“ಸಕಾಲ’ದಲ್ಲಿ “ಸೇವೆ’ ಒದಗಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Oct 17, 2020, 1:26 PM IST
ಗದಗ: ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ವಿಳಂಬ ಮಾಡದೇ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ಒದಗಿಸಬೇಕು. ಜಿಲ್ಲೆಯಲ್ಲಿ ಅವಧಿ ಮೀರಿ ಬಾಕಿ ಉಳಿದಿರುವ ಪ್ರಕರಣ ವಿಚಾರಣೆ ನಡೆಸಿ, ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯಗಳ ಸಕಾಲ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಕಾಲ ಸೇವೆ ನಾಗರಿಕರಿಗೆ ಸಮಯಬದ್ಧವಾಗಿ ನೀಡಿ, ಸಮರ್ಪಕಅನುಷ್ಠಾನಗೊಳಿಸಬೇಕು. ಸಕಾಲದಲ್ಲಿಸ್ವೀಕೃತವಾಗಿರುವ ಅರ್ಜಿ ವಿನಾಕಾರಣ ಅಥವಾ ಉದ್ದೇಶಪೂರಿತವಾಗಿತಿರಸ್ಕೃತಗೊಳಿಸಬಾರದು. ನಿಗದಿತ ಅವಧಿಯೊಳಗೆ ಅರ್ಜಿಗಳ ವಿಲೇವಾರಿ ಆಗುವಂತೆ ಕ್ರಮ ವಹಿಸಬೇಕು ಎಂದರು.
ಸಕಾಲ ಸೇವೆಯಲ್ಲಿ ತಾಂತ್ರಿಕ ದೋಷಗಳು ಉದ್ಭವಿಸಿದಲ್ಲಿ ಸಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಸಕಾಲ ಸೇವೆ ಒದಗಿಸುತ್ತಿರುವ ಇಲಾಖೆಯಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ಪ್ರತಿನಿತ್ಯ ಅಧಿಕಾರಿಗಳು ಕಚೇರಿಗೆ ಹಾಜರಾದ ತಕ್ಷಣ ಸಕಾಲ ಸೇವೆಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಸಕಾಲ ಸೇವೆ ನೀಡುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳು ತ್ವರಿತ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಚುರುಕಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಸಕಾಲ ಯೋಜನೆ ಯಶಸ್ವಿಗೊಳಿಸಬೇಕು ಎಂದರು.
ನಿರಂತರ ಮಳೆಯಿಂದ ಹಾನಿಯಾಗಿರುವ ಬೆಳೆಗಳ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೈಗೊಂಡಿರುವಜಂಟಿ ಬೆಳೆ ಸಮೀಕ್ಷೆ ಕಾರ್ಯ ಶೀಘ್ರವೇ ಪೂರ್ಣಗೊಳಿಸಬೇಕು. ಬೆಳೆ-ಮನೆಹಾನಿಯಾಗಿರುವ ಕುರಿತು ವರದಿ ಸಲ್ಲಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಮಳೆ ಪ್ರಮಾಣ ಕಡಿಮೆಯಾದ ನಂತರ ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆದೇಶಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಜಿಪಂ ಉಪ ಕಾರ್ಯದರ್ಶಿಬಿ.ಕಲ್ಲೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕವೀರಯ್ಯಸ್ವಾಮಿ ಬಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿ.ಎಲ್. ಬಾರಾಟಕೆ, ವಯಸ್ಕರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್ ಇದ್ದರು.
ಜಿಲ್ಲೆಯಲ್ಲಿ 45 ಇಲಾಖೆಗಳಲ್ಲಿ 524 ಸಕಾಲ ಸೇವೆ ಒದಗಿಸಲಾಗುತ್ತಿದ್ದು, ಸಕಾಲ ಅರ್ಜಿಗಳ ಸ್ವೀಕೃತಿಯಲ್ಲಿ ಇಳಿಕೆಯಾಗುತ್ತಿದೆ. ಅಲ್ಲದೇ ಕೆಲವು ಇಲಾಖೆಗಳಲ್ಲಿಶೂನ್ಯ ಅರ್ಜಿಗಳ ಸ್ವೀಕೃತಿಯಾಗಿರುವ ಬಗ್ಗೆ ಗಮನಿಸಲಾಗಿದೆ. ಸಂಬಂಧಿಸಿದ ಮೇಲಾಧಿಕಾರಿಗಳು ಕಚೇರಿಗಳಿಗೆ ಭೇಟಿ ನೀಡಿ ಸಕಾಲದಡಿ ಶೂನ್ಯ ಸ್ವೀಕೃತಿಗೆ ಕಾರಣಗಳ ಬಗ್ಗೆ ವರದಿ ನೀಡಬೇಕು. – ಎಂ. ಸುಂದರೇಶ ಬಾಬು, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.