ಹಿಜಾಬ್-ಕೇಸರಿ ವಿವಾದ ತಡೆಗೆ ಮುಂದಾಗಿ
ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ
Team Udayavani, Feb 12, 2022, 4:10 PM IST
ಗಜೇಂದ್ರಗಡ: ರಾಜ್ಯಾದ್ಯಂತ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕೋಮು ವಿಭಜನೆ ಉಂಟು ಮಾಡಿರುವ ಹಿಜಾಬ್-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಪದಾಧಿ ಕಾರಿಗಳು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸದ್ಯ ರಾಜ್ಯದಲ್ಲಿ ಎದ್ದಿರುವ ಈ ವಿವಾದಕ್ಕೆ ಸರಕಾರ ಹಾಗೂ ಕೋಮುವಾದಿ ಸಂಘಟನೆಗಳು ಕಾರಣಗಳಾಗಿವೆ. ರಾಜ್ಯ ಸರ್ಕಾರ ಇವುಗಳನ್ನು ಪೋಷಿಸುತ್ತಿರುವುದರಿಂದ ವಿದ್ಯಾರ್ಥಿಗಳ ನಡುವೆ ಉದ್ದೇಶ ಪೂರ್ವಕ ವಿಭಜನೆ ಸೃಷ್ಟಿಸಲಾಗುತ್ತಿದೆ.
ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸುವಂತಹ ಮತ್ತು ವಿದ್ಯಾರ್ಥಿ ಸಮುದಾಯವನ್ನು ಕೋಮುವಾದಿ ನೆಲೆಯಲ್ಲಿ ವಿಭಜನೆ ಮಾಡುವ ದುರುದ್ದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ತಲೆ ವಸ್ತ್ರಕ್ಕೆ ವಿರುದ್ಧವಾಗಿ ಕೇಸರಿ ಶಾಲು ಧರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವು ಹಿಂದುತ್ವದ ಮತೀಯ ವಾದಿ ಸಂಘಟನೆಗಳು ಮಾಡುತ್ತಿವೆ ಎಂದು ಟೀಕಿಸಿದರು.
ಇನ್ನು ಮುಸ್ಲಿಂ ಅಲ್ಪಸಂಖ್ಯಾತರಲ್ಲಿ ಹಿಂದುತ್ವ ಕೋಮುವಾದಿಗಳು ಮತ್ತು ರಾಜ್ಯ ಸರ್ಕಾರ ಸೃಷ್ಟಿಸಿರುವ ಆತಂಕದ ಪರಿಸ್ಥಿತಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಮತ್ತು ಜನತೆಯನ್ನು ಕೋಮುವಾದಿ ನೆಲೆಯಲ್ಲಿ ಕ್ರೋಢೀಕರಿಸಲು ಕೆಲವು ಮತಾಂಧ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇದರಿಂದ ಸಮಾಜದಲ್ಲಿ ಕೋಮು ಸೌಹಾರ್ಧತೆಗೆ ತೀವ್ರ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರವೇ ಸಂವಿಧಾನ ವಿರೋಧಿಯಾದ ಮತಾಂಧತೆಗೆ ಕುಮ್ಮಕ್ಕು ನೀಡುವ ಕಾಯ್ದೆಗಳ ಪರ ಕ್ರಮ ವಹಿಸುವ ಮೂಲಕ ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಕೆಲವು ಸಚಿವರು ಮತ್ತು ಶಾಸಕರು ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇವುಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಎಂ.ಆರ್. ಷಣ್ಮುಖ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್. ಹಡಪದ, ಫಯಜ್ ತೋಟದ, ಮಾರುತಿ ಚಿಟಗಿ, ಪೀರು ರಾಠೊಡ, ಬಾಲು ರಾಠೊಡ, ಮೈಬುಸಾಬ ಹವಾಲ್ದಾರ್, ಚನ್ನಪ್ಪ ಗುಗಲೋತ್ತರ, ನಜೀರ ಮಾಲ್ದಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.