ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ

Team Udayavani, Jan 24, 2017, 1:10 PM IST

7belmane3.jpg

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಹಾಗೂ ಯಾದವ ಸಮಾಜದವರಿಗೆ ಗೋವರ್ಧನಗಿರಿಯಾಗಿರುವ ಜಿಲ್ಲೆಯ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಿಸುವಂತೆ ಆಗ್ರಹಿಸಿ ಯಾದವ(ಗೊಲ್ಲ) ಜನಾಭಿವೃದ್ಧಿ ವೇದಿಕೆ ಪದಾಧಿಕಾರಿಗಳು ಮಠಾಧೀಶರ ನೇತೃತ್ವದಲ್ಲಿಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ತೋಂಟದಾರ್ಯ ಮಠದ ಆವರಣದಿಂದ ಆರಂಭವಾದ ರ್ಯಾಲಿ ಹುಯಿಲಗೋಳ ನಾರಾಯಣ ರಾವ್‌,  ಮಾರುಕಟ್ಟೆ ಪ್ರದೇಶ, ಮುಳಗುಂದ ನಾಕಾ ಮಾರ್ಗವಾಗಿ ಮಾರ್ಗವಾಗಿ ಜಿಲ್ಲಾಡಳಿತ ಭವನಕ್ಕೆ ತಲುಪಿತು. ಈ ವೇಳೆ ಟ್ರಾಕ್ಟರ್‌ನಲ್ಲಿ ಕಪ್ಪತ್ತಗುಡ್ಡ ಭಾವಚಿತ್ರದ ಮೆರವಣಿಗೆ ನಡೆಸಿ, ಸಂರಕ್ಷಿತ ಆದೇಶ ಹಿಂಪಡೆದಿರುವ ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. 

ಉತ್ತರ ಕರ್ನಾಟಕದ ಹೃದಯಭಾಗದಲ್ಲಿರುವ ಕಪ್ಪತ್ತಗುಡ್ಡ ಯಾದವ(ಗೊಲ್ಲ) ಸಮಾಜದವರು ಗೋವರ್ಧನಗಿರಿ ಎಂದೇ ನಂಬಿದ್ದಾರೆ. ರೋಗಿಗಳ ಪಾಲಿಗೆ  ಸಂಜೀವಿನಿಯಾಗಿರುವ ಕಪ್ಪತ್ತಗುಡ್ಡದ ರಕ್ಷಣೆಗೆ ನಾಡಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ವಾಪಸ್‌ ತೆಗೆದುಕೊಂಡಿರುವ ನಿರ್ಧಾರವನ್ನು ಬದಲಿಸಿ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು. 

ಕಪ್ಪತ್ತಗಿರಿಯ ಖಣಿಜ ಸಂಪತ್ತನ್ನು ಗುರಿಯಾಗಿಸಿಕೊಂಡ ದಕ್ಷಿಣ ಕೋರಿಯಾದ ಪೋಸ್ಕೋ ಕಂಪನಿ 65 ಸಾವಿರ ಕೋಟಿ ಬಂಡವಾಳ ಹಾಕಲು ಯೋಜನೆ ರೂಪಿಸಿತ್ತು. ತೋಂಟದ ಶ್ರೀಗಳ ನೇತೃತ್ವದ ಹೋರಾಟಕ್ಕೆ ಮಣಿದು ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಸದ್ಯ ಬಲೊªàಟಾ ಕಂಪನಿ ಖನಿಜಕ್ಕೆ ಕೈ ಹಾಕಲು ಹೊರಟಿದೆ. ಕಪ್ಪತ್ತಗುಡ್ಡ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಗಣಿಗಾರಿಕೆಗೆ ಅವಕಾಶ ಕೊಡಲು ಸಿದ್ಧವಿಲ್ಲ ಎಂದು ಒತ್ತಾಯಿಸಿದರು. 

ಪರಿಸರ ಸಮತೋಲನ ಉಳಿಯಬೇಕಾದರೆ ಶೇ. 33ರಷ್ಟು ಅರಣ್ಯ ಬೇಕು. ಜಿಲ್ಲೆಯಲ್ಲಿ ಶೇ. 6ರಷ್ಟು ಅರಣ್ಯ ಮಾತ್ರ ಇದೆ. ದೆಹಲಿಯಲ್ಲಿ ಉಲ್ಬಣಗೊಂಡ ವಾಯುಮಾಲಿನ್ಯ ಸಮಸ್ಯೆಯನ್ನು ಗದಗನಲ್ಲಿ ಉಂಟು ಮಾಡಲು ಬಿಡುವುದುದಿಲ್ಲ. ಸರ್ಕಾರ ವಿಳಂಬ ನೀತಿ ಅನುಸರಿಸದೇ, ಗಣಿಗಾರಿಕೆಗೆ ಅವಕಾಶ ಕಲ್ಪಿಸದೇ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸಬೇಕು ಎಂದು ಹೇಳಿದರು.  

ಜಿಲ್ಲಾಧಿಕಾರಿ ಮನೋಜ್‌ ಜೈನ್‌ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನರಗುಂದ ಪಂಚಗ್ರಹ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಮಲ್ಲಸಮುದ್ರಗಿರಿ ಓಕಾರೇಶ್ವರಮಠದ ಫಕ್ಕೀರೇಶ್ವರ ಸ್ವಾಮೀಜಿ ರ್ಯಾಲಿ ನೇತೃತ್ವ ವಹಿಸಿದ್ದರು. 

ಜೈ ಭೀಮ ರಾಜ್ಯ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಗಣೇಶ ಹುಬ್ಬಳ್ಳಿ, ಅಖುಲ ಕರ್ನಾಟಕ ಕಿಚ್ಚ ಸುದೀಪ ಅಭಿಮಾನಿ ಸಂಘದ ರವಿ ಅಣ್ಣಿಗೇರಿ, ಚನ್ನು ಹಿಡಿಮಠ, ಯಶ್‌ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಮಂಜುನಾಥ ದಾಮೋದರ, ಮುತ್ತು ಮುಶಿಗೇರಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.   

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.