ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ
ಹೆಮ್ಮೆಯ ಸೈನಿಕರು. ಅವರಿಗೆ ಪ್ರತಿಯೊಬ್ಬರು ಗೌರವ ನೀಡಬೇಕು
Team Udayavani, Oct 14, 2024, 2:32 PM IST
■ ಉದಯವಾಣಿ ಸಮಾಚಾರ
ನರಗುಂದ: ಹೆತ್ತ ತಾಯಿ ,ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು. ಈ ಎರಡನ್ನು ಎದೆಯಿಲ್ಲಿಟ್ಟು ಕಾಪಾಡಬೇಕು. ಪರಕೀಯರಿಂದ ಕಾರ್ಗಿಲ್ ಪ್ರದೇಶವನ್ನು ಕಾಪಾಡಿ ವಿಜಯ ಸಾಧಿಸಿ 25 ವರ್ಷಗಳು ಪೂರ್ಣಗೊಂಡಿವೆ. ಕಾರ್ಗಿಲ್ ವಿಜಯ ನಮ್ಮ ದೇಶದ ಹೆಮ್ಮೆ ಎಂದು ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.
ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಸ್ವಾತಂತ್ರ್ಯ ವೀರ ಬಾಬಾಸಾಹೇಬರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಪೂಜ್ಯ ಶ್ರೀ ಲಿಂ. ದೊರೆಸ್ವಾಮಿಗಳ ಪುಣ್ಯ ಸ್ಮರಣೋತ್ಸವ (ನಮ್ಮೂರ ಜಾತ್ರೆ-2024) ನಿಮಿತ್ತ ಕಾರ್ಗಿಲ್ ವಿಜಯೋತ್ಸವ 25ನೇ ವರ್ಷಾಚರಣೆ ಪ್ರಯುಕ್ತ ಚೊಳಚಗುಡ್ಡದಿಂದ ಸಾಗಿಬಂದ ಕಾರ್ಗಿಲ್ ಜ್ಯೋತಿ ರಥಯಾತ್ರೆ ಸ್ವಾಗತ ಹಾಗೂ 25 ಕಾರ್ಗಿಲ್ ಕಲಿಗಳಿಗೆ ಸನ್ಮಾನ ಮತ್ತು ಕಾರ್ಗಿಲ್ ಕಲಿಗಳ ಯಶೋಗಾಥೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ದೊರೆಸ್ವಾಮಿಮಠ ಸೈನಿಕರಿಗೆ ಗೌರವ ಸೂಚಿಸುವ ಸದುದ್ದೇಶದಿಂದ ವಿಶಿಷ್ಟ ಮತ್ತು ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಜನಜಾಗೃತಿ ಮೂಡಿಸುತ್ತಿದೆ. ಇದು ಇತಿಹಾಸದ ಪುಟಗಳಲ್ಲಿ ಅಜರಾಮರ ಎಂದು ಹೇಳಿದರು.
ಕಾರ್ಗಿಲ್ ಯುದ್ಧ ನಮ್ಮ ದೇಶದ ಹೆಮ್ಮೆಯ ಸಂಕೇತ. ಅದು ಸೈನಿಕರ ತ್ಯಾಗ ಬಲಿದಾನದ ಪ್ರತೀಕವಾಗಿದೆ. ಇಂದಿನ ಮಕ್ಕಳು, ಯುವಕರಲ್ಲಿ ನಾನು ನನ್ನದು ಎನ್ನುವ ಮನೋಭಾವ ಬಿಟ್ಟು ನಾವು ನಮ್ಮೊàರು ಎಂಬ ದೇಶಾಭಿಮಾನ ಬೆಳೆಯಬೇಕಿದೆ ಎಂದರು.
ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ದೇಶ ನನಗೇನು ಕೊಟ್ಟಿದೆ ಎನ್ನುವ ಬದಲಾಗಿ ದೇಶಕ್ಕೆ ನಾನೇನು ಮಾಡಿದೆ ಎಂದು ಅರಿತುಕೊಳ್ಳ ಬೇಕಾಗಿದೆ. ಯುವಕರಲ್ಲಿ ದೇಶಾಭಿಮಾನ ಬೆಳೆಸಬೇಕಾಗಿದೆ. ಅಂತಹ ಕಾರ್ಯವನ್ನು ಶ್ರೀಮಠ ಮಾಡುತ್ತಿರುವುದು ಅಭಿನಂದನೀಯ. ಎಲ್ಲರೂ ದೇಶದಲ್ಲಿ ಇಷ್ಟೊಂದು ಸುಭದ್ರವಾಗಿರುವುದಕ್ಕೆ ಮುಖ್ಯ ಕಾರಣ ನಮ್ಮ ಹೆಮ್ಮೆಯ ಸೈನಿಕರು. ಅವರಿಗೆ ಪ್ರತಿಯೊಬ್ಬರು ಗೌರವ ನೀಡಬೇಕು ಎಂದು ಹೇಳಿದರು.
ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಸ್ವಾಮಿಗಳು ಆಶೀರ್ವಚನ ನೀಡಿದರು. ಯುವ ದುರೀಣ ವಿವೇಕ ಯಾವಗಲ್ಲ, ಧಾರವಾಡ ಕಾರ್ಗಿಲ್ ಸ್ತೂಪದ ಅಧ್ಯಕ್ಷ ಚಂದ್ರಶೇಖರ ಅಮಿನಗಡ, ಬಸವರಾಜ ಮುಕ್ಕುಪ್ಪಿ, ಸಾವಿತ್ರಿ ಯಶವಂತ ಕೋಲಕಾರ,
ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಬಸಲಿಂಗಪ್ಪ ಮುಂಡರಗಿ, ವೆಂಕಪ್ಪ ಭಾವಿ, ವೀರನಗೌಡ ಪಾಟೀಲ, ಷಣ್ಮುಖಪ್ಪ ಹಳೆಹೊಳಿ, ಬಿ.ಬಿ. ಐನಾಪೂರ, ಚಂದ್ರು ದಂಡಿನ, ಪ್ರಕಾಶಗೌಡ ತಿರಕನಗೌಡ್ರ, ಪತ್ರಯ್ಯ ಹಿರೇಮಠ, ಗಂಗಯ್ಯ ವಸ್ತ್ರದ ಹಾಗೂ ಚೊಳಚಗುಡ್ಡ ಮತ್ತು ತಾಲೂಕಿನ ಎಲ್ಲ ಮಾಜಿ ಸೈನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.