ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗಿದೆ ಕಾನೂನು
ಬೀದಿ ಬದಿ ವ್ಯಾಪಾರಿಗಳು ದೇಶದ ಆರ್ಥಿಕ ಚಟುವಟಿಕೆಯಲ್ಲಿ ತಮ್ಮದೇ ಆದ ಸಂಪನ್ಮೂಲ ನೀಡುತ್ತಾ ಬಂದಿದ್ದಾರೆ.
Team Udayavani, Mar 5, 2022, 6:16 PM IST
ಗಜೇಂದ್ರಗಡ: ಮಳೆ-ಚಳಿ-ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ವಿಶಿಷ್ಟವಾಗಿದೆ. ಹಾಗಾಗಿ, ಅವರ ಹಿತರಕ್ಷಣೆಗೆ ಸರ್ಕಾರ ಹಲವಾರು ಕಾನೂನು ಹಾಗೂ ಯೋಜನೆಗಳನ್ನು ರೂಪಿಸಿದೆ ಎಂದು ಸಂಪನ್ಮೂಲ ವ್ಯಕ್ತಿ ಭೀಮಣ್ಣ ಹವಳಿ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪೌರಾಡಳಿತ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ದೀನ ದಯಾಳ್ ಅಂತ್ಯೋದಯ ಯೋಜನೆ ಡೆ-ನಲ್ಮ ಅಭಿಯಾನದಡಿ ಬೀದಿ ಬದಿ ವ್ಯಾಪಾರಸ್ಥರಿಗೆ ಹಾಗೂ ಪಟ್ಟಣ ಮಾರಾಟ ಸಮಿತಿ ಸದಸ್ಯರಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಈ ತರಬೇತಿ ಕಾರ್ಯಾಗಾರದಲ್ಲಿ ದೀನ ದಯಾಳ್ ಅಂತ್ಯೋದಯ ಯೋಜನೆಯಡಿ ನಗರ ಬೀದಿ ಬದಿ ವ್ಯಾಪಾರಸ್ಥರಿಗೆ ಆರೋಗ್ಯ, ಶುಚಿತ್ವ ಹಾಗೂ ಸಂಚಾರಿ ನಿಯಮಗಳ ಬಗ್ಗೆ ವಿವರವಾಗಿ ತಿಳಿಸಲಾಗಿದೆ. ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ ಮತ್ತು ಕಾಯ್ದೆ ಹಾಗೂ ಕಾನೂನಿನಡಿ ನಗರ ಬೀದಿ ವ್ಯಾಪಾರಿಗಳು ವ್ಯಾಪಾರ ಸಮಿತಿಯನ್ನು ಹೊಸದಾಗಿ ರಚಿಸಬೇಕಾಗಿದೆ.
ಹಾಗಾಗಿ, ಎಲ್ಲ ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿ ಹಾಗೂ ವ್ಯಾಪಾರ ಮಾರಾಟ ಪತ್ರವನ್ನು ಪಡೆಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ನಿಮ್ಮ ಎಲ್ಲ ದಾಖಲಾತಿಗಳನ್ನು ಪುರಸಭೆಗೆ ನೀಡಿ ಸರ್ಕಾರಿ ಸವಲತ್ತುಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.
ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ರಾಜ್ಯ ಸರ್ಕಾರ ವಿಶೇಷವಾಗಿ ಡೇ-ನಲ್ಮ್ ಯೋಜನೆಯಡಿ ಬೀದಿ ಬದಿ ಹಾಗೂ ತಳ್ಳು ಗಾಡಿ ವ್ಯಾಪಾರಿಗಳಿಗೆ ಅನೇಕ ಸೌಕರ್ಯಗಳನ್ನು ಕಲ್ಪಿಸುತ್ತಿದೆ. ಈ ದಿಸೆಯಲ್ಲಿ ಸಣ್ಣ ವ್ಯಾಪಾರಸ್ಥರು ಜಾಗೃತರಾಗಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಬದುಕನ್ನು ಹಸನು ಮಾಡಿಕೊಳ್ಳಬೇಕೆಂದರು.
ಬೀದಿ ಬದಿ ವ್ಯಾಪಾರ ಸಂಘಟನೆ ಅಧ್ಯಕ್ಷ ಬಾಷೇಸಾಬ ಕರ್ನಾಚಿ ಮಾತನಾಡಿ, ಇಂದಿನ ಆಧುನಿಕ ಯುಗದ ಪೈಪೋಟಿಯಲ್ಲಿ ದೊಡ್ಡ ದೊಡ್ಡ ಮಾಲ್‌ಗಳ ವೈಭವದ ಮಧ್ಯೆ ಬೀದಿ ಬದಿ ವ್ಯಾಪಾರಿಗಳು ದೇಶದ ಆರ್ಥಿಕ ಚಟುವಟಿಕೆಯಲ್ಲಿ ತಮ್ಮದೇ ಆದ ಸಂಪನ್ಮೂಲ ನೀಡುತ್ತಾ ಬಂದಿದ್ದಾರೆ.
ದೇಶದಲ್ಲಿ ನಾಲ್ಕು ಕೋಟಿಗೂ ಹೆಚ್ಚು ಹಾಗೂ ರಾಜ್ಯದಲ್ಲಿ 3 ಲಕ್ಷ ಬೀದಿ ಬದಿ ನೋಂದಾಯಿತ ವ್ಯಾಪಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಥಳೀಯ ಸಮಿತಿ ಹಾಗೂ ವ್ಯಾಪಾರಸ್ಥರ ನಡುವೆ ಸುಮಧುರ ಬಾಂಧವ್ಯ ಇರಬೇಕೆಂದರು. ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ಸ್ಥಾಯಿ ಸಮಿತಿ ಚೇರಮನ್ ಯು.ಆರ್. ಚನ್ನಮ್ಮನವರ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಜಬ್ಟಾರ ಅಹ್ಮದ, ಪುರಸಭೆ ಯೋಜನಾ ಧಿಕಾರಿ ಇಮಾಮ್ ಕಾಲ್ ನಾಯ್ಕರ್, ಪ್ರವೀಣ ರಾಠೊಡ, ಆನಂದ ಮಳಗಿ ಸೇರಿದಂತೆ ಟಿವಿಸಿ ಕಮಿಟಿ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.