ಬದುಕು ಕಟ್ಟಿಕೊಟ್ಟ ಸಿಐಟಿಯು ಸಂಘಟನೆ ಅರ್ಧಶತಕ ಪೂರೈಸುವ ಮೂಲಕ ಬಂಡವಾಳಶಾಹಿಗಳ ವಿರುದ್ಧ ಹೋರಾಡಲು ಇನ್ನೂ ಹೆಚ್ಚು ಬಲ ಪಡೆದುಕೊಂಡಿದೆ ಎಂದು ಕೃಷಿ ಕೂಲಿ ಕಾರ್ಮಿಕ ಸಂಘಟನೆ ತಾಲೂಕಾಧ್ಯಕ್ಷ ಬಾಲು ರಾಠೊಡ ಹೇಳಿದರು.

ಪಟ್ಟಣದ ಸಿಐಟಿಯು ಕಚೇರಿಯಲ್ಲಿ ನಡೆದ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟನೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 50 ವರ್ಷಗಳಲ್ಲಿ ದುಡಿಯುವ ವರ್ಗದ ಹಿತಾಸಕ್ತಿಗಾಗಿ ದೇಶದ ಸ್ವಾತಂತ್ರ್ಯ, ಏಕತೆ, ಸಮಗ್ರತೆ ಸಾರ್ವಭೌಮತ್ವಕ್ಕಾಗಿ ಇಡೀ ದೇಶದ ಕಾರ್ಮಿಕ ವರ್ಗವನ್ನು ಒಂದೇ ವೇದಿಕೆಯಡಿ ತರುವಲ್ಲಿ ಅವಿರತವಾಗಿ ಶ್ರಮಿಸಿ, ತ್ಯಾಗ ಬಲಿದಾನ ಮಾಡಿದ ಮುಂಚೂಣಿಯ ಸಂಘಟನೆ ಸಿಐಟಿಯು ಆಗಿದೆ. ಕಾರ್ಮಿಕರ ಪರವಾಗಿ ರಾಜಿರಹಿತ ಹೋರಾಟ ನಡೆಸಿದ ಕೀರ್ತಿ ನಮ್ಮ ಸಂಘಟನೆಗೆ ಸಲ್ಲುತ್ತದೆ ಎಂದರು.

ಕಾರ್ಮಿಕ ಸಂಘಟನೆ ಮುಖಂಡ ಪೀರು ರಾಠೊಡ ಮಾತನಾಡಿ, ದೇಶದ ಕಾರ್ಮಿಕರ ಹಿತಾಸಕ್ತಿಗಾಗಿ 1970 ಮೇ 27ರಿಂದ 30ರ ವರೆಗೆ ಕೋಲ್ಕತ್ತಾದಲ್ಲಿ ಜರುಗಿದ ಕಾರ್ಮಿಕರ ಐತಿಹಾಸಿಕ ಸಮ್ಮೇಳನದಲ್ಲಿ ಜನ್ಮ ತಾಳಿದ ಕೇಂದ್ರ ಕಾರ್ಮಿಕ ಸಂಘಟನೆಯೇ ಸಿಐಟಿಯು. ಪ್ರಸ್ತುತ ಸರ್ಕಾರಗಳು ಕಾರ್ಮಿಕ ವಿರೋಧಿ ಕಾನೂನಗಳ ಸುಗ್ರೀವಾಜ್ಞೆ ಜಾರಿಗೊಳಿಸುವ ಮೂಲಕ ಕಾರ್ಮಿಕರ ಜೀವನಕ್ಕೆ ಮರಣ ಶಾಸನ ಬರೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮ ಡಿವಾಳ ಸಮಾಜ ಅಧ್ಯಕ್ಷ ಮಹಾದೇವಪ್ಪ ಪವಾರ, ರುದ್ರಪ್ಪ ರಾಠೊಡ, ಅಲ್ಲಾಭಕ್ಷಿ ಮುಚ್ಚಾಲಿ, ಚೌಡಮ್ಮ ಯಲ್ಪು, ಕನಕಮ್ಮ ಮಾದರ, ರೇವಣಪ್ಪ ರಾಠೊಡ, ಶಾರದಮ್ಮ ರಾಠೊಡ, ಶಿವಾನಂದ ಬಡಿಗೇರ, ಸರಸ್ವತಿ ರಾಠೊಡ, ಅಶೋಕ ಪತ್ತಾರ, ಶಿವಾನಂದ ಮಡಿವಾಳರ, ಚಂದ್ರು ರಾಠೊಡ, ಗಣೇಶ ರಾಠೊಡ, ಶಿವಾನಂದ ಭೊಸಲೆ, ಕಳಕೇಶ ರಾಠೊಡ, ಈರವ್ವ ಮಾಳ್ಳೋತ್ತರ, ಶರಣಪ್ಪ ಬಡ್ಡಿ, ಗುರುಶಾಂತ ಹಿರೇಮಠ, ಮಲ್ಲಪ್ಪ ಮಾವಿನಗಿಡದ ಇದ್ದರು.

ಟಾಪ್ ನ್ಯೂಸ್

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.